Headlines

ಕೊಹ್ಲಿ-ರೋಹಿತ್ 2027ರ ವಿಶ್ವಕಪ್ ಆಡ್ತಾರಾ? ಮೊದಲ ಸಲ ಅಚ್ಚರಿ ಹೇಳಿಕೆ ಕೊಟ್ಟ ಗೌತಮ್ ಗಂಭೀರ್!

ಕೊಹ್ಲಿ-ರೋಹಿತ್ 2027ರ ವಿಶ್ವಕಪ್ ಆಡ್ತಾರಾ? ಮೊದಲ ಸಲ ಅಚ್ಚರಿ ಹೇಳಿಕೆ ಕೊಟ್ಟ ಗೌತಮ್ ಗಂಭೀರ್!

ಕೊಹ್ಲಿ-ರೋಹಿತ್ 2027ರ ವಿಶ್ವಕಪ್ ಆಡ್ತಾರಾ? ಮೊದಲ ಸಲ ಅಚ್ಚರಿ ಹೇಳಿಕೆ ಕೊಟ್ಟ ಗೌತಮ್ ಗಂಭೀರ್!

ಬೆಂಗಳೂರು: ಭಾರತದ ದಿಗ್ಗಜ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡ್ತಾರಾ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಈ ಕುರಿತಂತೆ ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಮೊದಲ ಸಲ ತುಟಿಬಿಚ್ಚಿದ್ದಾರೆ.

ತವರಿನಲ್ಲಿ ವೆಸ್ಟ್ ಇಂಡೀಸ್ ಎದುರಿನ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ಬೀಗಿದ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ, ಇದೀಗ ಸೀಮಿತ ಓವರ್‌ಗಳ ಸರಣಿಯನ್ನಾಡಲು ಆಸ್ಟ್ರೇಲಿಯಾ ವಿಮಾನ ಏರಿದೆ.

ಇನ್ನು ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ಇದೇ ಮೊದಲ ಸಲ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಜೆರ್ಸಿ ತೊಟ್ಟು ಕಣಕ್ಕಿಳಿಯಲು ರೆಡಿಯಾಗಿದ್ದಾರೆ. ಅಭಿಮಾನಿಗಳು ಇವರಿಬ್ಬರ ಆಟ ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ.

ಇನ್ನು ಕೆಲವರು ಕೊಹ್ಲಿ-ರೋಹಿತ್ ಪಾಲಿಗೆ ಆಸ್ಟ್ರೇಲಿಯಾ ಎದುರಿನ ಸರಣಿಯೇ ಕೊನೆಯ ಅಂತಾರಾಷ್ಟ್ರೀಯ ಸರಣಿಯಾಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ. ಅದ್ರೆ ಕೊಹ್ಲಿ-ರೋಹಿತ್ ಶರ್ಮಾ ಭವಿಷ್ಯದ ಕುರಿತಂತೆ ಇದೇ ಮೊದಲ ಸಲ ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ತುಟಿಬಿಚ್ಚಿದ್ದಾರೆ.

2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇನ್ನೂ ಎರಡೂವರೆ ವರ್ಷ ಸಮಯವಿದೆ. ಆ ಬಗ್ಗೆ ಈಗಲೇ ಯೋಚಿಸಲು ಆಗಲ್ಲ ಎಂದು ಟೀಂ ಇಂಡಿಯಾ ಹೆಡ್ ಕೋಚ್ ಗಂಭೀರ್ ಹೇಳಿದ್ದಾರೆ.

ಖಂಡಿತವಾಗಿಯೂ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಗುಣಮಟ್ಟದ ಆಟಗಾರರು. ಆಸ್ಟ್ರೇಲಿಯಾ ಎದುರಿನ ಸರಣಿಯನ್ನು ಇಬ್ಬರೂ ಉತ್ತಮವಾಗಿ ಬಳಸಿಕೊಳ್ಳಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಗೌತಿ ಹೇಳಿದ್ದಾರೆ.

ಇನ್ನು ಇದೇ ವೇಳೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬರುವ ಸರಣಿಗಳಿಗೆ ಆಯ್ಕೆಯಾಗಬೇಕಿದ್ದರೆ ಲಯ ಹಾಗೂ ಫಿಟ್ನೆಸ್ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.

Source link

Leave a Reply

Your email address will not be published. Required fields are marked *