ವಿಜಯ್ ದೇವರಕೊಂಡ ಜೊತೆ ನಿಶ್ಚಿತಾರ್ಥವಾದ ವಿಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

ವಿಜಯ್ ದೇವರಕೊಂಡ ಜೊತೆ ನಿಶ್ಚಿತಾರ್ಥವಾದ ವಿಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ


ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (ರಶ್ಮಿಕಾ) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಜೋರಾಗಿ ಹರಿದಾಡಿದೆ. ಇದಕ್ಕೆ ರಶ್ಮಿಕಾ ಮಂದಣ್ಣ ಅವರು ಎಲ್ಲಿಯೂ ಪ್ರತಿಕ್ರಿಯೆಯಿಲ್ಲ. ಈಗ ಅವರು ಪರೋಕ್ಷವಾಗಿ ಈ ವಿಚಾರವನ್ನು ಒಪ್ಪಿದ್ದಾರೆ. ಅಭಿಮಾನಿಗಳ ಎದುರು ಅವರು ನೀಡಿದ ಹೇಳಿಕೆ ಚರ್ಚೆಯನ್ನು ಹುಟ್ಟುಹಾಕಿದೆ. ರಶ್ಮಿಕಾಗೆ ಈಗಲೇ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ನಟನೆಯ ಹಿಂದಿ ಸಿನಿಮಾ ‘ಥಾಮಾ’ ಸೂಪರ್ ಹಿಟ್ ಆಗಿದೆ. ಈ ಚಿತ್ರ ನೂರು ಕೋಟಿ ರೂಪಾಯಿ ಕ್ಲಬ್ ಸೇರಿದೆ. ರಶ್ಮಿಕಾ ಮಂದಣ್ಣ ತೆರಳಿಲ್ಲೆಲ್ಲ ಮಾಧ್ಯಮ ಅವರಿಗೆ, ಅಭಿಮಾನಿಗಳಿಂದ ಈ ಪ್ರಶ್ನೆಗಳು ಎದುರಾಗುತ್ತಿವೆ. ಇದಕ್ಕೆ ರಶ್ಮಿಕಾ ಉತ್ತರಿಸುವ ಗೋಜಿಗೆ ಹೋಗಲಿಲ್ಲ. ಆದರೆ, ಈ ಬಾರಿ ರಶ್ಮಿಕಾ ಈ ವಿಚಾರಕ್ಕೆ ಸ್ಪಷ್ಟನೆ ಕೊಡುವ ಕೆಲಸ ಮಾಡಿದರು.

ಇದನ್ನೂ ಓದಿ

ರಶ್ಮಿಕಾ ಮಂದಣ್ಣ ನಟನೆಯ’ದಿ ಗರ್ಲ್ಫ್ರೆಂಡ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಸುದ್ದಿಗೋಷ್ಠಿಯಲ್ಲಿ ರಶ್ಮಿಕಾಗೆ ಅಭಿಮಾನಿಗಳಿಂದಲೇ ಈ ಪ್ರಶ್ನೆಗಳು ಚಿತ್ರದ ಎದುರಾದವರು. ‘ನೀವು ಹಾಗೂ ವಿಜಯ್ ದೇವರಕೊಂಡ ಎಂಗೇಜ್ಮೆಂಟ್ ಮಾಡಿಕೊಂಡಿದ್ದೀರಂತೆ ಹೌದಾ’ ಎಂಬ ಪ್ರಶ್ನೆ. ಆದರೆ, ಈ ವಿಚಾರವನ್ನು ರಶ್ಮಿಕಾ ಅಲ್ಲಗಳೆದಿಲ್ಲ. ಬದಲಿಗೆ, ‘ಸಮಯ ಬಂದಾಗ ಹೇಳುತ್ತೇನೆ’

ವಿಜಯ್ ದೇವರಕೊಂಡ ಬಗ್ಗೆ ರಶ್ಮಿಕಾ ಮಾತು

ಸಾಮಾನ್ಯವಾಗಿ ವದಂತಿಗಳು ಎಂದಾಗ ಸೆಲೆಬ್ರಿಟಿಗಳು ಕಡ್ಡಿ ಮುರಿದಂತೆ ಮಾತನಾಡಿ ಈ ಬಗ್ಗೆ ಸ್ಪಷ್ಟನೆ ಇದೆ. ಆದರೆ, ರಶ್ಮಿಕಾ ಮಂದಣ್ಣ ಮಾತ್ರ ನಾಚುತ್ತಲೇ ‘ಸಮು ಬಂದಾಗ ಹೇಳ್ತೀನಿ’ ಎಂದಿರೋದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ವಿಚಾರವನ್ನು ಅವರು ಪರೋಕ್ಷವಾಗಿ ಒಪ್ಪಿದ್ದಾರೆ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: ಸಿನಿಮಾವನ್ನು ಕದ್ದು-ಮುಚ್ಚಿ ನೋಡಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರು ಬ್ಯಾಕ್ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ, ಹಲವು ಸಿನಿಮಾಗಳು ಯಶಸ್ಸು ಕಂಡಿವೆ. ‘ದಿ ಗರ್ಲ್‌ಫ್ರೆಂಡ್’ ಚಿತ್ರದ ಬಗ್ಗೆಯೂ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಕನ್ನಡದವರೇ ಆದ ದೀಕ್ಷಿತ್ ಶೆಟ್ಟಿ ನಟಿಸಿದ್ದಾರೆ. ತೆಲುಗು ಜೊತೆಗೆ ಕನ್ನಡ ಮೊದಲಾದ ಭಾಷೆಗಳಲ್ಲೂ ಬಿಡುಗಡೆ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 11:33 am, ಮಂಗಳವಾರ, 28 ಅಕ್ಟೋಬರ್ 25





Source link

Leave a Reply

Your email address will not be published. Required fields are marked *