Headlines

Caste Census Issue: ಜಾತಿ ಗಣತಿ ಸರ್ವರ್ ಸಮಸ್ಯೆ ನಿಜ, ಬಗೆಹರಿಸುತ್ತೇವೆ: ಸಚಿವ ರಾಮಲಿಂಗಾರೆಡ್ಡಿ | Caste Census Server Issue Is Real We Will Resolve It Ramalinga Reddy Gvd

Caste Census Issue: ಜಾತಿ ಗಣತಿ ಸರ್ವರ್ ಸಮಸ್ಯೆ ನಿಜ, ಬಗೆಹರಿಸುತ್ತೇವೆ: ಸಚಿವ ರಾಮಲಿಂಗಾರೆಡ್ಡಿ | Caste Census Server Issue Is Real We Will Resolve It Ramalinga Reddy Gvd



Caste Census Issue: ಜಾತಿ ಗಣತಿ ಸರ್ವರ್ ಸಮಸ್ಯೆ ನಿಜ, ಬಗೆಹರಿಸುತ್ತೇವೆ: ಸಚಿವ ರಾಮಲಿಂಗಾರೆಡ್ಡಿ | Caste Census Server Issue Is Real We Will Resolve It Ramalinga Reddy Gvd

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಸರ್ವರ್ ಸಮಸ್ಯೆ ಎದುರಾಗುತ್ತಿರುವುದು ನಿಜ. ಈ ಟೆಕ್ನಿಕಲ್ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ರಾಮನಗರ (ಸೆ.28): ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಸರ್ವರ್ ಸಮಸ್ಯೆ ಎದುರಾಗುತ್ತಿರುವುದು ನಿಜ. ಈ ಟೆಕ್ನಿಕಲ್ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಮೀಕ್ಷೆಗೆ ಕೇವಲ ಶಿಕ್ಷಕರು ಮಾತ್ರ ಸಾಕಾಗಲ್ಲ ಅಂತ ಬೇರೆ ಇಲಾಖೆ ಸಿಬ್ಬಂದಿಯನ್ನೂ ಗಣತಿಗೆ ಬಳಸಿಕೊಳ್ಳಲಾಗುತ್ತಿದ್ದು, ನಿಗದಿತ ಸಮಯಕ್ಕೆ ಗಣತಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಮಯ ವಿಸ್ತರಣೆ ಮಾಡಿ ಅಂತ ಶಿಕ್ಷಕರು ಮನವಿ ಮಾಡಿದ್ದಾರೆ. ಸದ್ಯ ಈಗ ಒಂದು ಟಾರ್ಗೆಟ್ ಕೊಟ್ಟಿದ್ದಾರೆ. ಆ ಅವಧಿಯೊಳಗೆ ಗಣತಿ ಮುಗಿಯಲಿಲ್ಲ ಅಂದರೆ ಸಹಜವಾಗಿ ಅವಧಿ ವಿಸ್ತರಣೆ ಮಾಡಬೇಕಾಗುತ್ತದೆ.

ಅವಧಿಯೊಳಗೆ ಗಣತಿ ಮುಗಿಯುವ ಸಾಧ್ಯತೆ ಇದ್ದು, ಒಂದು ವೇಳೆ ಸಮಯ ಸಾಕಾಗಲ್ಲ ಅಂದರೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಪಿಎಲ್ ಕಾರ್ಡ್ ರದ್ದು ಮಾಡುವುದು ರಾಜ್ಯ ಸರ್ಕಾರದ ಆದೇಶದಿಂದಲ್ಲ. ಕೇಂದ್ರ ಸರ್ಕಾರ ದೇಶಕ್ಕೆ ಹೊಸ ನೀತಿ ಅಳವಡಿಸುತ್ತಿದೆ. ಎಲ್ಲಾ ರಾಜ್ಯಗಳೂ ಅದನ್ನು ಅನುಸರಿಸುತ್ತಿವೆ. ಅನರ್ಹರಿಗೆ ಸವಲತ್ತು ಸಿಗಬಾರದು, ಅರ್ಹರಿಗೆ ಮಿಸ್ ಆಗಬಾರದು. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರ ಇಲ್ಲ. ಬಿಜೆಪಿಯವರು ಇದರಲ್ಲೂ ಚೇಷ್ಟೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ಅವಧಿಯಲ್ಲಿ 24 ದೇವಾಲಯ ಸೇವಾ ಶುಲ್ಕ ಪರಿಷ್ಕರಣೆ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಯಾವುದೇ ದೇವಸ್ಥಾನಗಳಲ್ಲಿ ಸೇವಾ ದರ ಏರಿಕೆಯಲ್ಲಿ ಸರ್ಕಾರದ ಪಾತ್ರವಿಲ್ಲ. 2019ರಿಂದ 2023ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 24 ದೇವಸ್ಥಾನಗಳ ಸೇವಾ ಶುಲ್ಕ ಪರಿಷ್ಕರಿಸಲಾಗಿತ್ತು. ಈಗ ಬಿಜೆಪಿ ನಾಯಕರು ಸುಳ್ಳುಗಳನ್ನು ಹರಡುತ್ತಿದ್ದಾರೆ ಎಂದು ಧಾರ್ಮಿಕ ದತ್ತಿ ಹಾಗೂ ಸಾರಿಗೆ ಸಚಿವ ಬಿ.ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಟೀಲು ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದರೂ, ಅಲ್ಲಿಗೆ ಸರ್ಕಾರ ಕಾರ್ಯ ನಿರ್ವಹಣಾಧಿಕಾರಿ ನೇಮಕ ಕೂಡ ಮಾಡುವಂತಿಲ್ಲ. ಆಡಳಿತವು ಸಂಪೂರ್ಣ ದೇವಸ್ಥಾನದ ಮಂಡಳಿಗೆ ಸೇರಿದ್ದು, ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ನ್ಯಾಯಾಲಯದ ಆದೇಶವೇ ಇದೆ.

ಹಾಗಾಗಿ ಅವರೇ ದರ ಪರಿಷ್ಕರಣೆ ಮಾಡಿದ್ದಾರೆ ಎಂದು ತಿಳಿಸಿದರು. 2010ರಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸೇವೆಗಳ ಶುಲ್ಕ ಹೆಚ್ಚಿಸುವಾಗ ಬಿಜೆಪಿ ಸರ್ಕಾರವಿತ್ತು. ಈಗ 2025ರಲ್ಲಿ ದರ ಪರಿಷ್ಕರಣೆಗೆ ಅವಕಾಶ ಮಾಡಿಕೊಡಿ ಎಂದು ಆಡಳಿತ ಮಂಡಳಿ ಮನವಿ ಮಾಡುವಾಗ ನಮ್ಮ ಸರ್ಕಾರವಿದೆ. ಹಾಗಂತ ಕಾಂಗ್ರೆಸ್‌ ಸರ್ಕಾರ ಹೆಚ್ಚು ಮಾಡಿದೆ ಎನ್ನುವುದು ಸರಿಯೇ ಎಂದು ಸಚಿವರು ಪ್ರಶ್ನಿಸಿದರು. 2003ರಲ್ಲಿ ಕಾಯಿದೆ ಜಾರಿಗೆ ಬಂದಂದಿನಿಂದ ಒಂದು ದೇವಸ್ಥಾನದ ಹಣವನ್ನು ಇನ್ನೊಂದು ದೇವಸ್ಥಾನಕ್ಕೂ ಕೊಡುವಂತಿಲ್ಲ. ಯಾವುದೇ ದೇವಸ್ಥಾನದ ಹಣ ಸರ್ಕಾರದ ಖಜಾನೆಗೂ ಬರುವುದಿಲ್ಲ. ರಾಜ್ಯದಲ್ಲಿ ಬಿಜೆಪಿಯವರೂ ಅಧಿಕಾರದಲ್ಲಿದ್ದರು. ಅವರಿಗೂ ಆ ವಿಷಯ ಗೊತ್ತಿದ್ದರೂ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.



Source link

Leave a Reply

Your email address will not be published. Required fields are marked *