ಬೆಂಗಳೂರು, ಅಕ್ಟೋಬರ್ 27: ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯುವವರೆಗೆ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ (ನಿರ್ವಾಹಕರು) ನೇಮಕ ಬೇಡ ಎಂದು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಆ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಉಚ್ಚ ಪೀಠ (ಹೈಕೋರ್ಟ್) ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಉಡುಪಿ ನಗರಸಭೆ, ಕಡೂರು ಪುರಸಭೆ, ಕೊರಟಗೆರೆ ಪಟ್ಟಣ ಪಂಚಾಯಿತಿ, ನರಸಿಂಹರಾಜಪುರ ಪಟ್ಟಣ ಪಂಚಾಯಿತಿ, ಕೃಷ್ಣರಾಜ ಪೇಟೆ ಪುರಸಭೆ, ಟಿ.ನರಸೀಪುರ ಪುರಸಭೆ ಮತ್ತು ಪಿರಿಯಾಪಟ್ಟಣ ಪುರಸಭೆ ಸದಸ್ಯರಿಂದ ಆಡಳಿತಾಧಿಕಾರಿ ನೇಮಕ ಕೋರಿ ಅರ್ಜಿ ಸಲ್ಲಿಸಲಾಗಿದೆ.
ಇದನ್ನೂ ಓದಿ: ಚಿತ್ತಾಪುರದಲ್ಲಿ ಪಥಸಂಚಲನ: ಸರ್ಕಾರಕ್ಕೆ ಮಹತ್ವದ ಸೂಚನೆ, ಆರ್ಎಸ್ಎಸ್ಗೆ ಕೊಂಚ ನಿರಾಸೆ
ಈ ಎಲ್ಲಾ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿ ಆರ್ . ನಟರಾಜ್ ಅವರಿದ್ದ ಪೀಠ ಸೋಮವಾರ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದ ಪೀಠ, ಚುನಾಯಿತ’ ಸದಸ್ಯರ ಅಧಿಕಾರಾವಧಿ ಮುಗಿಯುವ ತನಕ ನೇಮಕ ಬೇಡ ಎಂದು ಹೇಳಿದರು. ಆ ಮೂಲಕ ಆಡಳಿತಾಧಿಕಾರಿಗಳ ನೇಮಕವನ್ನು ತಡೆಹಿಡಿದಿದೆ.
ಇನ್ನು ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಸ್ಥಳೀಯ ಸಂಸ್ಥೆಗಳ ಆಡಳಿತಾಧಿಕಾರಿ ನೇಮಕ ಬೇಡ: ಆದೇಶ ಆದೇಶ
ಇನ್ನು ಇತ್ತೀಚೆಗೆ ಮಂಡ್ಯ, ಕೋಲಾರ, ಹಾಸನ, ಚಿತ್ರದುರ್ಗ, ಗೌರಿಬಿದನೂರು ನಗರಸಣೆ ಅವಧಿ ಪೂರ್ಣವಾಗುವವರೆಗೆ ಆಡಳಿತಾಧಿಕಾರಿ ನೇಮಕ ಮಾಡದಂತೆ ರಾಜ್ಯ ಸರ್ಕಾರಕ್ಕೆ ಮಧ್ಯಂತರ ನಿರ್ದೇಶನ ನೀಡಿತ್ತು. ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಅರ್ಜಿ ಸಲ್ಲಿಸಿದ್ದ ನ್ಯಾಯಮೂರ್ತಿ ಆರ್ . ನಟರಾಜ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಇದನ್ನೂ ಓದಿ: ಕೋಮು ದ್ವೇಷದ ಭಾಷಣ: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲು
ವಾದ-ಪ್ರತಿವಾದ ಆಲಿಸಿದ ಪೀಠ, ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಅವಧಿ ಮುಗಿಯುವ ತನಕ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತು. ಅಷ್ಟೇ ಅಲ್ಲದೆ ಆಯಾ ಡಿಸಿಗಳಿಗೆ ನೋಟಿಸ್ ಕೂಡ ಜಾರಿಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.