
ಕನ್ನಡ ನಟ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ ಚಾಪ್ಟರ್ 1’. 2022ರ ಕಾಂತಾರ ಚಿತ್ರದ ಪ್ರೀಕ್ವೆಲ್ ಆಗಿದ್ದು, 125 ಕೋಟಿ ಬಜೆಟ್‌ನಲ್ಲಿ ತಯಾರಾಗಿದೆ. ಅಕ್ಟೋಬರ್ 2, 2025 ರಂದು ಬಿಡುಗಡೆಯಾದ ಈ ಚಿತ್ರ, ಮೊದಲ ದಿನದಿಂದಲೇ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿತು. ವಿಶ್ವಾದ್ಯಂತ 500 ಕೋಟಿ ದಾಟಿದ್ದು, ಭಾರತದಲ್ಲಿ 400 ಕೋಟಿಗೂ ಹೆಚ್ಚು ಗಳಿಸಿದೆ. ಅಂತಿಮವಾಗಿ 800 ಕೋಟಿ ತಲುಪುವ ನಿರೀಕ್ಷೆಯಿದೆ. ರಿಷಬ್ ಶೆಟ್ಟಿ ಜೊತೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಜಯರಾಂ ಪ್ರಮುಖ ಪಾತ್ರಗಳಲ್ಲಿದ್ದಾರೆ.