Chalavadi Narayana Swamy Granted Interim Bail ವಾಲ್ಮೀಕಿ-ಕುರುಬ ದಂಗೆ ಹೇಳಿಕೆ ಪ್ರಕರಣ: ಚಲವಾದಿಗೆ ಜಾಮೀನು | Chalavadi Narayana Swamy Granted Interim Bail In Valmiki Kuruba Controversy Case

ವಾಲ್ಮೀಕಿ ಸಮಾಜದವರು ಕುರುಬರ ಮೇಲೆ ದಂಗೆ ಏಳಬೇಕು’ ಎಂಬ ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

ಬೆಂಗಳೂರು (ಸೆ.20): ‘ವಾಲ್ಮೀಕಿ ಸಮಾಜದವರು ಕುರುಬ ಸಮಾಜದವರ ಮೇಲೆ ದಂಗೆ ಏಳಬೇಕು’ ಎಂಬ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಕೇಸಿಗೆ ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಏನಿದು ವಿವಾದ?

ಕುರುಬ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರಿಸಬೇಕು ಎಂಬ ಬೇಡಿಕೆಯ ಸಂದರ್ಭದಲ್ಲಿ ಚಲುವಾದ ನಾರಾಯಣಸ್ವಾಮಿ, ವಾಲ್ಮೀಕಿ ಸಮಾಜದವರು ಕುರುಬರ ಮೇಲೆ ದಂಗೆ ಏಳಬೇಕು’ ಎಂಬ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ, ಈ ಹೇಳಿಕೆಯಿಂದ ಸಾಮಾಜಿಕ ಕಲಹಕ್ಕೆ ಕಾರಣವಾಯಿತು ಎಂದು ಆರೋಪಿಸಿ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಚಲವಾದಿ ನಾರಾಯಣಸ್ವಾಮಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರ ನೇತೃತ್ವದ ನ್ಯಾಯಾಲಯವು ವಿಚಾರಣೆ ನಡೆಸಿತು. ನ್ಯಾಯಾಲಯವು ಚಲವಾದಿ ನಾರಾಯಣಸ್ವಾಮಿಗೆ ಮಧ್ಯಂತರ ಜಾಮೀನು ನೀಡಿ, ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿತು. ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಲಾಗಿದೆ.

ಈ ಪ್ರಕರಣವು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕುರುಬ ಸಮುದಾಯದಿಂದ ಖಂಡನೆ ವ್ಯಕ್ತವಾಗಿದ್ದರೆ, ವಾಲ್ಮೀಕಿ ಸಮುದಾಯದ ಕೆಲವರು ಚಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಸಮರ್ಥಿಸಿದ್ದಾರೆ

Source link

Leave a Reply

Your email address will not be published. Required fields are marked *