Headlines

ಛಲವಾದಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ: ಖರ್ಗೆ, ಮಹದೇವಪ್ಪಗೆ ಹೆಚ್ಚಿನ ಭದ್ರತೆ

ಛಲವಾದಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ: ಖರ್ಗೆ, ಮಹದೇವಪ್ಪಗೆ ಹೆಚ್ಚಿನ ಭದ್ರತೆ


ಬೆಂಗಳೂರು, (ಅಕ್ಟೋಬರ್ 17): ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಭದ್ರತಾ ಸಿಬ್ಬಂದಿಯನ್ನು ಪರಿಷ್ಕರಿಸಲಾಯಿತು. ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ((ಚಲವಾದಿ ನಾರಾಯಣಸ್ವಾಮಿ)ನಿವಾಸದ ಭದ್ರತಾ ಗಾರ್ಡ್ ಹಿಂಪಡೆದುಕೊಳ್ಳಲಾಗಿದೆ. ಹಾಗೆಯೇ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಉಚ್ಛಾಟಿತ ನಾಯಕ ಕೆ.ಎಸ್.ಶ್ವರಪ್ಪನವರ ನಿವಾಸದ ಈ ಗಾರ್ಡ್ ಮತ್ತು ಬೆಂಗಾವಲು ಭದ್ರತೆ ಎರಡನ್ನೂ ಗೃಹ ಇಲಾಖೆಗೆ ಪಾವತಿಸಲಾಗಿದೆ. ಇನ್ನು ಗೃಹ ಇಲಾಖೆ ಈ ನಡೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಮಹದೇವಪ್ಪಗೆ ಭದ್ರತೆ

ಛಲವಾದಿ ನಾರಾಯಣಸ್ವಾಮಿ ಹಾಗೂ ಈಶ್ವರಪ್ಪನವರ ಭದ್ರತಾ ಗಾರ್ಡ್ ವಾಪಾಡ್ ಇರುವ ಗೃಹ ಇಲಾಖೆ, ಸಚಿವ ಹೆಚ್.ಸಿ.ಮಹದೇವಪ್ಪ ಅವರಿಗೆ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ. ಹೌದು…ಸಚಿವ ಮಹದೇವಪ್ಪ ಅವರಿಗೆ ಬೆಂಗಾವಲು ಭದ್ರತಾ ಸಿಬ್ಬಂದಿ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ಇದಕ್ಕೆ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲರಾಗಿದ್ದರೆ, ನನಗೆ ಭದ್ರತೆ ನೀಡಲು ಪ್ರಿಯಾಂಕ್ ಖರ್ಗೆ ಭದ್ರತೆ ಹೆಚ್ಚಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನು ಓದಿ: ಸಿದ್ದರಾಮಯ್ಯಗೆ ಅಶೋಕ್ ಮಹತ್ವದ ಪತ್ರ: ವಿಪಕ್ಷ ನಾಯಕರ ಪತ್ರದಲ್ಲೇನಿದೆ?

ಯಾವುದಾದರೂ ಖರ್ಗೆ ಕುಟುಂಬದ ಹೊಣೆ ಎಂದ ಛಲವಾದಿ

ಇನ್ನು ಈ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ನಮ್ಮ ಮನೆಗೆ ಬೆಂಗಾವಲು ರಕ್ಷಕರನ್ನು ಕೊಟ್ಟಿದ್ದರು. ಭದ್ರತಾ ದೃಷ್ಟಿಯಿಂದ ಕೊಡಲೇ ಬೇಕು. ಆದರೆ ಮೂವರು ಭದ್ರತಾ ಸಿಬ್ಬಂದಿಯನ್ನು ವಾಪಸ್ ಪಡೆದಿದ್ದಾರೆ. ಇದರ ಹಿಂದೆ ಪ್ರಿಯಾಂಕ್ ಖರ್ಗೆ (ಪ್ರಿಯಾಂಕ್ ಖರ್ಗೆ) ಇದ್ದಾರೆ. ನನಗೆ ಏನಾದರೂ ಆದರೆ ಸರ್ಕಾರ ಎಷ್ಟು ಹೊಣೆಯೋ, ಪ್ರಿಯಾಂಕ್ ಖರ್ಗೆ ಕುಟುಂಬವೂ ಕೂಡ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನಗೆ ಕೊಟ್ಟ ಭದ್ರತೆಯನ್ನು ವಾಪಸ್ ಪಡೆದಿದ್ದು ಯಾಕೆ? ಇದಕ್ಕೆ ಗೃಹ ಸಚಿವರು ಉತ್ತರ ಕೊಡಲೇಬೇಕು. ಇಲ್ಲದೇ ಇದ್ದರೆ ನನಗೆ ಕೊಟ್ಟಿರುವ ಕಾರು, ಬೆಂಗಾವಲು,ಭದ್ರತಾ ಸಿಬ್ಬಂದಿ ಎಲ್ಲರನ್ನೂ ವಾಪಸ್ ಕಳುಹಿಸುತ್ತೇನೆ . ಪ್ರಿಯಾಂಕ್ ಖರ್ಗೆ ಮನೆಗೆ ಬೆದರಿಕೆ ಬಂದಿದೆ ಎಂದು ಮತ್ತಷ್ಟು ಅವರ ಮನೆಗೆ ಭದ್ರತೆ ಇದೆ. ನನ್ನ ಭದ್ರತೆ ವಾಪಸ್ ಪಡೆದಿದ್ದಾರೆ, ಅವರಿಗೆ ಭದ್ರತೆ ಹೆಚ್ಚಿಸಿದ್ದಾರೆ. ಇವರ ಭ್ರಷ್ಟಾಚಾರ ಎತ್ತಿ ತೋರಿಸುವ ಕೆಲಸ ವಿಪಕ್ಷ ನಾಯಕರು ಮಾಡಬಾರದು ಎಂಬ ನಿರ್ಧಾರಕ್ಕೆ ಸರ್ಕಾರ ಬಂದಿದೆ. ನಾನು ವಿಪಕ್ಷ ನಾಯಕನಾಗಿ ಒಂದೂವರೆ ವರ್ಷ ಆಗುತ್ತಿದೆ. ಇಲ್ಲಿವರೆಗೂ ಸರ್ಕಾರಿ ಗೃಹ ಕೊಟ್ಟಿಲ್ಲ. ಇದೇ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾಗ ಜಗಳ ಮಾಡಿ ಮನೆ ತೆಗೆದುಕೊಂಡಿದ್ದರು.

ರವಿಕುಮಾರ್ ಕೆಂಡಾಮಂಡಲ

ಛಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ನೀಡಿದ್ದ ಭದ್ರತೆ ವಾಪಸ್ ಪಡೆದಿರುವ ಬಗ್ಗೆ ಬಿಜೆಪಿ ಎಂಎಲ್ ಸಿ ಎನ್ .ರವಿಕುಮಾರ್ ಮಾತನಾಡಿ, ಆರ್ ಎಸ್ ಎಸ್ ಕಚೇರಿಗೆ ಕೊಟ್ಟಿರುವ ಭದ್ರತೆ ವಾಪಸ್ ಪಡೆದಿದ್ದು ಯಾಕೆ? ಸಂಘದ ಚಟುವಟಿಕೆಗಳು ಹತ್ತಿಕ್ಕುವ, ಅಭದ್ರತೆ ಉಂಟು ಮಾಡುವ ಪಿತೂರಿ ಸರ್ಕಾರವೇ ಮಾಡುತ್ತಿದ್ಯಾ? ಕಾಂಗ್ರೆಸ್ ಪಕ್ಷದ ಕಿಡಿಗೇಡಿಗಳು ಅನುಮತಿ ಪಡೆಯದೇ ಆರ್ ಎಸ್ ಎಸ್ ಕಚೇರಿ ಮುಂದೆ ಬೇಕಾಬಿಟ್ಟಿ ಘೋಷಣೆ ಕೂಗಿದ್ದಾರೆ. ಕಿಡಿಗೇಡಿಗಳು ಅಲ್ಲದಿದ್ದರೆ ಅನುಮತಿ ಪಡೆದು ಪ್ರತಿಭಟನೆ ಮಾಡುತ್ತಿದ್ದರು. ಸರ್ಕಾರಿ ಸ್ಥಳಗಳಲ್ಲಿ ಅನುಮತಿ ಪಡೆದು ಚಟುವಟಿಕೆ ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕಿಡಿಗೇಡಿಗಳ ವಿರುದ್ಧ ಕೇಸ್ ಹಾಕದೇ ಇದ್ದರೆ ಸಿಎಂ ಮತ್ತು 33 ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *