ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡ್ರೆ ಅಪರಾಧವಲ್ಲ: ಕೋರ್ಟ್ ಮಹತ್ವದ ತೀರ್ಪು

ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡ್ರೆ ಅಪರಾಧವಲ್ಲ: ಕೋರ್ಟ್ ಮಹತ್ವದ ತೀರ್ಪು


ಬೆಂಗಳೂರು, (ಅಕ್ಟೋಬರ್ 27): ಆರಂಭದಲ್ಲಿ ಪರಸ್ಪರ ಸಮ್ಮತಿ ಇಬ್ಬರ ನಡುವೆ ಸಂಬಂಧ ಚೆನ್ನಾಗಿದ್ದು, ಕೊನೆಗೆ ಯಾವುದೇ ಕಾರಣಕ್ಕೆ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅದು ಅಪರಾಧವಲ್ಲ ಎಂದು ಕರ್ನಾಟಕ ಮಹತ್ವದ ತೀರ್ಪು ನೀಡಿದೆ. ಕಳೆದ ವರ್ಷ ಬೆಂಗಳೂರಿನ ಬಿಐಎಲ್ ರಸ್ತೆಯಲ್ಲಿ ಭೇಟಿ ಬಳಿಕ ಅದೇ ದಿನ ಓಯೋ ರೂಮ್ ಗೆ ಕರೆದೊಯ್ದು ದೌರ್ಜನ್ಯ ಎಸಗಲಾಗಿದೆ ಎಂದು ಮಹಿಳೆ, ಸಾಂಪ್ರಸ್ ಆಂಥೋಣಿ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ, ಪರಸ್ಪರ ಸಮ್ಮತಿಯ ಕ್ರಿಯೆ ಅಪರಾಧವಲ್ಲ. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ ಎಂದು ಹೇಳಿ ಸಾಂಪ್ರಸ್ ಆಂಥೋಣಿ ವಿರುದ್ಧ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ.

ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ

ಮಹಿಳೆಯೊಬ್ಬರು ಡೇಟಿಂಗ್ ಆಯಪ್ ನಲ್ಲಿ ಪರಿಚಯವಾಗಿದ್ದರು ಸಾಂಪ್ರಸ್ ಆಂಥೋಣಿ ಎಂಬಾತನ ಜೊತೆ ಒಂದು ವರ್ಷಗಳ ಕಾಲ ಆತ್ಮೀಯವಾಗಿದ್ದರು. ಅದೇನಾಯ್ತೋ ಏನೋ ಬಳಿಕ ಮಹಿಳೆ, ಸಾಂಪ್ರಸ್ ಆಂಥೋಣಿ ವಿರುದ್ಧ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಇಂದು (ಅಕ್ಟೋಬರ್ 27) ಈ ಕೇಸಿನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಾಟ್ಸಪ್ ನಲ್ಲಿ ಇಬ್ಬರು ಪರಸ್ಪರ ಚಾಟಿಂಗ್ ಮಾಡಿದ್ದು, ಹಾಗೇ ಫೋಟೋ, ವಿಡಿಯೋಗಳನ್ನು ವಿನಿಮಯ ಮಾಡಿಕೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಳಿಕ ಪರಸ್ಪರ ಸಮ್ಮತಿಸಿದ ಪ್ರಕರಣ ಅಪರಾಧವಲ್ಲ. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಹಿಳೆ ಸಾಂಪ್ರಸ್ ಆಂಥೋಣಿ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಲಾಗಿದೆ.

ಇಬ್ಬರ ಚಾಟಿಂಗ್ ಗಂಭೀರವಾಗಿ ಪರಿಗಣಿಸಿದ ಕೋರ್ಟ್

ಇನ್‌ಸ್ಟಾಗ್ರಾಂನಲ್ಲಿ ಇಬ್ಬರು ಕೆಟ್ಟ ಅಭಿರುಚಿಯ ಚಾಟಿಂಗ್ ಮಾಡಿದ್ದರು. ಪರಸ್ಪರ ಫೋಟೋ, ವಿಡಿಯೋಗಳನ್ನು ವಿನಿಮಯ ಮಾಡಿಕೊಂಡಿದ್ದರು. ಆದರೆ, ಆರೋಪ ಪಟ್ಟಿ ಸಲ್ಲಿಸಿದ್ದ ಇನ್ಸ್ಟಾಗ್ರಾಂ ಚಾಟಿಂಗ್ ಪರಿಗಣಿಸಿಲ್ಲ. ಇವುಗಳನ್ನು ಪರಿಶೀಲಿಸಿದರೆ ಮಹಿಳೆಯ ದೂರು ದಾಖಲಾಗಿದೆ. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣ ಹಿನ್ನೆಲೆ

ಸಾಂಪ್ರಸ್ ಆಂಥೋಣಿ ಎಂಬ ಯುವಕ ಹಾಗೂ ಮಹಿಳೆ ಡೇಟಿಂಗ್ ಆಯಪ್ ನಲ್ಲಿ ಪರಸ್ಪರ ಪರಿಚಯವಾಗಿದ್ದು, ಒಂದು ವರ್ಷದವರೆಗೂ ಪರಸ್ಪರ ಚಾಟಿಂಗ್, ಕಾಲ್ನಲ್ಲಿ ಮಾತನಾಡಲು ಆತ್ಮೀಯರಾಗಿದ್ದಾರೆ. ನಂತರ ಒಂದು 2024ರ ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಭೇಟಿಯಾಗಲು ನಿರ್ಧರಿಸಿ ರೆಸ್ಟೋರೆಂಟ್‌ನಲ್ಲಿ ಊಟ ಮಾಡಲಾಗಿತ್ತು. ನಂತರ ಯುವಕ ಮಹಿಳೆಯನ್ನು ಓಯೋ ರೂಮ್‌ಗೆ ಕರೆದೊಯ್ದು ಕ್ರಿಯೆ ನಡೆಸಿದ್ದಾನೆ. ಮರುದಿನ ಯುವಕ ಆಕೆಯನ್ನು ಅಪಾರ್ಟ್‌ಮೆಂಟ್‌ಗೆ ಡ್ರಾಪ್ ಮಾಡಿದ್ದಾರೆ. ಆದರೆ, ಇಬ್ಬರ ನಡುವೆ ಅದೇನಾಯ್ತೋ ಏನೋ ಮಹಿಳೆ ಅದೇ ದಿನ ವೈದ್ಯಕೀಯ ತಪಾಸಣೆ ಮಾಡಿಸಿ ಸಾಂಪ್ರಸ್ ಆಂಥೋಣಿ ವಿರುದ್ಧ ಕೋಣಕುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ನೀಡಿದ್ದಳು. ಕಾರ್ಯಕ್ರಮಕ್ಕೆ ಮುಂದಾದಾಗ ಒಪ್ಪಿಗೆ ನಿರಾಕರಿಸಿದ್ದ ಮಹಿಳೆ ದೂರು ನೀಡಿದ್ದು, ಒಪ್ಪಿಗೆ ಸೂಚಿಸಿಲ್ಲವಾದರೂ ಯಾವುದೇ ಕ್ರಿಯೆ ನಡೆಸಿದ್ದಾಗಿ ಆರೋಪ ಮಾಡಿದ್ದಾಳೆ.

ಒಟ್ಟಿನಲ್ಲಿ ಮಹಿಳೆ ಮೊದಲು ಯುವಕನ ಜೊತೆ ಚೆನ್ನಾಗಿದ್ದು, ಆ ನಂತರ ಆತನ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದರು. ಆದರೆ ಕೋರ್ಟ್ ಯುವಕನ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ.

ರಂದು ಪ್ರಕಟಿಸಲಾಗಿದೆ – 4:02 pm, ಸೋಮವಾರ, 27 ಅಕ್ಟೋಬರ್ 25



Source link

Leave a Reply

Your email address will not be published. Required fields are marked *