ಮಾಜಿ ಸಚಿವ ಈಶ್ವರಪ್ಪ ಸೇರಿ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಕೇಸ್ ರೀ ಓಪನ್! | Fir Registered Ks Eshwarappa And Family In Lokayukta Corruption Case Gow

ಮಾಜಿ ಸಚಿವ ಈಶ್ವರಪ್ಪ ಸೇರಿ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಕೇಸ್ ರೀ ಓಪನ್! | Fir Registered Ks Eshwarappa And Family In Lokayukta Corruption Case Gow



ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲು. ಭ್ರಷ್ಟಾಚಾರ ಆರೋಪದ ಮೇಲೆ ಹೈಕೋರ್ಟ್ ನಿರ್ದೇಶನದಂತೆ ಜುಲೈ 4 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್.

ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 13(1)(ಡೀ), 13(1)(ಸಿ), 120(ಬಿ) ಮತ್ತು 420 ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಇದಕ್ಕೂ ಮೊದಲು ಶಿವಮೊಗ್ಗದ ವಕೀಲ ವಿನೋದ್, ಈಶ್ವರಪ್ಪ ಮತ್ತು ಅವರ ಕುಟುಂಬದ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಆ ದೂರಿನ ಆಧಾರದಲ್ಲಿ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಲೋಕಾಯುಕ್ತ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಹೈಕೋರ್ಟ್‌ನಲ್ಲಿ ಲೋಕಾಯುಕ್ತ ಸಲ್ಲಿಸಿದ ಬಿ-ರಿಪೋರ್ಟ್‌ನ್ನು ವಕೀಲ ವಿನೋದ್ ಪ್ರಶ್ನಿಸಿದ್ದರು. ಸುಮಾರು ಎರಡು ತಿಂಗಳ ಹಿಂದೆ ಹೈಕೋರ್ಟ್, ಈಶ್ವರಪ್ಪ ವಿರುದ್ಧ ಪ್ರಕರಣವನ್ನು ಮತ್ತೆ ದಾಖಲಿಸಿ, ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ನಿರ್ದೇಶನ ನೀಡಿತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಜುಲೈ 4ರಂದು ಪ್ರಕರಣಕ್ಕೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.



Source link

Leave a Reply

Your email address will not be published. Required fields are marked *