ಒಂದೇ ದಿನ ಕಣಕ್ಕಿಳಿಯಲಿವೆ ಭಾರತ 2 ತಂಡಗಳು; ಒಂದು ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ

ಒಂದೇ ದಿನ ಕಣಕ್ಕಿಳಿಯಲಿವೆ ಭಾರತ 2 ತಂಡಗಳು; ಒಂದು ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ


ಅಕ್ಟೋಬರ್ 19 ರ ಭಾನುವಾರದಂದು ಭಾರತದ ಕ್ರಿಕೆಟ್ ಪ್ರಿಯರಿಗೆ ಮನರಂಜನೆಯ ರಸದೌತಣ ಸಿಗಲಿದೆ. ಏಕೆಂದರೆ ಈ ದಿನದಂದು ಭಾರತದ ಎರಡು ತಂಡಗಳು ಎರಡು ಬಲಿಷ್ಠ ತಂಡಗಳು ಪಂದ್ಯಗಳನ್ನಾಡಲಿವೆ. ಒಂದೆಡೆ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿರುವ ಭಾರತ (ಭಾರತ ವಿರುದ್ಧ ಆಸ್ಟ್ರೇಲಿಯಾ) ಪುರುಷರ ತಂಡ ತನ್ನ ಮೊದಲ ಪಂದ್ಯವನ್ನು ಪಾರ್ತ್ ಮೈದಾನದಲ್ಲಿ ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಮತ್ತೊಂದೆಡೆ ಭಾರತದಲ್ಲಿ ಮಹಿಳಾ ತಂಡದಲ್ಲಿ ಭಾರತ ಮಹಿಳಾ ತಂಡವು ತನ್ನನ್ನು ಮಾಡದೆ ಮಡಿ ಬಲಿಷ್ಠ ಇಂಗ್ಲೆಂಡ್ (ಭಾರತ vs ಇಂಗ್ಲೆಂಡ್) ತಂಡವನ್ನು ಎದುರಿಸಲಿದೆ. ಸೆಮಿಫೈನಲ್ ದೃಷ್ಟಿಯಿಂದ ಹರ್ಮನ್‌ಪ್ರೀತ್ ಕೌರ್ ಪಡೆಗೆ ಈ ಆಟ ಗೆಲ್ಲಲೇಬೇಕಾದ ಒತ್ತಡ ಎದುರಾಗಿದೆ.

ಭಾರತ- ಇಂಗ್ಲೆಂಡ್ ಮುಖಾಮುಖಿ

ವಾಸ್ತವವಾಗಿ ಮಹಿಳಾ ಸ್ಪರ್ಧೆಯಲ್ಲಿ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಶುಭಾರಂಭ ಮಾಡಿದ್ದ ಭಾರತ ಮಹಿಳಾ ತಂಡ, ಆ ಬಳಿಕ ನಡೆದ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಹೀಗಾಗಿ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಭಾರತ ತಂಡ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕಾದರೆ, ಇಂಗ್ಲೆಂಡ್ ವಿರುದ್ಧ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಗೆಲ್ಲುವ ಪ್ರಬಲ ಸ್ಪರ್ಧಿಯಾಗಿ ಅಖಾಡಕ್ಕಿಳಿದಿದ್ದ ಟೀಂ ಇಂಡಿಯಾಕ್ಕೆ ಸತತ ಎರಡು ಸೋಲುಗಳನ್ನು ತಂದೊಡ್ಡಿದೆ.

ಹರ್ಮನ್ ಪಡೆಗೆ ಗೆಲ್ಲಲೇಬೇಕಾದ ಒತ್ತಡ

ತನ್ನ ಮೊದಲ ಪ್ರದರ್ಶನ ಶ್ರೀಲಂಕಾವನ್ನು 59 ರನ್ಗಳಿಂದ ಮಣಿಸಿದ ಭಾರತ ವನಿತಾ ತಂಡ, ತನ್ನ ಎರಡನೇ ಪಾಕಿಸ್ತಾನವನ್ನು ಏಕಪಕ್ಷೀಯ ರೀತಿಯಲ್ಲಿ ಸೋಲಿಸಿತು. ಈ ಎರಡು ಪಂದ್ಯಗಳಲ್ಲಿ ಭಾರತದ ಬ್ಯಾಟಿಂಗ್ ವಿಭಾಗ ಕೈಕೊಟ್ಟಿತಾದರೂ, ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ಮೂಡಿಬಂದಿತ್ತು. ಆದರೆ ಆ ಬಳಿಕ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲೂ ಬ್ಯಾಟಿಂಗ್ ವಿಭಾಗ ಕೈಕೊಟ್ಟಿತು. ಆದಾಗ್ಯೂ ಕೊನೆಯವರೆಗೂ ಗೆಲುವಿಗಾಗಿ ಹೋರಾಟ ನೀಡಿದ ಬೌಲಿಂಗ್ ವಿಭಾಗದ ಪಂದ್ಯವನ್ನು ಗೆಲ್ಲುವಲ್ಲಿ ವಿಫಲವಾಗಿತ್ತು. ತನ್ನ ನಾಲ್ಕನೇ ಪ್ರದರ್ಶನ ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸಿದ್ದ ಭಾರತ ತಂಡಕ್ಕೆ ಬ್ಯಾಟಿಂಗ್ ವಿಭಾಗವನ್ನು ಕೈಹಿಡಿಯಿತು, ಆಸ್ಟ್ರೇಲಿಯಾದ ಬ್ಯಾಟಿಂಗ್ ವಿಭಾಗವನ್ನು ಕಟ್ಟಿಹಾಕುವಲ್ಲಿ ಬೌಲರ್‌ಗಳು ಎಡವಿದ್ದರು. ಹೀಗಾಗಿ ಇಂಗ್ಲೆಂಡ್ ವಿರುದ್ಧದ ತನ್ನ ಐದನೇ ಪ್ರದರ್ಶನ ಭಾರತ ತಂಡ ಸಂಘಿಕ ಪ್ರದರ್ಶನ ನೀಡಿ ಗೆಲುವು ಸಾಧಿಸಲು ಬಯಸಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ.

IND vs AUS: ಆಸ್ಟ್ರೇಲಿಯಾ ನೆಲದಲ್ಲಿ ಭಯಾನಕವಾಗಿದೆ ಭಾರತದ ಏಕದಿನ ದಾಖಲೆ

ಭಾರತ- ಆಸೀಸ್ ಏಕದಿನ ಪಂದ್ಯ

ಇತ್ತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿರುವ ಭಾರತ ಪುರುಷರ ತಂಡ, ಕಾಂಗರೂ ತಂಡವನ್ನು ಅವರ ನೆಲದಲ್ಲಿ ಮಣಿಸುವ ಕಠಿಣ ಸವಾಲು ಎದುರಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಆಸೀಸ್ ತಂಡದ ವಿರುದ್ಧ ಪ್ರಬಲ ಪ್ರದರ್ಶನ ನೀಡುತ್ತಿರುವ ಭಾರತ ತಂಡಕ್ಕೆ, ಏಕದಿನ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ. ಹಾಗೆಯೇ 7 ತಿಂಗಳ ನಂತರ ಕ್ರಿಕೆಟ್‌ಗೆ ಮರಳಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಮ್ಮ ಅನುಭವವನ್ನು ಧಾರೆ ಎರೆದು ಯುವ ತಂಡವನ್ನು ಗೆಲುವಿನತ್ತ ಕೊಂಡೊಯ್ಯಬೇಕಾಗಿದೆ. ಈ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಲಿದೆ. ಹೀಗಾಗಿ ಟೀಂ ಇಂಡಿಯಾ ಅಭಿಮಾನಿಗಳು ಭಾನುವಾರ ಬೆಳಿಗ್ಗೆ ಪುರುಷರ ಕ್ರಿಕೆಟ್ ಅನ್ನು ಆನಂದಿಸುತ್ತಾರೆ, ಮಧ್ಯಾಹ್ನದ ನಂತರ ಮಹಿಳಾ ತಂಡವನ್ನು ಕಣ್ತುಂಬಿಕೊಳ್ಳಬಹುದು.

ಹೆಚ್ಚಿನ ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *