ಇನ್‌ಸ್ಟಾನಲ್ಲಿ ಪರಿಚಯಿಸಿಕೊಂಡು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಅಪ್ರಾಪ್ತೆ ಈಗ ಗರ್ಭಿಣಿ

ಇನ್‌ಸ್ಟಾನಲ್ಲಿ ಪರಿಚಯಿಸಿಕೊಂಡು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಅಪ್ರಾಪ್ತೆ ಈಗ ಗರ್ಭಿಣಿ


ಹಾವೇರಿ, (ಅಕ್ಟೋಬರ್ 24): ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಹಾವೇರಿ (ಹಾವೇರಿ) ಜಿಲ್ಲೆ ಹಾನಗಲ್ ಪೊಲೀಸ್ ಠಾಣಾ ನಡೆದಿದೆ. ಇನ್ಸ್ಟಾಗ್ರಾಂನಲ್ಲಿ ಬಾಲಕಿ ಪರಿಚಯಿಸಿಕೊಂಡ ಯುವಕ, ತನ್ನಿಬ್ಬರು ಗೆಳೆಯರ ಜೊತೆ ಸೇರಿಕೊಂಡು ಅತ್ಯಾಚಾರ ಎಸಗಿದ್ದಾರೆ. ಉದಯ್ ಕರಿಯಣ್ಣನವರ, ಕಿಶನ್ ವಡ್ಡರ್, ಕಿಶನ್ ವಡ್ಡರ್, ಚಂದ್ರು ಗೊಲ್ಲರ ಎಂಬುವರು ಆಕಾಶ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯ ಬಾಲಕಿ ಗರ್ಭಾವತಿಯಾಗಿ ಈ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಮುಖ ಆರೋಪಿ ಉದಯ್ ಇದೇ ಮಾರ್ಚ್ ನಲ್ಲಿ ಸ್ಟಾಗ್ರಾಂನಲ್ಲಿ ಬಾಲಕಿಯ ಪರಿಚಯ ಮಾಡಿಕೊಂಡಿದ್ದ. ಬಳಿಕೆ ಆಕೆಯನ್ನು ಪುಸಲಾಯಿಸಿ ದೌರ್ಜನ್ಯ ಎಸಗಿದ್ದಾನೆ. ಬಳಿಕ ಉದಯ್ ಕಿಶನ್ ವಡ್ಡರ್, ಆಕಾಶ್ ಮಂತಗಿ, ಚಂದ್ರು ಗೊಲ್ಲರ ಗೆಳೆಯರು ಏಪ್ರಿಲ್ ತಿಂಗಳಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈಗ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆಯೇ ಈ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಮೊದಲು ಉದಯ್ ಎಂಬಾತ ಬಾಲಕಿಯನ್ನು ಪರಿಚಿತನಾಗಿ ಬಳಿಕ ಆಕೆಯನ್ನು ಪುಸಲಾಯಿಸಿ ಬಳಸಿಕೊಂಡಿದ್ದಾನೆ. ಬಳಿಕ ಉದಯ್ ತನ್ನ ಸ್ನೇಹಿತರಿಗೂ ಪರಿಚಿಸಿದ್ದು, ನಂತರ ಎಲ್ಲರೂ ಸೇರಿಕೊಂಡು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿದ್ದು, ತನಿಖೆಯಲ್ಲಿ ಈ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ.

ಹೆಣ್ಣು ಮಕ್ಕಳ ರಕ್ಷಣೆಯ ಸರ್ಕಾರ ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿರುವ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 10 ಸಾವಿರಕ್ಕೂ ಅಧಿಕ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆದಿದೆ. ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣ ನಾಗರಿಕ ಸಮಾಜದ ಆತಂಕಕ್ಕೆ ಕಾರಣವಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ , ಹಾವೇರಿ ಟಿವಿ9

ರಾಜ್ಯದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 8:41 pm, ಶುಕ್ರ, 24 ಅಕ್ಟೋಬರ್ 25



Source link

Leave a Reply

Your email address will not be published. Required fields are marked *