ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಬುಧವಾರದಿಂದ (ಅ.29) ಶುರುವಾಗಿದೆ. ಕ್ಯಾನ್ಬೆರಾದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆಯಾಗುವುದು ಖಚಿತ.
ಏಕೆಂದರೆ ಏಷ್ಯಾಕಪ್ನಲ್ಲಿ ಕಣಕ್ಕಿಳಿದಿದ್ದ ಹಾರ್ದಿಕ್ ಪಾಂಡ್ಯ ಈ ಸರಣಿಗೆ ಆಯ್ಕೆಯಾಗಿಲ್ಲ. ಏಷ್ಯಾಕಪ್ ವೇಳೆ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿದ್ದ ಪಾಂಡ್ಯ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ.
ಅವರ ಬದಲಿಗೆ ಆಡುವ ಬಳಗದಲ್ಲಿ ವೇಗದ ಬೌಲಿಂಗ್ ಆಲ್ ರೌಂಡರ್ ಆಗಿ ಶಿವಂ ದುಬೆ ಕಣಕ್ಕಿಳಿಯಲಿದ್ದಾರೆ. ಜೊತೆಗೆ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಕೂಡ ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನು ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿಗೆ ಅವಕಾಶ ಸಿಗಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲ್ಲವೆನ್ ಈ ಕೆಳಗಿನಂತಿರಲಿದೆ…
ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್.
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಸುಂದರ್ ಚಕ್ರವರ್ತಿ, ಜಸ್ ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್, ಕುಲದೀಪ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.




