ಬೆಂಗಳೂರು, ಅ.23: ಬೆಂಗಳೂರು ಟ್ರಾಫಿಕ್ ಪೊಲೀಸರು (ಸಂಚಾರ ಪೊಲೀಸ್) ತಾವು ಮಾಡಬೇಕಾದ ಕೆಲಸ ಬಿಟ್ಟು ಬೇರೆಲ್ಲ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಇಷ್ಟೊಂದು ಟ್ರಾಫಿಕ್, ಅಲ್ಲಿಂದ ಆಗುತ್ತಿರುವ ಅಪಘಾತಗಳು, ಸರಿ ಮಾಡುವುದು ಬಿಟ್ಟು, ಸಾರ್ವಜನಿಕರ ಮೇಲೆ ದರ್ಪ ತೋರಿಸುತ್ತಿದ್ದಾರೆ. ಇತ್ತೀಚೆಗೆ ಟ್ರಾಫಿಕ್ ಸಾರ್ವಜನಿಕರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿಯನ್ನು ಬೆಳೆಸಿದ್ದಾರೆ. ಇದೀಗ ಎಕ್ಸ್ನಲ್ಲಿ ಖಾತೆ ಟ್ರಾಫಿಕ್ ಪೊಲೀಸ್ ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ನೋಡಿ ಬಹಳಷ್ಟು ಸೋಶಿಯಲ್ ಮೀಡಿಯಾ ಬಳಕೆದಾರರು ಟ್ರಾಫಿಕ್ ಪೊಲೀಸ್ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈರಲ್ ಆಗಿರುವ ಪೋಸ್ಟ್ ಪ್ರಕಾರ, ನಗರದ ಶೆಲ್ ಬಂಕ್ ಪಕ್ಕದಲ್ಲಿರುವ ಆರ್ಟಿ ನಗರ ಫ್ಲೈಓವರ್ ಬಳಿ ಈ ಘಟನೆ ನಡೆದಿದೆ. ಕ್ಯಾಬ್ ಚಾಲಕ ರಸ್ತೆ ಬದಿಯಲ್ಲಿ ಕಾರು ನಿಲ್ಲದಕ್ಕೆ ಟ್ರಾಫಿಕ್ ಪೊಲೀಸ್ ಪ್ರಶ್ನೆ ಮಾಡಲಾಗಿದೆ. ಈ ವೇಳೆ ಇಬ್ಬರ ನಡುವೆ ನಡೆದಿದೆ. ಕೋಪಗೊಂಡ ಪೊಲೀಸ್ ಸಾರ್ವಜನಿಕರ ಮುಂದೆ ಚಾಲಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿರುವ ವಿಡಿಯೋ. ತಕ್ಷಣ ಈ ಗೂಂಡಾ ಅಧಿಕಾರಿಯ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಕಮೆಂಟ್ ಮಾಡಲಾಗಿದೆ.
ವೈರಲ್ ಪೋಸ್ಟ್ ಇಲ್ಲಿದೆ ನೋಡಿ:
ಶೆಲ್ ಪೆಟ್ರೋಲ್ ಬಂಕ್ ಪಕ್ಕದಲ್ಲಿರುವ ಫ್ಲೈಓವರ್ ಬಳಿ ಆರ್ಟಿ ನಗರದಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ, ಅಲ್ಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ಸಣ್ಣ ಪಾರ್ಕಿಂಗ್ ಸಮಸ್ಯೆಗೆ ಅಮಾಯಕ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ವೈರಲ್ ವೀಡಿಯೊ ತೋರಿಸುತ್ತದೆ. ವೀಡಿಯೊ ಮತ್ತು ಅದರಲ್ಲಿ ಬರೆದ ಸಂದೇಶದ ಪ್ರಕಾರ,… pic.twitter.com/Zu8V9d0Wjp
— ಕರ್ನಾಟಕ ಪೋರ್ಟ್ಫೋಲಿಯೋ (@karnatakaportf) ಅಕ್ಟೋಬರ್ 22, 2025
ಇನ್ನು ಈ ವಿಡಿಯೋ ನೋಡಿ ವ್ಯಕ್ತಿಯೊಬ್ಬರ ಪೊಲೀಸರ ಕರ್ತವ್ಯದ ಬಗ್ಗೆ ನೆನಪಿಸಿದ್ದಾರೆ. ”ಸಮವಸ್ತ್ರವು ಭಯವನ್ನುಂಟುಮಾಡಲು ಅಲ್ಲ, ಗೌರವ ನೀಡುವ ಉದ್ದೇಶದಿಂದ ನೀಡಲಾಗುತ್ತದೆ. ಹೌದು ಆ ಸ್ಥಳದಲ್ಲಿ ಪಾರ್ಕಿಂಗ್ ಮಾಡಬಾರದು, ಆದರೆ ಅಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕಿರುವುದು ಯಾರ ಕೆಲಸ, ಪಾರ್ಕಿಂಗ್ ಮಾಡಿದ ಮಾತ್ರಕ್ಕೆ ಆತನ ಮೇಲೆ ಹಲ್ಲೆ ಮಾಡಬೇಡ? ಇತರ ಬಳಕೆದಾರ ಕಾನೂನು ಏನು ಹೇಳುತ್ತದೆ? ನೋ ಪಾರ್ಕಿಂಗ್ ನಲ್ಲಿ ವಾಹನ ನಿಲ್ಲಿಸಿದ್ರೆ ದಂಡ ಹಾಕಿ, ಆದರೆ ಒಬ್ಬ ಸಮಸ್ತ್ರದಲ್ಲಿರುವ ಅಧಿಕಾರಿ ಸಾರ್ವಜನಿಕವಾಗಿ ಹಲ್ಲೆ ಮಾಡಿದರೆ ಎಷ್ಟು ಸರಿ ಎಂದು ಕೇಳಿದ್ದಾರೆ.
ಇದನ್ನೂ ಓದಿ: ನಡುರಸ್ತೆಯಲ್ಲೇ ಸವಾರನಿಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್: ಸಿಬ್ಬಂದಿ ದರ್ಪಕ್ಕೆ ನೆಟ್ಟಿಗರು ಆಕ್ರೋಶ
ಇತ್ತೀಚೆಗೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೈಕ್ ಸವಾರನಿಗೆ ನಡು ರಸ್ತೆಯಲ್ಲೇ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ನಡೆದಿದೆ. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ