ಹಾಲಿ ಚಾಂಪಿಯನ್ಸ್ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವು ಐಪಿಎಲ್ 2026 ಟೂರ್ನಮೆಂಟ್‌ಗೆ ಮುಂಚಿತವಾಗಿ ಹೊಸ ಕೈಸೇರಲಿದೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಕ್ರಿಕ್‌ಬಜ್ ಪ್ರಕಾರ, ಆರು ಕಂಪನಿಗಳು ಆರ್ಸಿಬಿ ಫ್ರಾಂಚೈಸಿಯನ್ನು ಖರೀದಿಸಲು ಮುಂದಾಗಿದ್ದು, ಸುಮಾರು 17,587 ಕೋಟಿ ರೂ. ದರವನ್ನು ನಿಗದಿಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ.