ಬೆಂಗಳೂರು, ಅಕ್ಟೋಬರ್ 22: ಬೆಂಗಳೂರು ಉತ್ತರ ತಾಲ್ಲೂಕಿನ ಗಂಗೊಂಡನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ರಾತ್ರಿ ಮನೆಗೆ ನುಗ್ಗಿ ಮೂವರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ. ಮಹಿಳೆ ವಾಸವಿದ್ದ ಬಾಡಿಗೆ ಮನೆಯಲ್ಲೇ ಆಕೆಯ ಮೇಲೆ ಅತ್ಯಾಚಾರ ನಡೆದಿದೆ. ಸಂತ್ರಸ್ತೆ ನೀಡಿರುವ ದೂರಿನ ಪ್ರಕರಣ ದಾಖಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ