ಬೆಂಗಳೂರು ದಕ್ಷಿಣ (ರಾಮನಗರ), (ಅಕ್ಟೋಬರ್ 21): ಹೆಂಡತಿ ಕಿರುಕುಳ ತಾಳಲಾರದೇ ಗಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ (ಬೆಂಗಳೂರು ದಕ್ಷಿಣ) ಜಿಲ್ಲೆ ರಾಮನಗರ ತಾಲೂಕಿನ ಬಿಡದಿಯಲ್ಲಿ (ಬಿಡದಿ) ನಡೆದಿದೆ. ರೇವಂತ್ ಕುಮಾರ್ (30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪತ್ನಿಯ ಕಿರುಕುಳವನ್ನು ಸೆಲ್ಫಿ ವಿಡಿಯೋ ಮಾಡಿ ಬಿಡದಿ ಬಳಿ ರೈಲಿಗೆ ತಲೆಕೊಟ್ಟ ರೇವಂತ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ತಾಲೂಕಿನ ಅಣ್ಣೆದೊಡ್ಡಿ ಗ್ರಾಮದ ರೇವಂತ್ ಬಿಡದಿ ಬಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಕೇವಲ 5 ತಿಂಗಳ ಹಿಂದೆ ವಿವಾಹವಾಗಿತ್ತು.
ಬಿಡದಿ ಬಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ರೇವಂತ್, ಕಳೆದ 5 ತಿಂಗಳ ಹಿಂದೆ ವಿವಾಹವಾಗಿದ್ದು, ಮನೆಯಲ್ಲಿ ಪತ್ನಿ ತುಂಬಾ ಕಷ್ಟ ಕೊಡುತ್ತಿದ್ದಾಳೆ. ನನ್ನ ಸಾವಿಗೆ ನನ್ನ ಪತ್ನಿ ಕಾರಣ ಎಂದು ಸೆಲ್ಫಿ ವಿಡಿಯೋ ಮಾಡಿ ರೈಲಿಗೆ ತಲೆ ಕೊಟ್ಟು ಪ್ರಾಣ ಕಳೆದುಕೊಂಡಿದ್ದಾನೆ. ಈ ಸಂಬಂಧ ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ತನಿಖೆ ಮುಂದುವರೆದಿದೆ.
ವಿಡಿಯೋನಲ್ಲೇನಿದೆ?
ಇನ್ನು ರೇವಂತ್ ಸಾಯುವ ಮುನ್ನ ಸೆಲ್ಫಿ ವಿಡಿಯೋ ಮಾಡಿದ್ದು, ನಾನು ಇವತ್ತು ಸಾಯೋಕೆ ಹೊರಟ್ಟಿದ್ದೇನೆ. ಅದಕ್ಕೆ ಕಾರಣ ಹೆಂಡ್ತಿ, ತುಂಬ ಕಷ್ಟ ಕೊಡುತ್ತಿದ್ದಾಳೆ. ಜೀವನ ಮಾಡುವುದಕ್ಕೆ ಆಗುತ್ತಿಲ್ಲ. ಬದುಕುವುದಕ್ಕೂ ಆಗುತ್ತಿಲ್ಲ. ನನ್ನ ಹೆಂಡ್ತಿ ಮಲ್ಲಿಕಾಯಿಂದ ತುಂಬಾ ಟಾರ್ಚರ್ ಆಗುತ್ತಿದೆ. ನನ್ನ ಸಾವಿಗೆ ಅವಳೇ ಕಾರಣ ಎಂದು ವಿಡಿಯೋ ನಲ್ಲಿ ಹೇಳಿದ್ದಾನೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 5:53 pm, ಮಂಗಳವಾರ, 21 ಅಕ್ಟೋಬರ್ 25