IND vs AUS: ಭಾರತ vs ಆಸ್ಟ್ರೇಲಿಯಾ ಟಿ20 ಸರಣಿ ವೇಳಾಪಟ್ಟಿ

IND vs AUS: ಭಾರತ vs ಆಸ್ಟ್ರೇಲಿಯಾ ಟಿ20 ಸರಣಿ ವೇಳಾಪಟ್ಟಿ


ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯ ಅಂತರ ಆಸ್ಟ್ರೇಲಿಯಾ ತಂಡ 2-1 ರಿಂದ ಗೆದ್ದುಕೊಂಡಿದೆ. ಇನ್ನು ಉಭಯ ತಂಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿದ್ದಾರೆ. ಅಕ್ಟೋಬರ್ 29 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಒಟ್ಟು 5 ಟಿ20 ಪಂದ್ಯಗಳನ್ನಾಡಿದೆ. ಈ ಸರಣಿಯ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ…

ಭಾರತ ಮತ್ತು ಆಸ್ಟ್ರೇಲಿಯಾ ಟಿ20 ಸರಣಿ:

  • ಅಕ್ಟೋಬರ್ 29: ಮೊದಲ ಟಿ20 ಪಂದ್ಯ – ಮನುಕಾ ಓವಲ್, ಕ್ಯಾನ್‌ಬೆರಾ
  • ಅಕ್ಟೋಬರ್ 31: ಎರಡನೇ ಟಿ20 ಪಂದ್ಯ– ಮೆಲ್ಬೋರ್ನ್ ಕ್ರಿಕೆಟ್ ಮೈದಾನ
  • ನವೆಂಬರ್ 2, ಮೂರನೇ ಟಿ20 ಪಂದ್ಯ– ಬೆಲ್ಲೆರಿವ್ ಓವಲ್, ಹೋಬಾರ್ಟ್
  • ನವೆಂಬರ್ 6: ನಾಲ್ಕನೇ ಟಿ20 ಪಂದ್ಯ – ಗೋಲ್ಡ್ ಕೋಸ್ಟ್ ಕ್ರೀಡಾಂಗಣ, ಕ್ಯಾರಾರಾ
  • ನವೆಂಬರ್ 8: ಐದನೇ ಟಿ20 ಪಂದ್ಯ– ದಿ ಗಬ್ಬಾ, ಬ್ರಿಸ್ಬೆನ್

ಪಂದ್ಯ ಶುರುವಾಗುವುದು ಎಷ್ಟು ಗಂಟೆಗೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಭಾರತೀಯ ಕಾಲಮಾನ ಮಧ್ಯಾಹ್ನ 1.45 ರಿಂದ ಆರಂಭವಾಗಿದೆ. ಇನ್ನು ಟಾಷ್ ಪ್ರಕ್ರಿಯೆ ಮಧ್ಯಾಹ್ನ 1.15ಕ್ಕೆ.

ಯಾವ ಚಾನೆಲ್ ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್ ಚಾನೆಲ್ ನಲ್ಲಿ ವೀಕ್ಷಿಸಬಹುದು. ಜೊತೆಗೆ ಜಿಯೋ ಹಾಟ್‌ಸ್ಟಾರ್ ಆಯಪ್ ಹಾಗೂ ವೆಬ್ ಸೈಟ್‌ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.

ಉಭಯ ತಂಡಗಳು:

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಸಂಕ ಸುಂದರ್ ಸಿಂಗ್, ವಾಜುಪರ್ ಸಿಂಗ್, ಹರ್ಷಿತ್ ರಾಣಾ.

ಇದನ್ನೂ ಓದಿ: ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾಗೆ ಬಿಗ್ ಶಾಕ್: ಪ್ರಮುಖ ಆಟಗಾರ ಔಟ್

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್ (ಮೊದಲ ಮೂರು ಪಂದ್ಯಗಳಿಗೆ), ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬಿಯರ್ಡ್ಮನ್ (ಕೊನೆಯ 3 ಪಂದ್ಯಗಳಿಗೆ ಮಾತ್ರ), ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್ (ಕೊನೆಯ ಎರಡು ಪಂದ್ಯಗಳಿಗೆ), ನಾಥನ್ ಎಲ್ಲಿಸ್, ಜೋಶ್ ಹೇ ಮ್ಯಾಝಲ್ವುಡ್ (ಮೊದಲ ಪಂದ್ಯಗಳಿಗೆ ಮಾತ್ರ, ಟ್ರಾವಿಸ್ ಕುಡ್ನೆ), ಟ್ರಾವಿಸ್ ಮ್ಯಾಕ್ಸ್‌ವೆಲ್ (ಕೊನೆಯ ಮೂರು ಪಂದ್ಯಗಳಿಗೆ ಮಾತ್ರ), ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆಯಡಂ ಝಂಪಾ.



Source link

Leave a Reply

Your email address will not be published. Required fields are marked *