ನಾಳೆಯ ಹವಾಮಾನ: ಮೊಂತಾ ಚಂಡಮಾರುತದ ಎಫೆಕ್ಟ್; ರಾಜ್ಯಾದ್ಯಂತ ಯೆಲ್ಲೋ ಅಲರ್ಟ್​

ನಾಳೆಯ ಹವಾಮಾನ: ಮೊಂತಾ ಚಂಡಮಾರುತದ ಎಫೆಕ್ಟ್; ರಾಜ್ಯಾದ್ಯಂತ ಯೆಲ್ಲೋ ಅಲರ್ಟ್​


ಬೆಂಗಳೂರು, ಅಕ್ಟೋಬರ್ 27: ಮೊಂತಾ ಚಂಡಮಾರುತದ ಎಫೆಕ್ಟ್ ಹಿನ್ನಲೆ ರಾಜ್ಯಾದ್ಯಂತ ನಾಳೆ ಯೆಲ್ಲೋ ಅಲರ್ಟ್ (ಹವಾಮಾನ ಮುನ್ಸೂಚನೆ). ಘೋಷಿಸಲಾಗಿದೆ. ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದ್ದರೂ ಕಳೆದ ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯೂ ಮಳೆ ನಡೆಯಲಿದೆ. ಮಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ, ಜಿಲ್ಲೆಯ ಉಳಿದೆಡೆ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ರಾಯಚೂರು ಇತರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರಲಿದೆ. ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಗುಡುಗು-ಮಿಂಚಿನ ಸಹಿತ ಮಳೆಯ ನಿರೀಕ್ಷೆ ಇದೆ.

ಇದನ್ನೂ ಓದಿ: ಮೊಂತಾ ಚಂಡಮಾರುತ ಎಫೆಕ್ಟ್: ಆಂಧ್ರ ಪ್ರದೇಶದ 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರಿನಲ್ಲಿ ನಾಳೆ ವರುಣ ಅಬ್ಬರಿಸಲಿದೆ, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಸೋಮವಾರದ (ಅ.27) ರೀತಿಯಲ್ಲಿಯೇ ಅಲ್ಲಲ್ಲಿ ತುಂತುರು ಅಥವಾ ಸಾಧಾರಣ ಮಳೆ ಅಂದಾಜಿಸಲಾಗಿದೆ. ನಗರದ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಮಳೆ

ಮೊಂಟಾ ಚಂಡಮಾರುತ ಹಿನ್ನಲೆಯಲ್ಲಿ ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ಸೇರಿದಂತೆ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ ಜಿಲ್ಲೆಯಲ್ಲಿ ಯಲ್ಲೋ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಸಿಕ್ಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *