ನಾಳೆಯ ಹವಾಮಾನ: 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​; ಕರವಾಳಿ, ಮಲೆನಾಡಲ್ಲಿ ಧಾರಾಕಾರ ಮಳೆ ನಿರೀಕ್ಷೆ

ನಾಳೆಯ ಹವಾಮಾನ: 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​; ಕರವಾಳಿ, ಮಲೆನಾಡಲ್ಲಿ ಧಾರಾಕಾರ ಮಳೆ ನಿರೀಕ್ಷೆ


ಬೆಂಗಳೂರು, ಅಕ್ಟೋಬರ್ 21: ರಾಜ್ಯದಲ್ಲಿ ಮಳೆ ಮತ್ತಷ್ಟು ದಿನ ಮುಂದುವರಿಯುವ ಸಾಧ್ಯತೆ ಇದೆ (ಹವಾಮಾನ ಮುನ್ಸೂಚನೆ) ಇದ್ದು, 7 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಉಳಿದ 24 ಜಿಲ್ಲೆಗಳಲ್ಲಿಯೂ ಸಾಧಾರಾಣ ಮಳೆಯಾಗಲಿರುವ ಹಿನ್ನಲೆ ಯಲ್ಲೋ ಅಲರ್ಟ್ ಇರಲಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದೆ, ಚಾಮರಾಜನಗರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ.

ಕರಾವಳಿಯಲ್ಲಿ ವರುಣಾರ್ಭಟ

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ, ಆರೆಂಜ್ ಎಚ್ಚರಿಕೆ ನೀಡಲಾಗಿದೆ. ಮಳೆಯೊಂದಿಗೆ ಹೆಚ್ಚಿನ ಪ್ರಮಾಣದ ಗಾಳಿಯು ಇರುವ ಸಾಧ್ಯತೆಯ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: ಎಚ್ಚರ…ಕರ್ನಾಟಕದಲ್ಲಿ ಭಾರಿ ಎಚ್ಚರಿಕೆ: ಎಲ್ಲಿಯವರೆಗೆ ಗೊತ್ತಾ..?

ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದೆ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಇರಲಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಗಾಳಿ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. 86ರಷ್ಟು ಮಳೆಯಾಗುವ ಸಾಧ್ಯತೆ ಇರುತ್ತದೆ, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾವನ ಇಲಾಖೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *