ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ

ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ


ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ

ದೇವನಹಳ್ಳಿ, ಅಕ್ಟೋಬರ್ 20: ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ (ದೊಡ್ಡಬಳ್ಳಾಪುರ) ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್‌ನಲ್ಲಿ ನಡೆದಿದೆ. ಪುಷ್ಪಾವತಿ (30) ಮೃತರಾಗಿದ್ದರೆ, 11 ತಿಂಗಳ ಹಿಂದೆ ತಪಸ್ಸಿಹಳ್ಳಿಯ ವೇಣು ಎಂಬವರ ಜತೆ ಇವರ ವಿವಾಹವಾಗಿತ್ತು. ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರ ಕಿರುಕುಳ ನೀಡಲಾಯಿತು. ವರದಕ್ಷಿಣೆ, ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರು ಎಂದು ಪುಷ್ಪಾವತಿ ಆರೋಪಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುಷ್ಪಾವತಿ ನಾಪತ್ತೆ ಆಗಿರುವ ಬಗ್ಗೆ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುಷ್ಪಾವತಿ ಆರೋಪವೇನು?

ನಾನು ಮದುವೆಯಾಗಿ ಗಂಡನ ಮನೆಗೆ ಹೋದ ದಿನದಿಂದ ನನ್ನ ಗಂಡ ನನ್ನ ಜೊತೆ ಸರಿಯಾಗಿ ಸಂಸಾರ ಮಾಡದೆ, ನನ್ನಿಂದ ದೂರ ಉಳಿಯುತ್ತಿದ್ದರು. ಸಂಸಾರ ಮಾಡು ಎಷ್ಟು ಪ್ರಯತ್ನ ಪಟ್ಟರು ಗಂಡ ನನ್ನ ಜೊತೆ ಸರಿಯಾಗಿ ಮಾತನಾಡಬೇಕು. ಈ ವಿಚಾರವನ್ನು ನಮ್ಮ ಅತ್ತೆ ಮಾವನಿಗೆ ತಿಳಿಸಿದರೆ ಎಲ್ಲಾ ಸರಿ ಹೋಗುತ್ತೆ ಸುಮ್ಮನಿರು ಎಂದು ಆರಂಭದಲ್ಲಿ ಹೇಳುತ್ತಿದ್ದರು. ಗಂಡನಿಗೆ ನಾವು ಮಗು ಮಾಡಿಕೊಳ್ಳೋಣ ಎಂದು ಕೇಳಿದರೆ, ಈಗ ಮಗು ಬೇಡ 1-2 ವರ್ಷ ಹೋಗಲಿ ನಂತರ ಮಗು ಮಾಡಿಕೊಳ್ಳೋಣ. ಈವಾಗ ಯಾಕೆ ಅರ್ಜೆಂಟ್ ಎಂದು ನನಗೆ ಬೈಯುತ್ತಿದ್ದರು. ನನಗೆ ಅನುಮಾನ ಬಂದು, ನಿನಗೇನಾದರೂ ತೊಂದರೆ ಇದ್ದರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳೋಣ ಎಂದು ಗಂಡನಿಗೆ ತಿಳಿಸಿದ್ದೆ. ಆಗ ನನಗೆ ಅವಾಚ್ಯ ಶಬ್ದಗಳಿಂದ ಬೈದಿದ್ದರು. ಅವರನ್ನು ಮುಟ್ಟಿದರೆ ಕಾಲಿನಿಂದ ನನ್ನ ಎದೆಗೆಲ್ಲ ಒಡೆಯುತ್ತದೆ. ಮಗು ಬೇಕು ಎಂದರೆ ನನ್ನ ಚಿಕ್ಕ ಮಗನ ಬಳಿ ಹೋಗು ಎಂದು ಅತ್ತೆ-ಮಾವ ಹೇಳುವಂತೆ. ಮೈದುನನೂ ಅದೇ ರೀತಿ ಮಾತಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ನನ್ನ ಹೆತ್ತವರಿಗೆ ತಿಳಿಸಿದ್ದು, ಅವರು ಬಂದು ಹೇಳಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಪುಷ್ಪಾವತಿ ಆರೋಪಿಸಿದ್ದಾರೆ.

ಇದನ್ನೂ ಓದಿ: ವಿವಾಹೇತರ ಸಂಬಂಧ, ಗಂಡನ ಬಿಟ್ಟು ಬಾರದಿದ್ದಕ್ಕೆ ಗರ್ಭಿಣಿಯನ್ನು ಕೊಂದ ಪ್ರಿಯಕರ

15 ದಿನಗಳ ಹಿಂದೆ ಗಂಡನ ಮನೆಯವರು ಸೇರಿ ನನ್ನ ಮೇಲೆ ಹೊಟ್ಟೆ. ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಈ ವೇಳೆ ನನ್ನನ್ನು ಎಳೆದಾಡಿದ ಪರಿಣಾಮ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುವುದು. ನೀನು ಕಂಪ್ಲೇಂಟ್ ಕೊಟ್ಟರೆ ಮತ್ತೆ ಮನೆಗೆ ಬರಲು ಸಾಧ್ಯವಿಲ್ಲ ಎಂದು ಮಾವ ಹೆದರಿಸಿದ್ದರು. ಮತ್ತೆ ಇದೇ ವಿಚಾರವಾಗಿ ಮನೆಯಲ್ಲಿ ಗಲಾಟೆ ಆಗಿದ್ದು, ಈ ವೇಳೆ ನಾನು ಪೊಲೀಸರಿಗೆ ದೂರು ಕೊಡೋದಾಗಿ ಹೇಳಿದ್ದೆ. ಆಗ ನನ್ನ ಕತ್ತು ಹಿಸುಕಿ ಮನೆಯಿಂದ ಆಚೆ ಹಾಕಿದ್ದಾರೆ. ಇದನ್ನು ಪ್ರಶ್ನಿಸಲು ನನ್ನ ತಮ್ಮ ಹೋದಾಗ ಆತನ ಮೇಲೆಯೂ ಹಲ್ಲೆ ಮಾಡಿದ್ದು, ಆತ ದೊಡ್ಡಬಳ್ಳಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದ ಎಂದು ಪುಷ್ಪಾವತಿ ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 1:57 pm, ಸೋಮ, 20 ಅಕ್ಟೋಬರ್ 25



Source link

Leave a Reply

Your email address will not be published. Required fields are marked *