ದುಬೈ: 2025ರ ಏಷ್ಯಾಕಪ್ ಟೂರ್ನಿಯಲ್ಲಿ ಮೊದಲ ಸಲ ಕಣಕ್ಕಿಳಿದ ಎಡಗೈ ವೇಗಿ ಅರ್ಶದೀಪ್ ಸಿಂಗ್, ತಾವಾಡಿದ ಮೊದಲ ಪಂದ್ಯದಲ್ಲೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅಪರೂಪದ ದಾಖಲೆ ಬರೆದಿದ್ದಾರೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

2025ರ ಏಷ್ಯಾಕಪ್ ಟೂರ್ನಿಯ 12ನೇ ಪಂದ್ಯದಲ್ಲಿ ಭಾರತ ಹಾಗೂ ಒಮಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ 21 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ.

ಇದು ಈ ಬಾರಿಯ ಏಷ್ಯಾಕಪ್ ಟೂರ್ನಿಯ ‘ಎ’ ಗುಂಪಿನಲ್ಲಿ ಮೂರನೇ ಗೆಲುವು ಎನಿಸಿಕೊಂಡಿದ್ದು, ಅಜೇಯವಾಗಿಯೇ ಭಾರತ ಸೂಪರ್ 4 ಹಂತ ಪ್ರವೇಶಿಸಿದೆ. ಇದೀಗ ಭಾರತ ತಂಡವು ಸೆಪ್ಟೆಂಬರ್ 21ರಂದು ಮತ್ತೊಮ್ಮೆ ಬದ್ದ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಇನ್ನು ಒಮಾನ್ ಎದುರಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ಗಳು ವಿಕೆಟ್ ಕಬಳಿಸಲು ಪರದಾಡಿದರು.

ಹೀಗಿರುವಾಗಲೇ ಮೊದಲ ಸಲ ಏಷ್ಯಾಕಪ್ ಟೂರ್ನಿಯಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದ ಅರ್ಶದೀಪ್ ಸಿಂಗ್ ಒಂದು ವಿಕೆಟ್ ಕಬಳಿಸಿದರು. ಇದರ ಜತೆಗೆ ಹೊಸ ಮೈಲಿಗಲ್ಲು ನೆಟ್ಟರು.

ಹೌದು, ಅರ್ಶದೀಪ್ ಸಿಂಗ್ ಇದೀಗ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ 100 ವಿಕೆಟ್ ಕಬಳಿಸಿದ ಭಾರತದ ಮೊದಲ ಬೌಲರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ.

ಅರ್ಶದೀಪ್ ಹೊರತುಪಡಿಸಿ ಭಾರತದ ಯಾವೊಬ್ಬ ಬೌಲರ್ ಕೂಡಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಮೂರಂಕಿ ಮೊತ್ತದ ವಿಕೆಟ್ ಕಬಳಿಸಿಲ್ಲ.

ಇನ್ನು ಇದಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತಿವೇಗವಾಗಿ 100 ವಿಕೆಟ್ ಕಬಳಿಸಿದ ವೇಗದ ಬೌಲರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಅರ್ಶದೀಪ್ ಸಿಂಗ್ ಕೇವಲ 64 ಪಂದ್ಯಗಳನ್ನಾಡಿ 100 ವಿಕೆಟ್ ಕಬಳಿಸಿದ್ದಾರೆ.

Source link
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಯಾವ ಭಾರತೀಯನೂ ಮಾಡಿರದ ದಾಖಲೆ ಬರೆದ ಅರ್ಶದೀಪ್ ಸಿಂಗ್!