Headlines

ಮೊಂತಾ ಸೈಕ್ಲೋನ್ ಪ್ರಭಾವ: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ದಿನ ಮಳೆ? ಹವಾಮಾನ ತಜ್ಞರು ಹೇಳಿದ್ದಿಷ್ಟು

ಮೊಂತಾ ಸೈಕ್ಲೋನ್ ಪ್ರಭಾವ: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ದಿನ ಮಳೆ? ಹವಾಮಾನ ತಜ್ಞರು ಹೇಳಿದ್ದಿಷ್ಟು


ಬೆಂಗಳೂರು, ಅಕ್ಟೋಬರ್ 28: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೊಂಟಾ ಚಂಡಮಾರುತವು ಹಲವಾರು ರಾಜ್ಯಗಳ ಮೇಲೆ ಪ್ರಭಾವ ಬೀರುತ್ತಿದೆ. ಕರ್ನಾಟಕ ಹವಾಮಾನ ಇಲಾಖೆ ತಜ್ಞ ಸಿ.ಎಸ್. ಪಾಟೀಲ್ ಅವರ ಪ್ರಕಾರ, ಈ ಚಂಡಮಾರುತವು ಪ್ರಮುಖವಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿಲ್ಲವಾದರೂ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಎಲ್ಲೋ ಎಚ್ಚರಿಕೆ ನೀಡಲಾಗಿದೆ. ಅಕ್ಟೋಬರ್ 30 ರಿಂದ ಚಂಡಮಾರುತದ ಪ್ರಭಾವ ಕಡಿಮೆಯಾಗಲಿದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ. ಸಮುದ್ರದಲ್ಲಿ ಅಲೆಗಳ ತೀವ್ರತೆ ಮತ್ತು ಗಾಳಿ ಹೆಚ್ಚಾಗಲಿದೆ, ಮೀನುಗಾರರು ಮುಂದಿನ ಎರಡು ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *