Headlines

ಅತಿ ಹೆಚ್ಚು ಸಿಹಿ ಉತ್ಪನ್ನಗಳ ಮಾರಾಟ: ದಸರಾ, ದೀಪಾವಳಿಯಲ್ಲಿ ನಂದಿನಿ ಕಲಾಲ್

ಅತಿ ಹೆಚ್ಚು ಸಿಹಿ ಉತ್ಪನ್ನಗಳ ಮಾರಾಟ: ದಸರಾ, ದೀಪಾವಳಿಯಲ್ಲಿ ನಂದಿನಿ ಕಲಾಲ್


ಬೆಂಗಳೂರು, (ಅಕ್ಟೋಬರ್ 21): ಪ್ರತಿ ಮನೆಯ ಅಡುಗೆಮನೆಯಲ್ಲಿ ಹಾಸುಹೊಕ್ಕಾಗಿರುವ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ ನಂದಿನಿ (ನಂದಿನಿ), ಕೇವಲ ಹಾಲಿನ ಉತ್ಪನ್ನಗಳಿಗೆ ಸೀಮಿತವಾಗಿಲ್ಲ. ಮೊಸರು, ತುಪ್ಪ, ಸಿಹಿತಿಂಡಿಗಳು ಸೇರಿದಂತೆ ತನ್ನ ಉತ್ಪನ್ನಗಳ ಮೂಲಕ ಜನರ ಮನ ಗೆದ್ದಿದೆ. ಅಗ್ಗದ ಬೆಲೆಯಲ್ಲಿ ಗುಣಮಟ್ಟದ ಗುಣಮಟ್ಟದ ಪ್ರಮುಖ ದಸರಾ ಒದಗಿಸುತ್ತಾ, ನಂದಿ ದೇಶದ ಡೈರಿ ಬ್ರ್ಯಾಂಡ್‌ಗಳಲ್ಲಿ ಒಂದಾಗಿ ನಿಂತಿದ್ದು, ಮತ್ತು ದೀಪಾವಳಿ ಅವಧಿಯಲ್ಲಿ ರಾಜ್ಯದ ಹೆಮ್ಮೆಯ “ನಂದಿನಿ” ಬ್ರಾಂಡ್ ಹೊಸ ಕಮಾಲ್ ಮಾಡಿದೆ. ಹೌದು… ದಸರಾ ಮತ್ತು ದೀಪಾವಳಿ ಅವಧಿಯಲ್ಲಿ 100ಮೆಟ್ರಿಕ್ ಟನ್ ಸಿಹಿ ಉತ್ಪನ್ನ ಮಾರಾಟ ಮಾಡಿದ್ದು, ಒಟ್ಟಾರೆ 46.00 ಕೋಟಿ ರೂ. ದಾಖಲೆಯ ವಹಿವಾಟು ಸಾಧಿಸುವ ಮೂಲಕ ಒಂದು ಮಹತ್ವದ ಮೈಲುಗಲ್ಲು ನಿರ್ಮಿಸಲಾಗಿದೆ. ಕಳೆದ ವರ್ಷಕ್ಕೆ ಸಾಲಿಗೆ ಹೋಲಿಕೆ ಮಾಡಿ. 38ರಷ್ಟು ವಹಿವಾಟು ಪ್ರಗತಿ ಹೊಂದಿದ್ದು, ಇದು ಕೆ.ಎಂ.ಎಫ್ ಇತಿಹಾಸದಲ್ಲಿ ಸರ್ವಕಾಲಿಕ ದಾಖಲೆಯಾಗಿದೆ.

ಪ್ರತಿ ವರ್ಷ ದಸರಾ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಸಿಹಿತಿನಿಸುಗಳಿಗೆ ರಾಜ್ಯದಾದ್ಯಂತ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ಈ ಹಬ್ಬದ ಸಮಯದಲ್ಲಿ ನಂದಿನಿ ಬ್ರಾಂಡ್‌ನಡಿಯಲ್ಲಿ 40 ಕ್ಕೂ ಹೆಚ್ಚು ಸಿಹಿ ಮಾದರಿಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಕೆಎಂಎಫ್ ಮುಂಚಿನ ಸಿದ್ಧತೆಯನ್ನು ಕೈಗೊಳ್ಳಲಾಯಿತು. 2024ರ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ ಒಟ್ಟು 725 ಮೆಟ್ರಿಕ್ ಟನ್ ಸಿಹಿ ಉತ್ಪನ್ನ ಮಾರಾಟ ಮಾಡಿ ರೂ.33.48 ಕೋಟಿ ವಹಿವಾಟು ದಾಖಲಿಸಲಾಗಿದೆ.

ಇದನ್ನೂ ಓದಿ: ಮಧುಮೇಹಿಗಳಿಗೆ ಕೆಎಂಎಫ್ ದೀಪಾವಳಿ ಉಡುಗೊರೆ: ನಂದಿನಿ ಶುಗರ್ ಫ್ರೀ ಸಿಹಿತಿಂಡಿಗಳು ಮಾರುಕಟ್ಟೆಗೆ

ಆದಾಗ್ಯೂ, ಈ ವರ್ಷ ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು “ಒಟ್ಟಾಗಿ 110 ಮೆಟ್ರಿಕ್ ಟನ್ ಸಿಹಿ ಮಾರಾಟ ಮಾಡಿದ್ದು, ಒಟ್ಟಾರೆ ರೂ. 46.00 ಕೋಟಿಗಳ ದಾಖಲೆಯ ವಹಿವಾಟು” ಸಾಧಿಸುವ ಮೂಲಕ ಕಳೆದ ವರ್ಷದ ದಾಖಲೆಯನ್ನು ಮುರಿದಿದೆ.

ಅವಧಿಗೆ ಹೆಚ್ಚುವರಿ ಬೇಡಿಕೆಯನ್ನು ಪರಿಗಣಿಸಿ, ಸುಮಾರು ಎರಡು ತಿಂಗಳ ಮುಂಚಿತವಾಗಿ ಎಲ್ಲ ಸದಸ್ಯ ಹಾಲು ಒಕ್ಕೂಟಗಳ ಸಹಕಾರದೊಂದಿಗೆ ನಿಖರ ಯೋಜನೆ ರೂಪಿಸಿ 1000 ಮೆಟ್ರಿಕ್ ಟನ್ ಮಾರಾಟದ ಗುರಿಯನ್ನು ಹೊಂದಿಸಲಾಗಿದೆ. ಕಳೆದ ಸಾಲಿಗೆ ಹೋಲಿಕೆ ಮಾಡಿ ಶೇ.38ರಷ್ಟು ವಹಿವಾಟು ಪ್ರಗತಿ ಹೊಂದಿದ್ದು “ಇದು ಕೆ.ಎಂ.ಎಫ್ ಇತಿಹಾಸದಲ್ಲಿಯೇ ಸಾರ್ವಕಾಲಿಕ ದಾಖಲೆಯಾಗಿದೆ. ಈ ಸಾಧನೆ “ನಂದಿನಿ” ಬ್ರಾಂಡ್ ಗುಣಮಟ್ಟ, ಶುದ್ಧತೆ ಮತ್ತು ಗ್ರಾಹಕರ ವಿಶ್ವಾಸದ ಪ್ರತಿಫಲವನ್ನು ಹೊಂದಿದೆ, ರಾಜ್ಯದ ಹಾಲು ಉತ್ಪಾದಕರ ಶ್ರಮ ಮತ್ತು ಸಹಕಾರಿ ಬಲದ ಸಾಕ್ಷಿಯಾಗಿದೆ.

ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ಲಭ್ಯವಿನಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹೈನು ಸಹಕಾರ ಚಳುವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ. ಪ್ರತಿದಿನ ರಾಜ್ಯದ ವಿವಿಧ ಹೈನುಗಾರ ರೈತರಿಂದ ಸರಾಸರಿ 1 ಕೋಟಿ ಲೀಟರ್ ಲೀಟರ್ ಹಾಲು ಸಂಗ್ರಹಿಸಲಾಗುತ್ತದೆ, ಸುಮಾರು 65 ಲಕ್ಷ ಲೀಟರ್ ಹಾಲು, ಮೊಸರು ಹಾಗೂ ಯುಎಚ್‌ಟಿ ಹಾಲು ರಾಜ್ಯ ಮತ್ತು ಹೊರರಾಜ್ಯ ಮಾರುಕಟ್ಟೆಗಳಿಗೆ ತಲುಪಿಸಲಾಗುತ್ತಿದೆ.

“ನಂದಿನಿ” ಬ್ರಾಂಡ್‌ನಡಿಯಲ್ಲಿ ಹಾಲಿನೊಂದಿಗೆ ತುಪ್ಪ, ಬೆಣ್ಣೆ, ಪನೀರ್, ಸಿಹಿತಿನಿಸುಗಳು, ಹಾಲಿನ ಪುಡಿ, ಪಾನೀಯಗಳು ಸೇರಿದಂತೆ 175 ಕ್ಕೂ ಹೆಚ್ಚು ಅಧಿಕ ಬಗೆಯ ಹಾಲು ಹಾಗೂ ಹಾಲಿನ ರಾಜ್ಯ, ನೆರೆರಾಜ್ಯಗಳು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಕೇರಳ ಹಾಗೂ ದೆಹಲಿಯಲ್ಲಿ ಅಸ್ಸಾಂ ಮತ್ತು ಕೆಲದೇಶಗಳ ಮಾರುಕಟ್ಟೆಗಳಲ್ಲಿ ಯಶಸ್ವಿಯಾಗಿ ಮಾರಾಟವಾಗುತ್ತಿದೆ.

ಹಾಲು ಮತ್ತು ಹಾಲಿನ ಉತ್ಪನ್ನಗಳ ಶುದ್ಧತೆ, ಗುಣಮಟ್ಟ ಮತ್ತು ಕೈಗೆಟುಕುವ ಬೆಲೆಯು “ನಂದಿನಿ” ಬ್ರಾಂಡ್ ಅನ್ನು ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಮಾಡಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *