ಜರ್ಮನಿಯಲ್ಲಿ ಅನೇಕ ವರ್ಷಗಳಿಂದ ನೆಲೆಸಿರುವ ಸಾಲಿಗ್ರಾಮ ಮೂಲದ ಸುರೇಶ್ ಅವರು ‘ರಕ್ಕಿ’ ಸಿನಿಮಾ (Rakki Movie) ನಿರ್ಮಾಣ ಮಾಡುತ್ತಿದ್ದಾರೆ. ಸುರೇಶ್ ಅವರ ಮಗ ರಕ್ಕಿ ಅವರೇ ಈ ಚಿತ್ರದ ನಾಯಕ. ಅವರ ಹೆಸರನ್ನೇ ಸಿನಿಮಾಗೆ ಶೀರ್ಷಿಕೆಯಾಗಿ ಇಡಲಾಗಿದೆ. ಅಶ್ವಿನಿ ಪುನೀತ್ ರಾಜ್ ಕುಮಾರ್ (ಅಶ್ವಿನಿ ಪುನೀತ್ ರಾಜ್ಕುಮಾರ್) ಅವರ ಆಶೀರ್ವಾದದೊಂದಿಗೆ ಈ ಸಿನಿಮಾ ಸೆಟ್ಟೇರಿದೆ. ‘ಎಸ್.ಎನ್.ಆರ್. ಪ್ರೊಡಕ್ಷನ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ವೆಂಕಟ್ ಭಾರದ್ವಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ‘ರಕ್ಕಿ’ ಸಿನಿಮಾದ ಮುಹೂರ್ತ ಸಮಾರಂಭ.
ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ‘ರಕ್ಕಿ’ ಸಿನಿಮಾದ ಮೊದಲ ಸನ್ನಿವೇಶಕ್ಕೆ ಚಾಲನೆ ಫಲಕ ತೋರಿಸುವ ಮೂಲಕ ಚಾಲನೆ. ಸಿನಿಮಾ ಯಶಸ್ವಿ ಆಗಲೆಂದು ಅವರು ಹಾರೈಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡದ ಸದಸ್ಯರು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು. ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರ ಕಥೆ ಕೇಳಿ ಚೆನ್ನಾಗಿದೆ ಎಂದ ಬಳಿಕವೇ ಸುರೇಶ್ ಅವರು ಈ ಸಿನಿಮಾ ಮಾಡಲು ಮುಂದಾಗಿದ್ದಾರೆ.
‘ನಾನು ಐಟಿ ಉದ್ಯೋಗಿ. 20 ವರ್ಷಗಳಿಂದ ಜರ್ಮನಿಯಲ್ಲಿ ವಾಸಿಸುತ್ತಿದ್ದಾರೆ. ನಮ್ಮ ತಂದೆ ರಾಜಶೇಖರ್ ಅವರು ಡಾ. ರಾಜ್ ಕುಮಾರ್ ನಟನೆ ಹೊಸಬೆಳಕು ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಈಗ ನಾನು ರಕ್ಕಿ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದೇನೆ. ನಮ್ಮ ಕುಟುಂಬದ ಸ್ನೇಹಿತರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಒಪ್ಪಿದ ಕಥೆಯನ್ನು ಆಯ್ಕೆ ಮಾಡಿಕೊಂಡು ಸಿನಿಮಾ ಮಾಡುತ್ತಿದ್ದಾರೆ’ ಎಂದು ನಿರ್ಮಾಪಕ ಸುರೇಶ್ ಅವರು ಹೇಳಿದ್ದಾರೆ.
ರಾಕ್ಕಿ ಚಿತ್ರತಂಡ
‘ಆ್ಯಕ್ಷನ್, ಸಸ್ಪೆನ್ಸ್, ಥ್ರಿಲ್ಲರ್ ಅಂಶಗಳು ಈ ಸಿನಿಮಾದ ಕಥೆಯಲ್ಲಿವೆ. ಬೆಂಗಳೂರಿನಲ್ಲಿ ನಿರ್ಮಿಸಿರುವ ಅದ್ದೂರಿ ಸೆಟ್ನಲ್ಲಿ ಹೆಚ್ಚಿನ ದೃಶ್ಯಗಳ ಶೂಟಿಂಗ್. ಆಶಿಕಾ ಸೋಮಶೇಖರ್, ಪಲ್ಲವಿ ಮಂಜುನಾಥ್ ಅವರು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಬಿ. ಸುರೇಶ್, ಹರಿಣಿ ಶ್ರೀಕಾಂತ್, ರಮೇಶ್ ಪಂಡಿತ್, ಸುಂದರರಾಜ್, ಸಂಪತ್ ಮೈತ್ರೇಯ, ಗಂಟೆ ಗೋವಿಂದ ಮುಂತಾದವರು ಪಾತ್ರವರ್ಗದಲ್ಲಿದ್ದಾರೆ’ ಎಂದು ನಿರ್ದೇಶಕ ವೆಂಕಟ್ ಭಾರದ್ವಾಜ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್ಕುಮಾರ್: ವಿಡಿಯೋ
ಲೋಕಿ ತವಸ್ಯ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಐಸಾಕ್ಸ್ ಪ್ರಭಾಕರ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಸಂಕಲನದ ಜವಾಬ್ದಾರಿ ದೀಪು ಎಸ್. ಕುಮಾರ್ ಅವರದ್ದು. ಲಾರೆನ್ಸ್ ಪ್ರೀತಮ್ ಅವರ ಸಹ-ನಿರ್ದೇಶನ ಈ ಸಿನಿಮಾಗಿದೆ. ಈ ಸಿನಿಮಾದಲ್ಲಿ ಭೂಗತ ಲೋಕದ ದೊರೆಯಾಗಿ ಬಿ. ಸುರೇಶ ನಟಿಸುತ್ತಿದ್ದಾರೆ. ಸಾಕಷ್ಟು ತಯಾರಿ ಮಾಡಿಕೊಂಡ ನಟ ರಕ್ಕಿ ಅವರು ಈ ಸಿನಿಮಾಗೆ ಹೀರೋ ಆಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.