ನಾಳೆಯ ಹವಾಮಾನ: ಕರಾವಳಿಗೆ ವರುಣಾಘಾತ, 27 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ನಾಳೆಯ ಹವಾಮಾನ: ಕರಾವಳಿಗೆ ವರುಣಾಘಾತ, 27 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​


ಬೆಂಗಳೂರು, ಅಕ್ಟೋಬರ್ 23: ರಾಜ್ಯದಲ್ಲಿ ಇನ್ನೂ ಕೆಲವುದಿನಗಳ ಕಾಲ ಮಳೆ (ಹವಾಮಾನ ಮುನ್ಸೂಚನೆ) ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ. 27 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಇರಲಿದೆ. ಕಳೆದ ಎರಡು ಮೂರು ದಿನಗಳಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರಿಸಿದ್ದು, ಇದು ಈ ಕೆಲ ದಿನ ಮುಂದುವರಿಯುವ ನಿರೀಕ್ಷೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ.

ರಾಜ್ಯದ ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಭಾರಿ ಮಳೆಯ ನಿರೀಕ್ಷೆ ಇದೆ. ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರಲಿದೆ, ಪ್ರವಾಹ ಮತ್ತು ಗುಡ್ಡ ಪ್ರದೇಶದಲ್ಲಿ ಭೂಕುಸಿತವಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರಮ ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಎಲ್ಲೋ ಎಚ್ಚರಿಕೆ ಘೋಷಿಸಲಾಗಿದೆ, ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬಾಗಲಕೋಟೆ ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಮತ್ತು ಬಳ್ಳಾರಿಯಲ್ಲಿ ಭಾರಿ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ. ಹಾವೇರಿಯ ಕೆಲವೆಡೆ ಪ್ರವಾಹ ಸಾಧ್ಯತೆ ಇದೆ.

ಇದನ್ನೂ ಓದಿ: ಕರ್ನಾಟಕಾದ್ಯಂತ ಅ.29ರವರೆಗೂ ವಿಪರೀತ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಎಚ್ಚರಿಕೆ

ಬೆಂಗಳೂರಿನಲ್ಲೂ ನಾಳೆ ಮಳೆಯಾಗುವ ಸಾಧ್ಯತೆಯಿದೆ, ಸಂಜೆ ವೇಳೆಗೆ ವರುಣ ಆರ್ಭಟಿಸಬಹುದು ಎಂದು ಅಂದಾಜಿಸಲಾಗಿದೆ. ಸಂಜೆ 5 ರಿಂದ ರಾತ್ರಿ 8ಗಂಟೆ ನಡುವೆ ಮಳೆಯನ್ನು ನಿರೀಕ್ಷಿಸಲಾಗಿದೆ. ಬೆಳಿಗ್ಗೆ ಮತ್ತು ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ ಮಧ್ಯಾಹ್ನ, ಗಾಳಿಯ ವೇಗ ಗಂಟೆಗೆ 14-24 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 26.5 ಡಿಗ್ರಿ ಸೆಲ್ಸಿಯಸ್ ಇರಲಿದೆ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *