ಮಂಗಳೂರು, ಅಕ್ಟೋಬರ್ 27: ಪ್ರಚೋದನಕಾರಿ ಭಾಷಣ ಆರೋಪದಡಿ ಆರ್.ಎಸ್.ಎಸ್ (ಆರ್ಎಸ್ಎಸ್) ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಎಫ್ಐಆರ್ ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಮುಂದಿನ ವಿಚಾರಣೆಯವರೆಗೆ ಬಂಧನ ಸೇರಿದಂತೆ ಬಲವಂತದ ಕ್ರಮ ಬೇಡ ಎಂದು ನ್ಯಾಯಾಲಯ ತಿಳಿಸಿದ್ದು, ವಿಚಾರಣೆಯನ್ನು ಅ.29ಕ್ಕೆ ಕೋರ್ಟ್ ಮುಂದೂಡಿದೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಭಾಷಣ ಮಾಡಿದರು. ಅವರು ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ತರುವ ರೀತಿ ಮಾತನಾಡಿದ್ದಾರೆ ಎಂದು ಆರೋಪಿಸಿ ಈಶ್ವರಿ ಪದ್ಮುಂಜರು ದೂರು ನೀಡಿದ್ದರು ಎಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಎನ್ಎಸ್ 79, 196, 299, 302, 3(5) ಅಡಿ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎ. 30 ರಂದು ವಿಚಾರಣೆಗೆ ಹಾಜರಾಗುವಂತೆ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನೋಟಿಸ್ ನೀಡಲಾಯಿತು. ಇದನ್ನು ಪ್ರಶ್ನಿಸಿ ಪ್ರಭಾಕರ್ ಭಟ್ ಕೋರ್ಟ್ ಮೊರೆ ಹೋಗಿದ್ದರು.
ಇದನ್ನೂ ಓದಿ: ಕೋಮು ದ್ವೇಷದ ಭಾಷಣ, RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲು
ಪ್ರಭಾಕರ್ ಭಟ್ ಹೇಳಿದ್ದು ಏನಾಗಿತ್ತು?
ಆಚೆ ಮನೆಯಲ್ಲಿ ಒಬ್ಬಳು ಬಾರ್ದಿ ಇದ್ದಳು. ಅವಳು 6ನೇಯದ್ದು ಆಗಿ 7ನೇ ಮಗುವಿನ ಗರ್ಭಿಣಿಯಾಗಿದ್ದಳು. ಅವಳಿಗೆ ಯಾರಾದ್ರು ಕೇಳಿದ್ರಾ? ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತಾ ಇದ್ದೀಯಾ?. ಎರಡನೇದಾಗಿ ಅವರಮ್ಮ ಮಕ್ಕಳು ಅಲ್ಲಾಹುವಿಗೋಸ್ಕರ ಎಂದು ಹೇಳ್ತಾರೆ. ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳನ್ನು ಮಾಡಿಕೊಳ್ತೀರಾ? ಎಂದು ಕಲ್ಲಡ್ಕ ಪ್ರಭಾಕರ ಭಟ್ ಪ್ರಶ್ನಿಸಿದರು. ಜೊತೆಗೆ, ಮಂಗಳೂರು ವಿಧಾನಸಭಾ ಕ್ಷೇತ್ರ ಉಳ್ಳಾಲದಲ್ಲಿ ಹಿಂದೂಗಳು ಗೆಲ್ಲಲು ಸಾಧ್ಯವೇ ಇಲ್ಲ. ಅಲ್ಲಿ ಖಾದರೇ ಗೆಲ್ಲೋದು. ಏಕೆಂದರೆ ಒಂದು ಲಕ್ಷದ ಹತ್ತು ಸಾವಿರ ವೋಟ್ ಬ್ಯಾರಿಗಳಲ್ಲಿದೆ. ಹಿಂದೂಗಳು 90 ಸಾವಿರ ಮಾತ್ರ ಇರೋದು. ನಮ್ಮನ್ನು ಸರ್ವನಾಶ ಮಾಡ್ತಾರೆ. ಆದ್ದರಿಂದ ನಮ್ಮ ಮನೆಯಲ್ಲಿ 3ಕ್ಕಿಂತ ಕಡಿಮೆ ಮಕ್ಕಳು ಇರಬಾರದು ಎಂದು ಹೇಳಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.