Weather Today: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​; ಹವಾಮಾನ ಇಲಾಖೆ ಮುನ್ಸೂಚನೆ

Weather Today: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​; ಹವಾಮಾನ ಇಲಾಖೆ ಮುನ್ಸೂಚನೆ


ಕರಾವಳಿಯಲ್ಲಿ ಹೆಚ್ಚಿದ ವರುಣಾರ್ಭಟ

ಬೆಂಗಳೂರು, ಅಕ್ಟೋಬರ್ 19: ಕರ್ನಾಟಕದಲ್ಲಿ ಇಂದು ಭಾರಿ ಮಳೆಯಾಗುತ್ತದೆ (ಹವಾಮಾನ ಮುನ್ಸೂಚನೆ) ಸಾಧ್ಯತೆಯಿದೆ. ಹವಾಮಾನ ಇಲಾಖೆ ಸುಮಾರು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.ಕರಾವಳಿಯಲ್ಲಿ ವರುಣಾರ್ಭಟ ನಡೆಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ.

ಎಲ್ಲೆಲ್ಲಿ ಮಳೆ?

ಕರಾವಳಿ ಪ್ರದೇಶದ ಜಿಲ್ಲೆಗಳಾದ ಉಡುಪಿ ಮತ್ತು ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯದ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ.

ಗಂಟೆಗೆ 30-40 ಕಿ.ಮೀ ಬಿರುಗಾಳಿಯಲ್ಲಿ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಸೇರಿದಂತೆ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರುತ್ತದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 14-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದೆ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 7:52 am, ಭಾನುವಾರ, 19 ಅಕ್ಟೋಬರ್ 25



Source link

Leave a Reply

Your email address will not be published. Required fields are marked *