ಬೀದರ್, ಅಕ್ಟೋಬರ್ 22: ಆರ್ ಎಸ್ ಎಸ್ ಎಸ್ ಪಥಸಂಚಲನದಲ್ಲಿ ಭಾಗಿಯಾದ ಆರೋಪದ ಮೇಲೆ ಮೊನ್ನೆ ಅಷ್ಟೇ ರಾಯಚೂರು ಗ್ರಾಮ ಪಂಚಾಯ್ತಿ ಪಿಡಿಒ ಒಬ್ಬರ ಗ್ರಾಮೀಣಾಭಿವೃದ್ಧಿ ಇಲಾಖೆ ಅಮಾನತು ಮಾಡಿತ್ತು. ಈ ಬಗ್ಗೆ ಪರ ವಿರೋಧ ಚರ್ಚೆಗಳ ನಡುವೆ ಇದೀಗ ಮತ್ತೊಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಹೌದು…ಬೀದರ್ ಜಿಲ್ಲೆಯ ಬಸವಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಡುಗೆ ಸಹಾಯಕರಾದ ಪ್ರಮೋದ್ ರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ.
ಸೆಪ್ಟೆಂಬರ್ 13 ರಂದು ಬಸವಕಲ್ಯಾಣದಲ್ಲಿ ನಡೆದ RSS ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಯಾವುದೇ ಸಂಘ ಸಂಸ್ಥೆಯಲ್ಲಿ ಭಾಗವಹಿಸಬಾರದೆಂದು ಸಂಸ್ಥೆಯಿಂದ ವೇತನ ಪಡೆದಿದೆ. ಈ ಘಟನೆ ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ನೌಕರರಲ್ಲಿ ಆತಂಕ ಮೂಡಿಸಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.