RSS ಚಟುವಟಿಕೆ ನಿರ್ಬಂಧಿಸುವ ಆದೇಶಕ್ಕೆ ಹೈಕೋರ್ಟ್ ತಡೆ: ಆದ್ರೂ ಪಟ್ಟು ಸಡಿಲಿಸದ ಸರ್ಕಾರ, ಮಹತ್ವದ ನಿರ್ಧಾರ

RSS ಚಟುವಟಿಕೆ ನಿರ್ಬಂಧಿಸುವ ಆದೇಶಕ್ಕೆ ಹೈಕೋರ್ಟ್ ತಡೆ: ಆದ್ರೂ ಪಟ್ಟು ಸಡಿಲಿಸದ ಸರ್ಕಾರ, ಮಹತ್ವದ ನಿರ್ಧಾರ


ಬೆಂಗಳೂರು, (ಅಕ್ಟೋಬರ್ 28): ಆರ್ಎಸ್ಎಸ್ ಮತ್ತು ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡುವಣ ಸಂಘರ್ಷ ಸಂಬಂಧ ಕರ್ನಾಟಕ ಮಹತ್ವದ ಮಧ್ಯಂತರ ಆದೇಶ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಅಥವಾ ಚಟುವಟಿಕೆಗಳನ್ನು ನಿರ್ಬಂಧಿಸಿ (ನೇರವಾಗಿ ಆರ್‌ಎಸ್‌ಎಸ್ ಹೆಸರಿಸಿಲ್ಲ) ಆದೇಶ ಹೊರಡಿಸಿದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರಿಂದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಆದರೂ ಪಟ್ಟು ಸಡಿಲಿಸದ ಸರ್ಕಾರ, ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಸರ್ಕಾರದ ಆದೇಶಕ್ಕೆ ಪೀಠ ತಡೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಸರ್ಕಾರದ ಆದೇಶ ಪೀಠ ತಡೆಯಾಜ್ಞೆ ನೀಡಿದೆ. ಇದು ಸರ್ಕಾರಕ್ಕೆ ಹಿನ್ನಡೆ ಅಲ್ಲ. ನಾವು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ. ಈ ಸಂಬಂಧ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಕೂಡ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.



Source link

Leave a Reply

Your email address will not be published. Required fields are marked *