IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಆರಂಭಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ (LSG) ಫ್ರಾಂಚೈಸಿ ನ್ಯೂಝಿಲೆಂಡ್ನ ಕೆನ್ ವಿಲಿಯಮ್ಸನ್ ಅವರನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಆದರೆ ಆಟಗಾರನಾಗಿ ಅಲ್ಲ ಎಂಬುದು ವಿಶೇಷ. ಅಂದರೆ ಮುಂಬರುವ ಐಪಿಎಲ್‌ನಲ್ಲಿ ವಿಲಿಯಮ್ಸನ್ ಎಲ್ ಎಸ್ ಜಿ ತಂಡ ಕಾರ್ಯತಂತ್ರದ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ.
ಕೆನ್ ವಿಲಿಯಮ್ಸನ್ ಈ ಹಿಂದೆ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ 2025 ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ವಿಲಿಯಮ್ಸನ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಲಿಲ್ಲ. ಹೀಗಾಗಿ ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ ಐಪಿಎಲ್ ನಲ್ಲಿ ಕಾಮೆಂಟೇಟರ್ ಆಗಿ ಕಾಣಿಸಿಕೊಂಡಿದ್ದರು.
ಇದೀಗ ಐಪಿಎಲ್ 2026ರ ಆರಂಭಕ್ಕೂ ಮುನ್ನ ಹೊಸ ಜವಾಬ್ದಾರಿ ವಹಿಸಿಕೊಳ್ಳಲು ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಅಂದರೆ ಈ ಬಾರಿ ನಡೆಯಲಿರುವ ಮಿನಿ ಹರಾಜಿನಲ್ಲಿ ಕೇನ್ ವಿಲಿಯಮ್ಸನ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತ. ಇನ್ನು ಕಾಣಿಸಿಕೊಂಡರೂ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯೇ ಅವರನ್ನು ಖರೀದಿಸುವ ಸಾಧ್ಯತೆಯಿದೆ.
ಕೆನ್ ವಿಲಿಯಮ್ಸನ್ ಐಪಿಎಲ್ ವೃತ್ತಿಜೀವನ:
ಕೆನ್ ವಿಲಿಯಮ್ಸನ್ ಐಪಿಎಲ್ನ ಯಶಸ್ವಿ ಆಟಗಾರರಲ್ಲಿ ಒಬ್ಬರು. ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ಪರ ಒಟ್ಟು 79 ಐಪಿಎಲ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿಲಿಯಮ್ಸನ್ 18 ಅರ್ಧಶತಕಗಳೊಂದಿಗೆ 2128 ರನ್ ಗಳಿಸಿದ್ದಾರೆ. ಜೊತೆಗೆ 2016 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕನಾಗಿ ಎಸ್‌ಆರ್‌ಹೆಚ್ ಪಡೆಯನ್ನು ಫೈನಲ್‌ಗೆ ಕೊಂಡೊಯ್ದಿದ್ದರು.
ಆದರೆ ಕಳೆದ ಬಾರಿ ಐಪಿಎಲ್ ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕೆನ್ ವಿಲಿಯಮ್ಸನ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿಗಳು ಆಸಕ್ತಿ ತೋರಲಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ವಯಸ್ಸು. ಅಂದರೆ 35 ವರ್ಷದ ವಿಲಿಯಮ್ಸನ್‌ಗಾಗಿ ಕೋಟಿ ಮೊತ್ತವನ್ನು ಎಲ್ಲಾ ಫ್ರಾಂಚೈಸಿಗಳು ಹಿಂದೇಟು ಹಾಕಿದ್ದರು.
ಇದೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಬಿಡುಗಡೆಯಾದ ಸಂವ್ ಗೊಯೆಂಕಾ ಅವರ ಮನವಿ ಅರ್ಜಿ ಕೇನ್ ವಿಲಿಯಮ್ ಅವರು ಎಲ್ ಎಸ್ ಜಿ ತಂಡ ಕಾರ್ಯತಂತ್ರದ ಸಲಹೆಗಾರರಾಗಿ ಕಾರ್ಯನಿರ್ವಹಿಸಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: IPL 2026: LSG ತಂಡದಿಂದ 11 ಕೋಟಿ ರೂ. ಆಟಗಾರನಿಗೆ ಗೇಟ್ ಪಾಸ್..!
LSG ಸಿಬ್ಬಂದಿ ವರ್ಗ:
ಐಪಿಎಲ್ ಸೀಸನ್-19 ಆರಂಭಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ತನ್ನ ಸಿಬ್ಬಂದಿ ವರ್ಗದಲ್ಲೂ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಅದರಂತೆ ಎಲ್‌ಎಸ್‌ಜಿಯ ಮುಖ್ಯ ಕೋಚ್ ಆಗಿ ಜಸ್ಟಿನ್ ಲ್ಯಾಂಗರ್ ಮುಂದುವರಿಯುತ್ತದೆ, ಸ್ಪಿನ್ ಬೌಲಿಂಗ್ ಕೋಚ್ ಕಾರ್ಲ್ ಕ್ರೋವ್ ನೇಮಕವಾಗಿದ್ದಾರೆ. ಇದಲ್ಲದೆ, ಬೌಲಿಂಗ್ ಕೋಚ್ ಭರತ್ ಅರುಣ್ ಮತ್ತು ಸಹಾಯಕ ಕೋಚ್ ಲ್ಯಾನ್ಸ್ ಕ್ಲೂಸ್ನರ್ ಕೂಡ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.