ಬೆಂಗಳೂರು, ಅಕ್ಟೋಬರ್ 25: ಕರ್ನಾಟಕದ (ಕರ್ನಾಟಕ) ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಕಡೆ, ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಹವಾಮಾನ ತಜ್ಞ ಬದರಿನಾಥ್ ಮಾಹತಿ ನೀಡಿದ್ದು, ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಬದಲಾವಣೆಯಾಗಿದೆ. 27 ರಂದು ಭಾರೀ ಮಳೆಯಾಗಲಿದೆ ಎಂದು.
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಸಹಜವಾಗಿದ್ದು, ಹಗುರವಾದ ಸಾಧಾರಣ ಮಳೆ ಸರ್ವೇ ಸಾಮಾನ್ಯವಾಗಿದೆ. ಹೀಗಾಗಿ ಇದು ನಗರದ ಕೆಲವು ವ್ಯಾಪಾರ ವಹಿವಾಟುಗಳ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಬೀದಿ ಬದಿ ವ್ಯಾಪಾರಿಗಳಿಗಂತೂ ವ್ಯಾಪಾರವಿಲ್ಲದೆ ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಸಾವಿರಾರು ರೂಪಾಯಿ ಬಂಡವಾಳ ಹಾಕಿರುವವರಿಗೂ, ಗ್ರಾಹಕರು ಅಂಗಡಿಗಳತ್ತ ಮುಖ ಮಾಡುತ್ತಿಲ್ಲ ಎಂಬ ಚಿಂತೆ ಕಾಡುತ್ತಿದೆ. ಹೀಗಾಗಿಯೇ ಮಳೆ ಮುಂದುವರಿದರೆ ಕಷ್ಟ ಎಂದು ಬೀದಿ ಬದಿ ವ್ಯಾಪಾರಿಗಳು ಹೋಗಿದ್ದಾರೆ.
ಅಕ್ಟೋಬರ್ 24 ರಿಂದ ನವೆಂಬರ್ 2 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಕೆಲವೊಮ್ಮೆ ವ್ಯಾಪಕವಾಗಿ ಮತ್ತು ಕೆಲವೊಮ್ಮೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 28 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ವಿಶೇಷ ಸಂದೇಶದಲ್ಲಿ ಇದೆ.
ಮಳೆಮುನ್ಸೂಚನೆಯ ಎಕ್ಸ್ ಸಂದೇಶ
ಅಕ್ಟೋಬರ್ 24 ರಿಂದ ನವೆಂಬರ್ 2 ರವರೆಗೆ #ಕೃಷ್ಣಾ #ಜಲಾನಯನ ಪ್ರದೇಶದ #ಮಳೆ #ಮುನ್ಸೂಚನೆ: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಅಕ್ಟೋಬರ್ 29ರವರೆಗೆ ಚದುರಿನಿಂದ ವ್ಯಾಪಕವಾಗಿ ಸಾಧಾರಣ ಮಳೆ, ಅಕ್ಟೋಬರ್ 28 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
@ಕರ್ನಾಟಕ ವಾರ್ತೆ #KSNDMC pic.twitter.com/zP6YvdZJ1Z— ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿಗಾ ಕೇಂದ್ರ (@ಕರ್ನಾಟಕ ಎಸ್ಎನ್ಡಿಎಂಸಿ) ಅಕ್ಟೋಬರ್ 24, 2025
ಬೆಂಗಳೂರಿಗೆ ಎ. 25 ಮತ್ತು 26 ರಂದು ಎಲ್ಲೋ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಎ. 26 ರಂದು ಯೆಲ್ಲೋ ಹಾಗೂ 27 ರಂದು ಆರೆಂಜ್ ಎಚ್ಚರಿಕೆಯನ್ನು ಪ್ರಕಟಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಒಟ್ಟಿನಲ್ಲಿ, ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ವಿವಿಧೆಡೆ ವರ್ಷಧಾರೆಯಾಗಲಿದೆ ಎಂಬ ಖಚಿತ ಮಾಹಿತಿ ಹವಾಮಾನ ಇಲಾಖೆ ನೀಡಿದೆ.
ಇದನ್ನೂ ಓದಿ: 28 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್, ಕರಾವಳಿಗೆ ಕೊಂಚ ರಿಲೀಫ್
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ