ರಾಜ್ಯದಾದ್ಯಂತ ಭಾರೀ ಮಳೆ, 7 ಜಿಲ್ಲೆಗಳಿಗೆ ಆರೆಂಜ್ ಎಚ್ಚರಿಕೆ
ಬೆಂಗಳೂರು, ಅಕ್ಟೋಬರ್ 22: ಕರ್ನಾಟಕದಲ್ಲಿ ಇಂದು ಭಾರಿ ಮಳೆಯಾಗುತ್ತದೆ (ಹವಾಮಾನ ಮುನ್ಸೂಚನೆ) ಸಾಧ್ಯತೆಯಿದೆ. ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಎಲ್ಲಾ ಎಚ್ಚರಿಕೆ ನೀಡಲಾಗಿದೆ.ಕರಾವಳಿಯಲ್ಲಿ ವರುಣಾರ್ಭಟ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೊಂದಿದೆ.
ಎಲ್ಲೆಲ್ಲಿ ಮಳೆ?
ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.
ಕರಾವಳಿಯಲ್ಲಿ ವರುಣಾರ್ಭಟ
ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ, ಆರೆಂಜ್ ಎಚ್ಚರಿಕೆ ನೀಡಲಾಗಿದೆ. ಮಳೆ ಜೊತೆ ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. . ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಗಾಳಿ ಮಳೆ
ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. 86ರಷ್ಟು ಮಳೆಯಾಗುವ ಸಾಧ್ಯತೆ ಇರುತ್ತದೆ, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾವನ ಇಲಾಖೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.