ಬೆಂಗಳೂರು, ಅಕ್ಟೋಬರ್ 28: ಮೊಂತಾ ಚಂಡಮಾರುತದ (ಮಾಂತಾ ಚಂಡಮಾರುತ) ಎಫೆಕ್ಟ್ ಹಿನ್ನಲೆ ರಾಜ್ಯದಲ್ಲಿ ನಾಳೆಯೂ ಮಳೆ ನಡೆಯಲಿದೆ, 11 ಜಿಲ್ಲೆಗಳಲ್ಲಿ ಎಲ್ಲೋ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ, ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗಿ ಇರಲಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆ ಇರುತ್ತದೆ, ವಿಪರೀತ ಗಾಳಿ ಇರಲಿದೆ. ರಾಜಧಾನಿ ಬೆಂಗಳೂರಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ.
ರಾಜ್ಯದ ಎಲ್ಲೆಲ್ಲಿ ಮಳೆ?
ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯಾಗಲಿದೆ, ಎಲ್ಲೋ ಎಚ್ಚರಿಕೆ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗಕ್ಕೆ ವರುಣ ಕೊಂಚ ರಿಲೀಫ್ ನೀಡಲಾಗುವುದು, ಕೆಲವು ಪ್ರದೇಶಗಳಲ್ಲಿ ಮಾತ್ರ ಮಳೆಯಾಗುವ ಸಂಭವವಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆಯಾದರೂ ವಿಪರೀತ ಗಾಳಿ ಇರಲಿದೆ. ಗಾಳಿಯ ವೇಗ ಗಂಟೆಗೆ 40–50 ಕಿ.ಮೀ. ಇರಲಿದೆ, 60 ಕಿ.ಮೀ.ವರೆಗೂ ತಲುಪಬಹುದೆಂದು ಅಂದಾಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ಇದನ್ನೂ ಓದಿ: ಮೊಂಟಾ ಸೈಕ್ಲೋನ್ ಪ್ರಭಾವ: ಕರ್ನಾಟಕದ ಯಾವ ಜಿಲ್ಲೆಯಲ್ಲಿ ಎಷ್ಟು ದಿನ ಮಳೆ? ತಜ್ಞರು ಹೇಳಿದ್ದಾರೆ
ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಕಡಿಮೆ
ಬೆಂಗಳೂರಿನಲ್ಲಿ ನಾಳೆ ಕೊಂಚ ಮಟ್ಟಿಗೆ ಮೋಡ ಕವಿದ ವಾತಾವರಣ ಇರಲಿದೆ, ಮಳೆಯ ಸಾಧ್ಯತೆ ಕಡಿಮೆ ಇದೆ. ನಗರದ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದೆ, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ತಲುಪಲಿದೆ. ಗಾಳಿಯ ವೇಗ ಗಂಟೆಗೆ 15-25 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.