ತನ್ನ ತಾಯಿಗೆ ಬೈದ ಎಂದು ವ್ಯಕ್ತಿಯ ಹತ್ಯೆ
ಬೆಂಗಳೂರು, ಅಕ್ಟೋಬರ್ 28: ತಾಯಿಯನ್ನು ಅವಾಚ್ಯವಾಗಿ ನಿಂದಿಸಿದ ಎಂಬ ಕಾರಣಕ್ಕೆ ವ್ಯಕ್ತಿಯೋರ್ವನ ಕೊಲೆ (ಕೊಲೆ) ಮಾಡಿರುವ ಘಟನೆ ಬೆಂಗಳೂರಿನ ಉಲ್ಲಾಳ ಉಪನಗರದ ರಾಮಚಂದ್ರಪ್ಪ ಲೇಔಟ್‌ನಲ್ಲಿ ನಡೆದಿದೆ. ಆಟೋ ಚಾಲಕ ಅವಿನಾಶ್ (36) ಮೃತ ವ್ಯಕ್ತಿ ಆರೋಪಿ ಕಾರ್ತಿಕ್ನನ್ನು ಬಂಧಿಸಿದ್ದಾರೆ. ಸ್ಟೀಲ್ ರಾಡ್‌ನಿಂದ ಕಾರ್ತಿಕ್ ಹಲ್ಲೆ ನಡೆಸಿದ ಪರಿಣಾಮ ಅವಿನಾಶ್ ಕಾಣಿಸಿಕೊಂಡಿದ್ದಾರೆ.
ಘಟನೆ ಏನು?
ಹೆತ್ತವರನ್ನು ಕಳೆದುಕೊಂಡಿದ್ದ ಅವಿನಾಶ್ ಕುಡಿತಕ್ಕೆ ದಾಸನಾಗಿದ್ದ. ಹೀಗಾಗಿ ಹೆಂಡತಿಯೂ ಆತನನ್ನು ತೊರೆದಿದ್ದಳು. ಹೀಗಾಗಿ ರಾಮಚಂದ್ರಪ್ಪ ಲೇಟ್ ನಲ್ಲಿದ್ದ ತನ್ನ ದೊಡ್ಡಮ್ಮನಿಗೆ ಸೇರಿದ ಚಿಕ್ಕ ಮನೆಯಲ್ಲಿ ಈತ ವಾಸವಿದ್ದ. ನೆರೆ ಮನೆಯಲ್ಲಿದ್ದ ಕಾರ್ತಿಕ್ ತಾಯಿ ಅವಿನಾಶ್ನನ್ನು ತನ್ನ ಮನೆಯ ಮಗನಂತೆ ನೋಡಿಕೊಂಡಿದ್ದರು. ಆದರೆ, ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಕುಡಿದು ಮನೆಗೆ ಬಂದ ಅವಿನಾಶ್ ಕಾರ್ತಿಕ್ ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಾನೆ. ಇದರಿಂದ ಕೋಪಗೊಂಡ ಆಕೆ ಮಗನಿಗೆ ಕರೆಮಾಡಿ ವಿಷಯ. ಕೆಲಸಕ್ಕೆ ಹೋಗಿದ್ದ ಕಾರ್ತಿಕ್ ಮನೆಗೆ ಬಂದವನೇ ಅವಿನಾಶ್ ಜೊತೆ ಜಗಳ ತೆಗೆದಿದ್ದು, ತನ್ನ ಬೈಕ್ ಸ್ಟೀಲ್ ರಾಡ್ ನಿಂದ ಅವಿನಾಶ್ ತಲೆ, ಬೆನ್ನಿಗೆ ಹಲ್ಲೆ ಮಾಡಿದ್ದಾನೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವಿನಾಶ್ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಮಕ್ಕಳ ಕೊಂದು ತಾಯಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ಹೋಗಿದ್ದು 3 ಜೀವ
ಕೊಲೆ ಮಾಡಿ ಪೊಲೀಸರಿಗೆ ಕರೆ ಮಾಡಿದ್ದ ಅರೋಪಿ
ಘಟನೆ ಬಳಿಕ ರಾತ್ರಿ ಪೂರ್ತಿ ಯೋಚನೆ ಮಾಡಿರುವ ಆರೋಪಿ ಕಾರ್ತಿಕ್, ಬೆಳಗಿನ ಜಾವ ಸರಂಡರ್ ಆಗಲು ತೀರ್ಮಾನಿಸಿದ್ದಾನೆ. ಹೀಗಾಗಿ ಆತನೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಘಟನೆಯ ಮಾಹಿತಿ ಹಿನ್ನಲೆ ಸ್ಥಳಕ್ಕೆ ಭೇಟಿ ನೀಡಿರುವ ಅರಿವು ಭಾರತಿ ಆರೋಪಿಯನ್ನ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ವರದಿ: ಪ್ರದೀಪ್ ಚಿಕ್ಕಾಟಿ, Tv9 ಬೆಂಗಳೂರು
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.