ಅವಕಾಶ ಸಿಕ್ಕರೆ ಡಿಕೆಶಿ ಸಿಎಂ ಆಗಬೇಕೆಂಬುದು ನಮ್ಮ ಬಯಕೆ: ಸಿ.ಪಿ.ಯೋಗೇಶ್ವರ್ | Dk Shivakumar Should Get Cm Opportunity Says Cp Yogeshwar Gvd

ಅವಕಾಶ ಸಿಕ್ಕರೆ ಡಿಕೆಶಿ ಸಿಎಂ ಆಗಬೇಕೆಂಬುದು ನಮ್ಮ ಬಯಕೆ: ಸಿ.ಪಿ.ಯೋಗೇಶ್ವರ್ | Dk Shivakumar Should Get Cm Opportunity Says Cp Yogeshwar Gvd



ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆ ರೀತಿಯ ಯಾವುದೇ ಚರ್ಚೆ ಇಲ್ಲ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ಅವರೇ ಪ್ರಸ್ತಾಪ ಮಾಡಿರೋದರಿಂದ ಅಂತಹ ಬೆಳವಣಿಗೆ ಏನು ಇಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಚನ್ನಪಟ್ಟಣ (ಜು.03): ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆ ರೀತಿಯ ಯಾವುದೇ ಚರ್ಚೆ ಇಲ್ಲ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ಅವರೇ ಪ್ರಸ್ತಾಪ ಮಾಡಿರೋದರಿಂದ ಅಂತಹ ಬೆಳವಣಿಗೆ ಏನು ಇಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿ, ಅವಕಾಶ ಸಿಕ್ಕಿರೆ ಡಿ.ಕೆ.ಶಿವಕುಮಾರ್ ಕೂಡಾ ಸಿಎಂ ಆಗಲಿ ಎಂಬುದು ನಮ್ಮೆಲ್ಲರ ಬಯಕೆ. ಅವರಿಗೆ ಅವಕಾಶ ಸಿಗಲಿ. ಆದರೆ ಈ ಬಗ್ಗೆ ಸುರ್ಜೇವಾಲಾ ಜೊತೆ ಯಾವುದೇ ಚರ್ಚೆ ಆಗಿಲ್ಲ. ಅವರು ಬದಲಾವಣೆ ಬಗ್ಗೆ ಯಾವುದೇ ಮಾತುಗಳನ್ನಾಡಿಲ್ಲ ಎಂದರು.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಇಕ್ಬಾಲ್ ಹುಸೇನ್ ಭಾವನಾತ್ಮಕವಾಗಿ ಆಗಿ ಏನೋ ಮಾತನಾಡಿದ್ದಾರೆ. ಸ್ವಾಭಾವಿಕವಾಗಿ ಎಲ್ಲರೂ ಅವರವರ ಅಭಿಪ್ರಾಯ ಹೇಳಿರುತ್ತಾರೆ. ಇಕ್ಬಾಲ್ ಹುಸೇನ್ ಮುಂದುವರಿದು ಮಾತನಾಡಿದ್ದಾರೆ. ನಮ್ಮ ಜಿಲ್ಲೆ ಮೇಲಿನ ಪ್ರೀತಿಯಿಂದ ಡಿಕೆಶಿ ಅವರಿಗೆ ಸಿಎಂ ಸ್ಥಾನ ಕೇಳಿದ್ದಾರೆ. ಆದರೆ ಬದಲಾವಣೆ ಬಗ್ಗೆ ಸದ್ಯಕ್ಕೆ ಚರ್ಚೆ ಇಲ್ಲ ಅನಿಸುತ್ತೆ ಎಂದರು.

ಡಿಕೆಶಿ ಎರಡೂವರೆ ವರ್ಷಗಳ ಅವಧಿಗೆ ಸಿಎಂ: ನೂರಕ್ಕೂ ಹೆಚ್ಚು ಶಾಸಕರು ಬದಲಾವಣೆ ಬಯಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಳಿದ ಎರಡೂವರೆ ವರ್ಷಗಳ ಅವಧಿಗೆ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದ ಮಂಜುನಾಥ ನಗರ – ಚಾಮುಂಡಿಪುರ ರಸ್ತೆ ಬಿಳಗುಂಬ ಸರ್ಕಲ್ ನಲ್ಲಿ 6.9 ಕೋಟಿ ರು. ವೆಚ್ಚದಲ್ಲಿ ಬಿಳಗುಂಬ – ಅರೇಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದರು.

ಡಿ.ಕೆ.ಶಿವಕುಮಾರ್ ರವರು ಮುಖ್ಯಮಂತ್ರಿಯಾಗಲು ಶಾಸಕರು ಬೆಂಬಲ ಕೊಡುತ್ತಾರೆ. ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕು ಅಷ್ಟೆ. ಕ್ಷೇತ್ರವನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಪಡಿಸಲು ಹಾಗೂ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂಬ ಒತ್ತಾಸೆಯಿಂದ ಸಾಕಷ್ಟು ಶಾಸಕರು ಬದಲಾವಣೆಯ ತೀರ್ಮಾನಕ್ಕೆ ಬಂದಿದ್ದಾರೆ. ಹಾಗಾಗಿ ಅವರ ಪರವಾಗಿ ಸಾಕಷ್ಟು ಶಾಸಕರು ಧ್ವನಿಗೂಡಿಸ್ತಾರೆ ಎಂದರು.

ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಪ್ರಮುಖ ಪಾತ್ರ : ರಾಜ್ಯದಲ್ಲಿ ಸಾಕಷ್ಟು ರೀತಿಯಲ್ಲಿ ಹೋರಾಟ ಮಾಡಿ ಡಿ.ಕೆ.ಶಿವಕುಮಾರ್ ರವರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಕಷ್ಟಕಾಲದಲ್ಲಿದ್ದ ಪಕ್ಷಕ್ಕೆ ಶಕ್ತಿ ತುಂಬಿ ಎತ್ತರಕ್ಕೆ ತೆಗೆದುಕೊಂಡು ಹೋದವರು. ಅವರು ಕೆಪಿಸಿಸಿ ಅಧ್ಯಕ್ಷರಾದಾಗ 75 ಶಾಸಕರಿದ್ದರು. ಈಗ ಅದರ ಸಂಖ್ಯೆ 136 ತಲುಪಿದೆ. ಮೇಕೆದಾಟು ಪಾದಯಾತ್ರೆ, ಭಾರತ್ ಜೋಡೊ, ಆರೋಗ್ಯ ಹಸ್ತ, ಸಹಾಯ ಹಸ್ತದಂತಹ ಸಾಕಷ್ಟು ಕಾರ್ಯಕ್ರಮಗಳನ್ನು ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಡಿ.ಕೆ.ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.



Source link

Leave a Reply

Your email address will not be published. Required fields are marked *