ಮೆಜೆಸ್ಟಿಕ್ (ಮೆಜೆಸ್ಟಿಕ್) ಎಂದರೆ ಹೊಸ ಆರಂಭದ ಸಂಕೇತ. ಅದಕ್ಕಾಗಿ ಬೆಂಗಳೂರಿಗೆ ಕನಸು ಕಟ್ಟಿಕೊಂಡು ಬರುವ ಮಂದಿ ಮಂದಿ ಕಾಲಿಡುವ ಜಾಗ ಇದು. ನಟ ದರ್ಶನ್ ಅವರು ಹೀರೋ ಆಗಿ ವೃತ್ತಿ ಜೀವನ ಶುರು ಮಾಡಿದ್ದು ಕೂಡ ‘ಮೆಜೆಸ್ಟಿಕ್’ ಸಿನಿಮಾ ಮೂಲಕ. ಯಾವುದೇ ಆ ಶೀರ್ಷಿಕೆಗೆ ಒಂದು ತಾಕತ್ತು ಇದೆ. ಈಗ ‘ಮೆಜೆಸ್ಟಿಕ್ 2’ (ಮೆಜೆಸ್ಟಿಕ್ 2) ಸಿನಿಮಾ ಬರುತ್ತಿದೆ. ಆದರೆ ಹೀರೋ ದರ್ಶನ್ ಅಲ್ಲ. ಹೊಸ ನಟ ಭರತ್ ಕುಮಾರ್ (ಭರತ್ ಕುಮಾರ್) ಅವರು ಈ ಸಿನಿಮಾದಲ್ಲಿ ನಾಯಕನಾಗಿದ್ದಾರೆ. ‘ಮೆಜೆಸ್ಟಿಕ್ 2’ ಚಿತ್ರಕ್ಕೆ ಸೆನ್ಸಾರ್ ಪ್ರಕ್ರಿಯೆ ಮುಗಿದಿದೆ. ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಚಿತ್ರದುರ್ಗದ ಹೆಚ್. ಆನಂದಪ್ಪ ಅವರು ‘ಅಮ್ಮ ಎಂಟರ್ ಪ್ರೈಸಸ್’ ಮೂಲಕ ಅದ್ದೂರಿಯಾಗಿ ‘ಮೆಜೆ 2’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಹಿರಿಯ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಅವರ ಮಗ ಭರತ್ ಕುಮಾರ್ ಅವರು ಈ ಸಿನಿಮಾದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟಿ ಶೃತಿ ಅವರು ನಾಯಕನ ತಾಯಿಯ ಪಾತ್ರದಲ್ಲಿ ನಟಿಸಿದ್ದಾರೆ.
‘ಮೆಜೆಸ್ಟಿಕ್ 2’ ಸಿನಿಮಾಗೆ ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿವೆ. ಇನ್ನಾದರೂ ಬಿಡುಗಡೆ ಮಾತ್ರ ಬಾಕಿ. ನವೆಂಬರ್ ತಿಂಗಳಿನಲ್ಲಿ ಸಿನಿಮಾವನ್ನು ರಿಲೀಸ್ ಮಾಡಲು ನಿರ್ಮಾಪಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ‘ಮೆಜೆಸ್ಟಿಕ್ 2’ ಸಿನಿಮಾವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿಯ ಸದಸ್ಯರು U/A ಪ್ರಮಾಣ ಪತ್ರವನ್ನು ನೀಡಿದ್ದಾರೆ.
ಈ ಸಿನಿಮಾದಲ್ಲಿ 5 ಹಾಡುಗಳು ಇವೆ. ವಿನು ಮನಸು ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಛಾಯಾಗ್ರಾಹಕರಾಗಿ ವೀನಸ್ ಮೂರ್ತಿ ಕೆಲಸ ಮಾಡಿದ್ದಾರೆ ಸಹ ನಿರ್ದೇಶಕರಾಗಿ ವಿಜಯಕುಮಾರ್, ಸಾಹಸ ನಿರ್ದೇಶಕರಾಗಿ ಚಿನ್ನಯ್ಯ ಅವರು ಕೆಲಸ ಮಾಡಿದ್ದಾರೆ. ಈ ಸಿನಿಮಾಗೆ ನಿರ್ದೇಶಕ ರಾಮು ಅವರು ಕಥೆ ಮತ್ತು ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದಾರೆ.
ಇದನ್ನೂ ಓದಿ: ಬಹುವರ್ಷಗಳ ಬಳಿಕ ‘ಮೆಜೆಸ್ಟಿಕ್ 2’ ಚಿತ್ರಕ್ಕಾಗಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ ಮಾಲಾಶ್ರೀ
ಹೀರೋ ಭರತ್ ಕುಮಾರ್ ಅವರಿಗೆ ಜೋಡಿಯಾಗಿ ನಟಿ ಸಂಹಿತಾ ವಿನ್ಯಾ ಅವರು ನಟಿಸಿದ್ದಾರೆ. ಈಗಿನ ಮೆಜೆಸ್ಟಿಕ್ ಏರಿಯಾ ಹೇಗಿದೆ? ಅಲ್ಲಿನ ದಂಧೆಗಳು, ಅಕ್ರಮ ಚಟುವಟಿಕೆಗಳು ಹೇಗಿವೆ? ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬಿತ್ಯಾದಿ ವಿವರಗಳನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯ ಮೂಲಕ ನಿರ್ದೇಶಕ ರಾಮು ಅವರು ತೆರೆಗೆ ತರುತ್ತಿದ್ದಾರೆ. ಮೆಜೆಸ್ಟಿಕ್, ಹೆಚ್.ಎಂ.ಟಿ., ರಾಮೋಹಳ್ಳಿ, ಮಾಕಳಿ ಬಳಿಯ ಸಕ್ರೆ ಅಡ್ಡ, ಆರ್.ಟಿ. ನಗರದ ನಿಸರ್ಗ ಹೌಸ್, ಚಿತ್ರದುರ್ಗದ ಮರುಘಾ ಮಠ ಸೇರಿದಂತೆ ಹಲವು ಕಡೆಗಳಲ್ಲಿ ಈ ಸಿನಿಮಾದ ಶೂಟಿಂಗ್ ನಡೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.