IND vs WI: ಭರ್ಜರಿ ಜಯ… ಮೂರೇ ದಿನಕ್ಕೆ ಪಂದ್ಯ ಮುಗಿಸಿದ ಟೀಮ್ ಇಂಡಿಯಾ

IND vs WI: ಭರ್ಜರಿ ಜಯ… ಮೂರೇ ದಿನಕ್ಕೆ ಪಂದ್ಯ ಮುಗಿಸಿದ ಟೀಮ್ ಇಂಡಿಯಾ


ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಮೊದಲ ಇನಿಂಗ್ಸ್​​ನಲ್ಲಿ ಕೇವಲ 162 ರನ್ಗಳಿಗೆ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100), ಧ್ರುವ್ ಜುರೆಲ್ (125) ಹಾಗೂ ರವೀಂದ್ರ ಜಡೇಜಾ (104) ಶತಕ ಸಿಡಿಸಿದ್ದರು. ಶತಕಗಳ ನೆರವಿನೊಂದಿಗೆ ಭಾರತ ತಂಡ ಮೊದಲ ಇನಿಂಗ್ಸ್ನಲ್ಲಿ 5 ವಿಕೆಟ್ ನಷ್ಟಕ್ಕೆ 448 ರನ್​​ಗಳಿಸಿ ಡಿಕ್ಲೇರ್ ಘೋಷಿಸಿತು.

ಮೊದಲ ಇನಿಂಗ್ಸ್ನಲ್ಲಿನ 286 ರನ್​​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 24 ರನ್ಗಳಿಸುವಷ್ಟರಲ್ಲಿ ಆರಂಭಿಕರಾದ ತೇಜ್​​ನರೈನ್ ಚಂದ್ರಪಾಲ್ (8) ಹಾಗೂ ಜಾನ್ ಕ್ಯಾಂಪ್ಬೆಲ್ (14) ಪೆವಿಲಿಯನ್ ಸೇರಿದ್ದರು. ಇದರ ಬೆನ್ನಲ್ಲೇ ಬ್ರಾಂಡನ್ ಕಿಂಗ್ (5) ಸಹ ವಿಕೆಟ್ ಒಪ್ಪಿಸಿದ್ದರು.

ಇನ್ನು ನಾಯಕ ರೋಸ್ಟನ್ ಚೇಸ್ (1) ಹಾಗೂ ಶಾಯ್ ಹೋಪ್ (1) ಬಂದ ವೇಗದಲ್ಲೇ ಹಿಂತಿರುಗಿದ್ದರು. ಹಂತದಲ್ಲಿ ಜೊತೆಗೂಡಿದ ಅಲಿಕ್ ಅಥನಾಝ್ ಹಾಗೂ ಜಸ್ಟಿನ್ ಗ್ರೀವ್ಸ್ 50 ರನ್ಗಳ ಜೊತೆಯಾಟವಾಡಿದರು. ಇದೇ ವೇಳೆ ಮತ್ತೆ ದಾಳಿಗಿಳಿದ ವಾಷಿಂಗ್ಟನ್ ಸುಂದರ್ ಅಲಕ್ ಅಥನಾಝ್ (38) ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು.

ಇದರ ಬೆನ್ನಲ್ಲೇ ಜಸ್ಟಿನ್ ಗ್ರೀವ್ಸ್(25) ಜೋಮೆಲ್ ವಾರಿಕನ್ (0) ವಿಕೆಟ್ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ಬ್ಯಾಕ್ ಬ್ಯಾಕ್ ತಂದುಕೊಟ್ಟರು. ಇನ್ನು ಜೋಹಾನ್ (14) ರವೀಂದ್ರ ವಿಕೆಟ್. ಇದರ ಬೆನ್ನಲ್ಲೇ ಯಾದವ್, ಜೇಡನ್ ಸೀಲ್ಸ್ (22) ವಿಕೆಟ್.

ಇದರೊಂದಿಗೆ ವೆಸ್ಟ್ ಇಂಡೀಸ್ ದ್ವಿತೀಯ ಇನಿಂಗ್ಸ್ನಲ್ಲಿ 146 ರನ್ಗಳಿಗೆ. ಈ ಮೂಲಕ ಟೀಮ್ ಇನಿಂಗ್ಸ್ ಹಾಗೂ 140 ರನ್ಗಳ ಭರ್ಜರಿ. ಗೆಲುವಿನೊಂದಿಗೆ ಭಾರತ ತಂಡವು 2 ಪಂದ್ಯಗಳ ಸರಣಿಯಲ್ಲಿ 1-0 ಅಂತರದ.

ಭಾರತ ಪ್ಲೇಯಿಂಗ್ ಇಲೆವೆನ್: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸುದರ್ಶನ್, ಶುಭಮನ್ ಗಿಲ್ (),, ಧ್ರುವ್ ಜುರೆಲ್ ( ಕೀಪರ್), ನಿತೀಶ್ ಕುಮಾರ್, ರವೀಂದ್ರ ಜಡೇಜಾ, ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ: ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯ

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ತೇಜ್ನರೈನ್ ಚಂದ್ರಪಾಲ್, ಜಾನ್ಕ್ಯಾಂಪ್ಬೆಲ್, ಅಲಿಕ್ ಅಥನಾಝ್, ಬ್ರಾಂಡನ್ ಕಿಂಗ್, ಶಾಯ್ ಹೋಪ್ (ವಿಕೆಟ್ ಕೀಪರ್), ರೋಸ್ಟನ್ ಚೇಸ್ (ನಾಯಕ), ಜಸ್ಟಿನ್ ಗ್ರೀವ್ಸ್, ಜೋಮೆಲ್ ವಾರಿಕನ್, ಖಾರಿ ಪಿಯರೆ, ಜೋಹಾನ್ ಲೇನ್, ಜೇಡನ್ ಸೀಲ್ಸ್.



Source link

Leave a Reply

Your email address will not be published. Required fields are marked *