ಡಾರ್ಲಿಂಗ್ ಕೃಷ್ಣ ನಟನೆಯ ‘ಬ್ರ್ಯಾಟ್’ ಸಿನಿಮಾ ಟ್ರೇಲರ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್

ಡಾರ್ಲಿಂಗ್ ಕೃಷ್ಣ ನಟನೆಯ ‘ಬ್ರ್ಯಾಟ್’ ಸಿನಿಮಾ ಟ್ರೇಲರ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್


ನಟ ಡಾರ್ಲಿಂಗ್ ಕೃಷ್ಣ (ಡಾರ್ಲಿಂಗ್ ಕೃಷ್ಣ) ಮತ್ತು ನಿರ್ದೇಶಕ ಶಶಾಂಕ್ ಅವರದ್ದು ಹಿಟ್ ಕಾಂಬಿನೇಷನ್. ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಿಂದ ಯಶಸ್ಸು ಕಂಡಿದ್ದ ಅವರಿಬ್ಬರು ಈಗ ‘ಬ್ರ್ಯಾಟ್’ ಸಿನಿಮಾ (ಬ್ರಾಟ್ ಕನ್ನಡ ಚಲನಚಿತ್ರ) ಮಾಡಿದೆ. ‘ನಾನೇ ನೀನಂತೆ..’ ಹಾಗೂ ‘ಗಂಗಿ ಗಂಗಿ..’ ಹಾಡಿನಿಂದ ಸಖತ್ ಸದ್ದು ಮಾಡಿರುವ ಈ ಸಿನಿಮಾದ ಟ್ರೇಲರ್ ಈಗ ಬಿಡುಗಡೆಯಾಗಿದೆ. ನಟ ಕಿಚ್ಚ ಸುದೀಪ್ (ಕಿಚ್ಚ ಸುದೀಪ್) ಅವರು ‘ಬ್ರ್ಯಾಟ್’ ಸಿನಿಮಾ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಬಳಿಕ ಅವರ ಚಿತ್ರತಂಡದ ಬಗ್ಗೆ ಹಾಗೂ ಶುಭ ಕೋರಿದರು. ಟ್ರೇಲರ್ ಮೂಲಕ ಸಿನಿಮಾದ ಕಥೆಯ ಬಗ್ಗೆ ಸುಳಿವು ಸಿಕ್ಕಿದೆ.

ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಅವರು ನೆಗೆಟಿವ್ ಶೇಡ್ ಇರುವ ಪಾತ್ರ ಮಾಡಿದ್ದಾರೆ. ‘ಬ್ರ್ಯಾಟ್’ ಎಂಬ ಶೀರ್ಷಿಕೆಗೆ ತಕ್ಕಂತೆ ಅವರ ಪಾತ್ರವಿದೆ. ಹೇಗಾದರೂ ಸರಿ, ದುಡ್ಡು ಮಾಡಬೇಕು ಎಂಬ ಗುರಿ ಇಟ್ಟುಕೊಂಡಿರುವ ವ್ಯಕ್ತಿಯಾಗಿ ಅವರು ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿ ಕ್ರಿಕೆಟ್ ಬೆಟ್ಟಿಂಗ್ ಜಾಲಕ್ಕೆ ಕೈ ಹಾಕಿದಂತಿದೆ. ಟ್ರೇಲರ್ ನೋಡಿದ ಬಳಿಕ ಸಿನಿಮಾ ಬಗ್ಗೆ ಕುತೂಹಲದಲ್ಲಿ ಡಬಲ್ ಆಗಿದೆ.

ಟ್ರೇಲರ್ ಬಿಡುಗಡೆ ಮಾಡಿ ಸುದೀಪ್ ಅವರ ಬಗ್ಗೆ. ‘ನಿರ್ದೇಶಕ ಶಶಾಂಕ್ ಅವರು ಈ ಸಿನಿಮಾ ಮಾಡಲು ತುಂಬ ಒದ್ದಾಡುತ್ತಾರೆ. ಏಕೆಂದರೆ ಬ್ರ್ಯಾಟ್ ಆಗಬೇಕಾದ ಅಂಶ ಡಾರ್ಲಿಂಗ್ ಕೃಷ್ಣ ಅವರಲ್ಲಿ ಇಲ್ಲ. ಅವರನ್ನು ಕ್ಲೀನ್ ಕೃಷ್ಣಪ್ಪ ಅಂತ ನಾವು ಕರೆಯುತ್ತೇವೆ. ಅಂತ ವ್ಯಕ್ತಿಯ ಸಿನಿಮಾಗೆ ಈ ರೀತಿ ಟೈಟಲ್ ಇಡಬೇಕಾದರೆ ತುಂಬ ಧೈರ್ಯ ಬೇಕು. ಸಿಗರೇಟ್ ಇತ್ಯಾದಿ ಕೃಷ್ಣ ಅವರಿಗೆ ಸೂಟ್ ಆಗಲ್ಲ. ಆದರೆ ದುಡ್ಡನ್ನು ಅವರು ನೋಡುವ ರೀತಿ ಆಗುತ್ತದೆ’ ಎಂದರು ಕಿಚ್ಚ ಸುದೀಪ್.

‘ಬ್ರ್ಯಾಟ್’ ಸಿನಿಮಾ ಟ್ರೇಲರ್:

‘ಅರ್ಜುನ್ ಜನ್ಯ ಇರುವ ಕಡೆ ಸೌಂಡ್ ಇದ್ದೇ ಇರುತ್ತದೆ. ಅಲ್ಲಿ ಗೆಲವು ಇದ್ದೇ ಇರುತ್ತದೆ. ನಿರ್ಮಾಪಕರಿಗೆ ಶುಭ ಕೋರುತ್ತೇನೆ. ನಟಿ ಮನಿಷಾ ಅವರಿಗೆ ಕನ್ನಡ ಚಿತ್ರರಂಗಕ್ಕೆ ಸ್ವಾಗತ ಕೋರುತ್ತೇನೆ’ ಎಂದು ಕಿಚ್ಚ ಸುದೀಪ್ ಅವರು ಶಶಾಂಕ್ ಅವರ ಪ್ರತಿಭೆಯ ಬಗ್ಗೆ ಹೇಳಿದ್ದಾರೆ. ‘ಶಶಾಂಕ್ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಅವರು ಸಿನಿಮಾ ಮಾಡಿಲ್ಲ. ಅವರಿಗೆ ಇನ್ನಷ್ಟು ಯಶಸ್ಸು ಸಿಗಬೇಕು. ಎಲ್ಲ ಕಲಾವಿದರ ತಲೆಯಿಂದ ತೆಗೆದು ನೀವು ಒಂದು ಕಥೆ ಬರೆದು ಸಿನಿಮಾ ಮಾಡಿ. ನಿಮಗೆ ಶುಭವಾಗಲಿ’ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ: ಗಂಗಿ ಗಂಗಿ ಹಾಡಿಗೆ ಡಾರ್ಲಿಂಗ್ ಕೃಷ್ಣ ಮಗಳ ಡ್ಯಾನ್ಸ್ ನೋಡಿ..

ನಿರ್ಮಾಪಕ ಮಂಜುನಾಥ್ ಕಂದಕೂರ್ ಅವರು ಮಾತನಾಡಿ, ‘ಪ್ಲ್ಯಾನ್ ಮಾಡಿದ ಪ್ರಕಾರವೇ ಸಿನಿಮಾ ಮಾಡಿದ ಶಶಾಂಕ್ ಅವರಿಗೆ ಧನ್ಯವಾದ ಹೇಳುತ್ತೇನೆ. ಸಿನಿಮಾ ತುಂಬ ಚೆನ್ನಾಗಿ ಮೂಡಿಬಂದಿದೆ. ಸುದೀಪ್ ಅವರು ಉತ್ತಮ ಕ್ರಿಕೆಟರ್. ನಮ್ಮ ಸಿನಿಮಾದಲ್ಲಿ ಕೂಡ ಕ್ರಿಕೆಟ್ ಕಥೆ ಇದೆ. ಅವರು ಬಂದು ನಮ್ಮ ಟ್ರೇಲರ್ ಬಿಡುಗಡೆ ಮಾಡಿದ್ದು ಖುಷಿಯಾಯಿತು’ ಎಂದರು.

ನಿರ್ದೇಶಕ ಶಶಾಂಕ್ ಅವರು ಮಾತನಾಡಿ, ‘ನಮ್ಮ ಪಾಲಿಗೆ ಸುದೀಪ್ ಸರ್ ಲಕ್ಕಿ. ಅವರೇ ಕೌಸಲ್ಯ ಸುಪ್ರಜಾ ರಾಮ ಸಿನಿಮಾದ ಟ್ರೇಲರ್ ಲಾಂಚ್ ಮಾಡಿದ್ದರು. ಆ ಚಿತ್ರ ಹಿಟ್ ಆಯಿತು. ಈಗ ಬ್ರ್ಯಾಟ್ ಸಿನಿಮಾ ಅದಕ್ಕಿಂತ 10 ಪಟ್ಟು ದೊಡ್ಡ ಹಿಟ್ ಆಗಲಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಈಗ ಕನ್ನಡ ಟ್ರೇಲರ್ ಬಿಡುಗಡೆ ಆಗಿದೆ. ಸಿನಿಮಾ ಕೂಡ ಮೊದಲು ಕನ್ನಡದಲ್ಲಿ ಬಿಡುಗಡೆ ಆಗಿ ನಂತರ ಬೇರೆ ಭಾಷೆಗಳಲ್ಲಿ ರಿಲೀಸ್ ಆಗಲಿದೆ’ ಎಂದು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *