Headlines

ಆಗ್ರಾ ರಸ್ತೆ ಅಪಘಾತ: ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದ ಕಾರು, 5 ಸಾವು, 3 ಜನರಿಗೆ ಗಾಯ

ಆಗ್ರಾ ರಸ್ತೆ ಅಪಘಾತ: ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದ ಕಾರು, 5 ಸಾವು, 3 ಜನರಿಗೆ ಗಾಯ


ಆಗ್ರಾ, ಅ.25: ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು, ಮೂರು ಜನ ಸಂಭವಿಸಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ಉತ್ತರ ಪ್ರದೇಶದ (ಉತ್ತರ ಪ್ರದೇಶ) ಆಗ್ರಾದ ನಾಗ್ಲಾ ಬುಧಿ ಪ್ರದೇಶದ ಬಳಿ ನಡೆದಿದೆ. ಪೊಲೀಸ್ ಅಧಿಕಾರಿಗಳು ತಿಳಿಸುವಂತೆ ಟಾಟಾ ನೆಕ್ಸಾನ್ ಕಾರು ಮೊದಲು ಬೈಕ್‌ಗೆ ಡಿಕ್ಕಿ ಹೊಡೆದು ನಂತರ ಡಿವೈಡರ್‌ಗೆ ಡಿಕ್ಕಿ ಹೊಡದು ರಸ್ತೆ ಪಕ್ಕದಲ್ಲಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಹೇಳಿದ್ದಾರೆ.

ಮೃತರನ್ನು ಬಬ್ಲಿ (33), ಭಾನು ಪ್ರತಾಪ್ (25), ಕಮಲ್ (23), ಕೃಷ್ಣ (20) ಮತ್ತು ಬಂತೇಶ್ (21) ಎಂದು ಗುರುತಿಸಲಾಗಿದೆ . ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರತ್ಯಕ್ಷದರ್ಶಿ ಒಬ್ಬರು ಘಟನೆಯ ಬಗ್ಗೆ ವಿವರಿಸಿದ್ದಾರೆ. ತಮ್ಮ ಅಂಗಡಿಯಲ್ಲಿ ಕುಳಿತಿದ್ದಾಗ ವೇಗವಾಗಿ ಬರುತ್ತಿದ್ದ ಕಾರನ್ನು ನೋಡಿದೆ. ನಂತರ ಒಂದು ದೊಡ್ಡ ಶಬ್ದ ಬಂತು. ಹತ್ತಿರ ಹೋಗಿ ನೋಡಿದಾಗ ಕಾರಿನ ಕೆಳಗೆ ಹಲವಾರು ಜನರು ಸಿಲುಕಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಿ ಆಸ್ಪತ್ರೆ ವೈದ್ಯೆ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ನಾಲ್ಕು ಪುಟಗಳ ಡೆತ್ ನೋಟ್‌ನಲ್ಲಿ ಸಂಸದರ ಹೆಸರು!

ಇನ್ನು ಕಾರಿನ ಕೆಳಗೆ ಸಿಲುಕಿದ ಜನರನ್ನು ಹೊರತೆಗೆದು, ಹಾಗೂ ಗಾಯಗಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಪಘಾತಕ್ಕೆ ಕಾರಣವಾಗಿದ್ದ ಕಾರು ಚಾಲಕನನ್ನು ಪೊಲೀಸರು ಬಂಧಿಸಲು ಬಂದಿದ್ದಾರೆ. ಈ ವೇಳೆ ಅಲ್ಲಿದ್ದ ಕೆಲವು ಜನ ಚಾಲಕನಿಗೆ ಥಳಿಸಿದ್ದಾರೆ. ಅಲ್ಲಿಯ ಜನ ಹೇಳುವ ಪ್ರಕಾರ ಕಾರು ಚಾಲಕ ವಿಪರೀತ ಕುಡಿದ್ದ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ತನಿಖೆಯನ್ನು ನಡೆಸುತ್ತಿದೆ.

ದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *