ಬೆಂಗಳೂರು, ಅಕ್ಟೋಬರ್ 26: ಏಕಾಏಕಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಿನಸಿ ಅಂಗಡಿ ಹೊತ್ತಿರುವ ಘಟನೆ ಬೆಂಗಳೂರಿನ (ಬೆಂಗಳೂರು) ಬನಶಂಕರಿಯ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ. ಶಂಭುಶೆಟ್ಟಿ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಅವಘಡ ನಡೆದಿದೆ. ಎರಡು ಅಂತಸ್ತಿನ ಕಟ್ಟಡದಲ್ಲಿ ಅಂಗಡಿ ಇದ್ದು, ನೆಲ ಮಹಡಿಯಲ್ಲಿದ್ದ ಯುಪಿಎಸ್ ಸಿಡಿದು ಬೆಂಕಿ ಹೊತ್ತಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೊದಲ ಮಹಡಿಯವರೆಗೂ ಬೆಂಕಿಯ ಜ್ವಾಲೆ ಆವರಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.