
ಕೇಂದ್ರ ಸಚಿವ ವಿ. ಸೋಮಣ್ಣ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಜಾತಿ ಗಣತಿಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಇದು ಜನರ ನಂಬಿಕೆಯನ್ನು ಹಳಿ ತಪ್ಪಿಸುವ ಕೆಲಸವಾಗಿದ್ದು, ಇದಕ್ಕೆ ತಲೆಬುಡವಿಲ್ಲ ಎಂದು ಆರೋಪಿಸಿದ್ದಾರೆ. ಈ ವಿಚಾರದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ (ಸೆ.22): ಜಾತಿ ಗಣತಿ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಸಾಮಾನ್ಯ ಜನರ ನಂಬಿಕೆ, ವಿಶ್ವಾಸಗಳ ಹಳಿ ತಪ್ಪಿಸುವ ಕೆಲಸ ಮಾಡುತ್ತಿದೆ. ಆದ್ದರಿಂದ ಹೈಕೋರ್ಟ್ ಮಧ್ಯಪ್ರವೇಶ ಮಾಡಬೇಕು ಎಂದು ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಈ ಜಾತಿ ಗಣತಿಗೆ ತಲೆನೂ ಇಲ್ಲ, ಬುಡನೂ ಇಲ್ಲ. ಕಾಯ್ದೆಯಲ್ಲಿ ಅವಕಾಶನೇ ಇಲ್ಲ, ಆದರೂ ಅದೇನೋ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಅಂತ ಮಾಡಬಾರದನ್ನು ಮಾಡ್ತಿದ್ದಾರೆ, ಇದೊಂದು ಹಿಟ್ ಆ್ಯಂಡ್ ರನ್ ಸರ್ಕಾರ ಎಂದು ಆರೋಪಿಸಿದರು.
ಇದನ್ನೂ ಓದಿ: ಕೂಡಲಸಂಗಮ ಸ್ವಾಮೀಜಿ ವಿರುದ್ಧ ಸಿಡಿ ಬಾಂಬ್ ಹಾಕಿದ ಕಾಶೆಪ್ಪನವರ್!
ಕೇಂದ್ರ ಸರ್ಕಾರವೇ ದೇಶಾದ್ಯಂತ ಜನ ಗಣತಿ ಮಾಡುತ್ತಿದೆ. ಅಷ್ಟರಲ್ಲಿ ಸಿದ್ದರಾಮಯ್ಯ ಅವರು ಕೂಡ ರಾಜ್ಯದಲ್ಲಿ ಸಮೀಕ್ಷೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಇಂತಹ ಸಣ್ಣತನಗಳನ್ನು ಬಿಟ್ಟಿದ್ದರೆ ಹೀರೋ ಆಗುತ್ತಿದ್ದರು ಎಂದರು.
ಸಿದ್ದರಾಮಯ್ಯ ಎರಡನೇ ಅವಧಿಯಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಹಳ್ಳಿಗಾಡಿನ ಜನರು ಪರಸ್ಪರ ಜಗಳವಾಡುವಂತೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ಕೂಡಲಸಂಗಮ ಸ್ವಾಮೀಜಿ ವಿರುದ್ಧ ಸಿಡಿ ಬಾಂಬ್ ಹಾಕಿದ ಕಾಶೆಪ್ಪನವರ್!