ದ್ವಿಭಾಷಾ ನೀತಿಗೆ ಕರವೇ ಒತ್ತಾಯ: ಹಿಂದಿ ಹೇರಿಕೆ ವಿರುದ್ಧ ಹೋರಾಟ, ಕರವೇ ಒತ್ತಾಯವೇನು? | Karave Protest Against Hindi Imposition Demands Two Language Policy Gow

ದ್ವಿಭಾಷಾ ನೀತಿಗೆ ಕರವೇ ಒತ್ತಾಯ: ಹಿಂದಿ ಹೇರಿಕೆ ವಿರುದ್ಧ ಹೋರಾಟ, ಕರವೇ ಒತ್ತಾಯವೇನು? | Karave Protest Against Hindi Imposition Demands Two Language Policy Gow



ಕರವೇ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ದ್ವಿಭಾಷಾ ನೀತಿ ಜಾರಿಗೆ ಬೃಹತ್ ಪ್ರತಿಭಟನೆ. ಹಿಂದಿ ಹೇರಿಕೆ ವಿರೋಧಿಸಿ ಸಿಎಂಗೆ ಪತ್ರ ಸಲ್ಲಿಕೆ. ತ್ರಿಭಾಷಾ ನೀತಿಯಿಂದ ವಿದ್ಯಾರ್ಥಿಗಳ ಮೇಲೆ ಒತ್ತಡ ಹೆಚ್ಚುತ್ತಿದೆ ಎಂದು ಕರವೇ ಆರೋಪ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರವೇ ಅಧ್ಯಕ್ಷ ಟಿ. ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ಒತ್ತಾಯಿಸುತ್ತಿರುವ ಕರವೇ, ತ್ರಿಭಾಷಾ ನೀತಿಗೆ ಕಠಿಣ ವಿರೋಧ ವ್ಯಕ್ತಪಡಿಸಿದೆ. ಹಿಂದಿ ಹೇರಿಕೆ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕರವೇ ನೇತೃತ್ವದಲ್ಲಿ ಧರಣಿ ನಡೆದಿದೆ. ಬಳಿಕ ದ್ವಿಭಾಷಾ ಶಿಕ್ಷಣ ನೀತಿ ಜಾರಿ ತರುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯಗೆ ನಾರಾಯಣಗೌಡ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಬೇಕು. ಹಿಂದಿ ಹೇರಿಕೆ ಮತ್ತು ದಬ್ಬಾಳಿಕೆಯನ್ನು ನಾವು ಸಹಿಸಲಾರೆವು.

ಮೊದಲಿನಿಂದಲೂ ಹಿಂದಿ ಹೇರಿಕೆ ಹಾಗೂ ಹಿಂದಿ ದಬ್ಬಾಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ವರ್ಷದ ಹಿಂದೆ ಲಕ್ಷಾಂತರ ಮಕ್ಕಳ ಭವಿಷ್ಯ ಹಿಂದಿ ಒತ್ತಡದಿಂದ ಹಾಳಾಗುತ್ತಿದೆ. ನಮ್ಮ ಮಕ್ಕಳ ಭವಿಷ್ಯ ನಾಶವಾಗಬಾರದು ಎಂಬ ಕಾರಣದಿಂದಲೇ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಅವರು ಹೇಳಿಕೆ ನೀಡಿದ್ದಾರೆ.

ಉತ್ತರ ಪ್ರದೇಶ, ಮಹಾರಾಷ್ಟ್ರ ಮುಂತಾದ ಕೆಲ ರಾಜ್ಯಗಳಲ್ಲಿ ಈಗಾಗಲೇ ದ್ವಿಭಾಷಾ ಶಿಕ್ಷಣ ವಿಧಾನವಿದೆ. ಕರ್ನಾಟಕದಲ್ಲಿ ಮಾತ್ರ ತ್ರಿಭಾಷಾ ಸೂತ್ರ ಏಕೆ ಬೇಕು? 1998ರಲ್ಲಿ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಲ್ಲಿ ದ್ವಿಭಾಷಾ ಬಳಕೆ ಆರಂಭವಾಯಿತು. ಮಹಾರಾಷ್ಟ್ರದಲ್ಲೂ ತ್ರಿಭಾಷಾ ಸೂತ್ರವನ್ನು ಕೈಬಿಟ್ಟು ದ್ವಿಭಾಷಾ ನೀತಿಗೆ ಅವಕಾಶ ನೀಡಿದರು. ನಾವು ಕೂಡ ದ್ವಿಭಾಷಾ ನೀತಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ.

ಭಾಷೆಗಳ ಆಧಾರದ ಮೇಲೆ ರಾಜ್ಯಗಳು ರಚನೆಗೊಂಡವು. ನಮ್ಮ ಭಾಷೆ ಮತ್ತು ಸಂಸ್ಕೃತಿಗೆ ಧಕ್ಕೆ ಬರುತ್ತಿದ್ದರೆ, ನಾವು ಸುಮ್ಮನೆ ಕುಳಿತಿರುವುದಿಲ್ಲ. ನಮ್ಮ ಹೋರಾಟ ತಪ್ಪದು. ಬೆಂಗಳೂರಿನಲ್ಲಿ ಆರಂಭವಾದ ಹೋರಾಟವನ್ನು ರಾಜ್ಯದ ಮೂಲೆ ಮೂಲೆಗೂ ತಲುಪಿಸೋಣ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಇದು ಎಚ್ಚರಿಕೆಯ ಸಂದೇಶವಾಗಿದೆ.”

ಪತ್ರದ ಸಾರಾಂಶ ಇಂತಿದೆ:

ಇವರಿಗೆ,

ಶ್ರೀ ಸಿದ್ಧರಾಮಯ್ಯನವರು

ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ, ವಿಧಾನಸೌಧ ಬೆಂಗಳೂರು

ಮಾನ್ಯರೆ,

ವಿಷಯ: ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಲು ಒತ್ತಾಯ.

ತಮಗೆ ತಿಳಿದಿರುವಂತೆ ಕರ್ನಾಟಕ ರಾಜ್ಯದ ಪಠ್ಯಕ್ರಮದಲ್ಲಿ ಸಾಧಾರಣವಾಗಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕನ್ನಡವನ್ನು, ದ್ವಿತೀಯ ಭಾಷೆಯಾಗಿ ಇಂಗ್ಲಿಷನ್ನು ಮತ್ತು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಸಲಾಗುತ್ತಿದೆ. ರಾಜ್ಯ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದು ಕಡ್ಡಾಯವಾಗಿದೆ, ಮಾತ್ರವಲ್ಲ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಿದೆ. ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡವನ್ನು ಒಡ್ಡುತ್ತಿದೆ. 2024ರ SSLC ಪರೀಕ್ಷೆಯಲ್ಲಿ 90,794 ವಿದ್ಯಾರ್ಥಿಗಳು ತೃತೀಯ ಭಾಷೆಯಾದ ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದಾರೆ, ಇದು ಒಟ್ಟು ವಿದ್ಯಾರ್ಥಿಗಳಲ್ಲಿ ಸುಮಾರು 21% ರಷ್ಟಿದೆ. 2025ರಲ್ಲಿ ಈ ಸಂಖ್ಯೆ: 1.2 ಲಕ್ಷಕ್ಕಿಂತ ಹೆಚ್ಚಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಇದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದೆ. ಇದು ಹಿಂದಿಯ ಕಡ್ಡಾಯ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಶೈಕ್ಷಣಿಕ ಹೊರೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ಹಿಂದಿ ಹೇರಿಕೆಗೆ ಕನ್ನಡದ ಮಕ್ಕಳ ಭವಿಷ ಬಲಿಯಾಗುತ್ತಿದೆ.

ತ್ರಿಭಾಷಾ ಸೂತ್ರದ ಕುರಿತು ರಾಷ್ಟ್ರಕವಿ ಕುವೆಂಪು ಅವರು ಹಿಂದೆಯೇ ತೀಕ್ಷ್ಮವಾದ ವಿರೋಧವನ್ನು ಸಾರಿದ್ದರು.

ಭಾಷಾ ತ್ರಿಶೂಲವೀ ತ್ರಿಭಾಷಾ ಸೂತ್ರ

ಬಾಲಕರ ರಕ್ಷಿಸೆ, ಹೇ ತ್ರಿಣೇತ್ರ |

ಚೂರು ತಿಂಡಿಗೆ ಸಿಕ್ಕಿಸಿಹರೂ ಈ ಮೂರು ಗಾಳ

ನುಂಗದಿದ್ದರೆ ಹಸಿವೆ; ನುಂಗಿದರೆ ಪ್ರಾಣ ಶೂಲ. ||

-ಕುವೆಂಪು

ಕರ್ನಾಟಕದ ಸಾಂಸ್ಕೃತಿಕ ಮತ್ತು ಭಾಷಿಕ ಅಸ್ಮಿತೆಯಲ್ಲಿ ಈ ನೆಲದ ನುಡಿಯಾದ ಕನ್ನಡವು ಕೇಂದ್ರ ಸ್ಥಾನವನ್ನು ಹೊಂದಿದೆ. ಬದಲಾದ ಕಾಲಘಟ್ಟದಲ್ಲಿ ಇಂಗ್ಲಿಷ್ ಭಾಷೆಯು ಜಾಗತಿಕ ವ್ಯವಹಾರಗಳಿಗೆ, ಉನ್ನತ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಗೆ ಅಗತ್ಯವಾಗಿದ್ದು, ಇದನ್ನು ಕಲಿಯುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಿದೆ. ಆದರೆ, ಹಿಂದಿಯನ್ನು ಕಡ್ಡಾಯವಾಗಿ ಓದಿಸುವುದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಯಾವುದೇ ಗಮನಾರ್ಹ ಲಾಭವಿಲ್ಲ. ತ್ರಿಭಾಷಾ ನೀತಿಯಿಂದ ಕರ್ನಾಟಕಕ್ಕೆ ಯಾವ ಲಾಭವೂ ಇಲ್ಲ. ಇದರಿಂದ ಒಬ್ಬನೇ ಒಬ್ಬ ಕನ್ನಡಿನಿಗೂ ಉದ್ಯೋಗ ದೊರೆತಿಲ್ಲ.

ತಮಿಳುನಾಡು 1968ರಿಂದಲೇ ತ್ರಿಭಾಷಾ ನೀತಿಯನ್ನು ತಿರಸ್ಕರಿಸಿ, ತಮಿಳು ಮತ್ತು ಇಂಗ್ಲಿಷ್ ಭಾಷೆಗಳನ್ನು ಒಳಗೊಂಡ ದ್ವಿಭಾಷಾ ನೀತಿಯನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಇತ್ತೀಚೆಗೆ, ಮಹಾರಾಷ್ಟ್ರ ಸರ್ಕಾರವು ಸಹ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿ, ಮರಾಠಿ ಮತ್ತುಕೈಗೊಂಡಿದೆ. ಇಂಗ್ಲಿಷ್ ಈ ರಾಜ್ಯಗಳು ತಮ್ಮ ಭಾಷಿಕ ಗುರುತನ್ನು ರಕ್ಷಿಸುವುದರಭಾಷೆಗಳನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನುಜೊತೆಗೆ ಶೈಕ್ಷಣಿಕ ಗುಣಮಟ್ಟವನ್ನು ಕಾಪಾಡಿಕೊಂಡಿವೆ. ಕರ್ನಾಟಕವುಈ ಉದಾಹರಣೆಗಳಿಂದ ಸ್ಫೂರ್ತಿಯನ್ನು ಪಡೆದು, ಕನ್ನಡ ಮತ್ತುಇಂಗ್ಲಿಷ್ ಭಾಷೆಗಳಿಗೆ ಆದ್ಯತೆ ನೀಡುವ ದ್ವಿಭಾಷಾ ನೀತಿಯನ್ನು ಜಾರಿಗೆತರಬೇಕಾಗಿದೆ.

ಕರ್ನಾಟಕದ ರಾಜ್ಯ ಪಠ್ಯಕ್ರಮದಲ್ಲಿ ವಿದ್ಯಾರ್ಥಿಗಳು ಐದುವಿಷಯಗಳನ್ನು (ಮೂರು ವಿಷಯಗಳು ಮತ್ತು ಎರಡು ಭಾಷೆಗಳು)ಎಸ್‌ಎಸ್‌ಎಲ್ಲಿ ಪರೀಕ್ಷೆಯಲ್ಲಿ ಬರೆಯುತ್ತಾರೆ. ಆದರೆ, ತೃತೀಯ ಭಾಷೆಯಾದ ಹಿಂದಿಯನ್ನು ಕಡ್ಡಾಯವಾಗಿ ಓದಬೇಕಾದ ಒತ್ತಡವು

ವಿದ್ಯಾರ್ಥಿಗಳಿಗೆ ಅನಗತ್ಯ ಹೊರೆಯಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ,ಕೇಂದ್ರೀಯ ಶಿಕ್ಷಣ ವ್ಯವಸ್ಥೆಯಾದ CBSE ಮತ್ತು ICSE ಶಾಲೆಗಳಲ್ಲಿ ಕೇವಲ ಎರಡು ಭಾಷೆಗಳನ್ನು ಕಡ್ಡಾಯವಾಗಿ ಓದಿಸಲಾಗುತ್ತದೆ, ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ಎರಡು ಭಾಷೆಗಳಿಗೆ ಮಾತ್ರ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಈ ತಾರತಮ್ಯವು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಅನ್ಯಾಯವನ್ನುಂಟುಮಾಡುತ್ತಿದೆ. ಇದರಿಂದಾಗಿ, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಗಣಿತ, ವಿಜ್ಞಾನ ಮುಂತಾದ ವಿಷಯಗಳಿಗೆ ಹೆಚ್ಚಿನ ಸಮಯವನ್ನು ನೀಡಲು ವಿಫಲರಾಗುತ್ತಿದ್ದಾರೆ. ಈ ಅಸಮಾನತೆಯನ್ನೂ ಸಹ ರಾಜ್ಯ ಸರ್ಕಾರ ಗಂಭೀರವಾಗಿ ಗಮನಿಸಬೇಕಿದೆ.

ತೃತೀಯ ಭಾಷೆಯನ್ನು ತೆಗೆದುಹಾಕುವುದರಿಂದ ವಿದ್ಯಾರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಜೊತೆಗೆ ಇತರ ವಿಷಯಗಳ ಮೇಲೆ ಹೆಚ್ಚಿನ ಗಮನವನ್ನು ಕೇಂದ್ರೀಕರಿಸಬಹುದು. ಕನ್ನಡ ಭಾಷೆಗೆ ಆದ್ಯತೆ ನೀಡುವುದರಿಂದ ಕರ್ನಾಟಕದ ಭಾಷಿಕ ಮತ್ತು ಸಾಂಸ್ಕೃತಿಕ

ಪರಂಪರೆಯನ್ನು ನಾವು ಮುಂದಿನ ಪೀಳಿಗೆಗೆ ಉಳಿಸಿದಂತಾಗುತ್ತದೆ.ದ್ವಿಭಾಷಾ ನೀತಿಯು ಶಿಕ್ಷಣ ಸಂಪನ್ಮೂಲಗಳನ್ನು ಕನ್ನಡ ಮತ್ತುಇಂಗ್ಲಿಷ್, ಕೇಂದ್ರೀಕರಿಸಲು ಅನುವು ಮಾಡಿಕೊಡುತ್ತದೆ, ಇದರಿಂದಶಿಕ್ಷಣದ ಗುಣಮಟ್ಟ ಸುಧಾರಿಸುತ್ತದೆ. ಉತ್ತರ ಭಾರತದ ರಾಜ್ಯಗಳಾದಉತ್ತರ ಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳು ದ್ವಿಭಾಷಾನೀತಿಯನ್ನು ಅನುಸರಿಸುತ್ತವೆ. ಕರ್ನಾಟಕಕ್ಕೂ ಇದೇ ರೀತಿಯ ಸಮಾನತೆಯನ್ನು ಒದಗಿಸಬೇಕು. ಕನ್ನಡಿಗರು ನಮ್ಮದಲ್ಲದನುಡಿಯನ್ನು ಯಾಕೆ ಕಡ್ಡಾಯವಾಗಿ ಕಲಿಯಬೇಕು? ಯಾರದೋ ಹುನ್ನಾರಕ್ಕೆ ಕನ್ನಡಿಗರೇಕೆ ಬಲಿಯಾಗಬೇಕು?

ನಮ್ಮ ಹಕ್ಕೊತ್ತಾಯಗಳು:

1. ಕರ್ನಾಟಕದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು

ಕಡ್ಡಾಯಗೊಳಿಸುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು.

2. ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯಕ್ರಮದಿಂದ

ಹೊರಗಿಡಬೇಕು.

3. ರಾಜ್ಯ ಮತ್ತು ಕೇಂದ್ರೀಯ ಶಿಕ್ಷಣ ವ್ಯವಸ್ಥೆಗಳಾದ CBSE, ICSE

ಶಾಲೆಗಳಿಗೆ ಏಕರೂಪದ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು.

4. ಸಿಬಿಎಎಸ್ ಇ, ಐಸಿಎಸ್ ಇ ಶಾಲೆಗಳಲ್ಲೂ ಪ್ರಥಮ ಭಾಷೆಯಾಗಿ ಕನ್ನಡವನ್ನೇ ಕಡ್ಡಾಯಗೊಳಿಸಬೇಕು.

5. ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ, ಉತ್ತಮ ಗುಣಮಟ್ಟದ ಇಂಗ್ಲಿಷ್ ಶಿಕ್ಷಣವನ್ನು ನೀಡಬೇಕು.

ಕರ್ನಾಟಕದ ಶಿಕ್ಷಣ ವ್ಯವಸ್ಥೆಯು ರಾಜ್ಯದ ಭಾಷಿಕ ಅಸ್ಮಿತೆಯನ್ನು ಗೌರವಿಸುವ, ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸನ್ನು ಖಾತ್ರಿಪಡಿಸುವ ಮತ್ತು ಜಾಗತಿಕ ಸ್ಪರ್ಧೆಗೆ ಸಿದ್ದವಾಗಿರುವಂತಹ ಒಂದು ವ್ಯವಸ್ಥೆಯಾಗಿರಬೇಕು. ತ್ರಿಭಾಷಾ ನೀತಿಯಿಂದ ಕರ್ನಾಟಕದ

ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಅನಗತ್ಯ ಒತ್ತಡವನ್ನು ತೆಗೆದುಹಾಕಿ,ತಮಿಳುನಾಡು ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳ ದ್ವಿಭಾಷಾನೀತಿಯನ್ನು ಅನುಸರಿಸುವ ಮೂಲಕ ಕರ್ನಾಟಕವು ತನ್ನ ಭಾಷಿಕಗುರುತನ್ನು ರಕ್ಷಿಸಬೇಕು. ಈ ನಿಟ್ಟಿನಲ್ಲಿ ತಕ್ಷಣದ ಕ್ರಮವನ್ನು

ಕೈಗೊಳ್ಳಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ.

ಆದರಪೂರ್ವಕವಾಗಿ

ತಮ್ಮ ವಿಶ್ಯಾಸಿ

(ಟಿ.ಎ.ನಾರಾಯಣಗೌಡ) ರಾಜ್ಯಾಧ್ಯಕ್ಷರು ಕರ್ನಾಟಕ ರಕ್ಷಣಾ ವೇದಿಕೆ



Source link

Leave a Reply

Your email address will not be published. Required fields are marked *