ಕೆಲವು ದಿನಗಳ ಹಿಂದೆ ಸಲ್ಮಾನ್ ಖಾನ್ (ಸಲ್ಮಾನ್ ಖಾನ್) ಅವರ ಅಭಿಮಾನಿಗಳಿಗೆ ಆತಂಕವಾಗುವಂತಹ ಒಂದು ಸುದ್ದಿ ಹಬ್ಬಿತ್ತು. ಪಾಕಿಸ್ತಾನದ ಬಲೂಚಿಸ್ತಾನ್ ಸರ್ಕಾರವು ಸಲ್ಮಾನ್ ಖಾನ್ ಅವರ ಭಯೋತ್ಪಾದಕರ (ಭಯೋತ್ಪಾದಕ) ಪಟ್ಟಿಗೆ ಸೇರಿಸಿದೆ ಎಂದು ವದಂತಿ ಹರಡಿತ್ತು. ದುಬೈನಲ್ಲಿ ನಡೆದ ಕಾರ್ಯಕ್ರಮದ ಸಲ್ಮಾನ್ ಖಾನ್ ಅವರು ಬಲೂಚಿಸ್ತಾನವನ್ನು ಪ್ರತ್ಯೇಕ ರಾಷ್ಟ್ರ ಎಂಬ ಅರ್ಥದಲ್ಲಿ ಮಾತನಾಡಿದ್ದು ಇಷ್ಟಕ್ಕೆಲ್ಲ ಕಾರಣ. ಈ ವಿಷಯಕ್ಕೆ ಸಂಬಂಧಿಸಿದಂತೆ ಈಗ ಪಾಕಿಸ್ತಾನದ (ಪಾಕಿಸ್ತಾನ) ಕಡೆಯಿಂದಲೇ ಅಧಿಕೃತ ಸ್ಪಷ್ಟನೆ ಸಿಕ್ಕಿದೆ. ಸಲ್ಮಾನ್ ಖಾನ್ ಅವರನ್ನು ಯಾವುದೇ ರೀತಿಯಲ್ಲಿ ಭಯೋತ್ಪಾದಕರ ಪಟ್ಟಿಗೆ ಸೇರಿಸಲಾಗಿಲ್ಲ ಎಂಬುದು ಖಚಿತವಾಗಿದೆ.
ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಫ್ಯಾಕ್ಟ್ ಚೆಕ್ ವಿಭಾಗದಿಂದ ಟ್ವೀಟ್ ಮಾಡಲಾಗಿದೆ. ಅದರಲ್ಲಿ ವದಂತಿಯನ್ನು ತಳ್ಳಿ ಹಾಕಲಾಗಿದೆ. ‘ಸಲ್ಮಾನ್ ಖಾನ್ ಅವರನ್ನು ಪಾಕಿಸ್ತಾನ ಸರ್ಕಾರದ ಯಾವುದೇ ದಾಖಲೆಯಲ್ಲೂ ಭಯೋತ್ಪಾದಕ ಎಂದು ಸೇರಿಸಿದ್ದು ಕಂಡುಬಂದಿಲ್ಲ. ಕೇವಲ ಭಾರತದ ಮಾಧ್ಯಮಗಳಲ್ಲಿ ವದಂತಿ ಹರಡಿದೆ. ಇದು ಕೇವಲ ವೈಭವೀಕರಿಸಿದ ಸುದ್ದಿಯೇ ನಿಜವಲ್ಲ’ ಎಂದು ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.
ವಿವಾದ ಆಗಲು ಕಾರಣ ಏನು?
ಬಲೂಚಿಸ್ತಾನ್ ಕೂಡ ಪಾಕಿಸ್ತಾನದ ಭಾಗ. ಆದರೆ ಇಲ್ಲಿ ಕೆಲವರು ಬಲೂಚಿಸ್ತಾನವನ್ನು ಪ್ರತ್ಯೇಕ ರಾಷ್ಟ್ರವಾಗಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸಲ್ಮಾನ್ ಖಾನ್ ಅವರು ದುಬೈನಲ್ಲಿ ಮಾತನಾಡುವಾಗ ಬಲೂಚಿಸ್ತಾನವನ್ನು ದೇಶ ಪ್ರತ್ಯೇಕ ಎನ್ನುವ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಇದರಿಂದ ಪಾಕಿಸ್ತಾನದಲ್ಲಿ ಸಲ್ಮಾನ್ ಖಾನ್ ವಿರುದ್ಧ ಅಸಮಾಧನ ಉಂಟಾಯಿತು.
ಸಲ್ಮಾನ್ ಖಾನ್ ಅವರಿಗೆ ಪಾಕಿಸ್ತಾನದಲ್ಲಿ ಕೂಡ ಅಭಿಮಾನಿಗಳು ಇದ್ದಾರೆ. ಭಾರತ-ಪಾಕ್ ನಡುವೆ ಯುದ್ಧದ ವಾತಾವರಣ ಶುರುವಾಗುವುದಕ್ಕೂ ಮುನ್ನ ಪಾಕಿಸ್ತಾನದಲ್ಲಿ ಭಾರತದ ಸಿನಿಮಾಗಳು ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದವು. ಅಲ್ಲಿನ ಅಭಿಮಾನಿಗಳು ಸಲ್ಮಾನ್ ಖಾನ್ ಅಭಿನಯದ ಸಿನಿಮಾಗಳನ್ನು ನೋಡಿ ಎಂಜಾಯ್ ಮಾಡುತ್ತಿದ್ದರು.
ಇದನ್ನೂ ಓದಿ: ಬಲೂಚಿಸ್ತಾನದ ಬಗ್ಗೆ ಸಲ್ಮಾನ್ ಖಾನ್ ನೀಡಿದ ಹೇಳಿಕೆಯ ಬಗ್ಗೆ ದೊಡ್ಡ ಚರ್ಚೆ ಶುರುವಾಗಿದೆ
ಪಾಕ್ ಸರ್ಕಾರವು ಸಲ್ಮಾನ್ ಖಾನ್ ಅವರ ಹೆಸರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ ಎಂಬ ಫೇಕ್ ನ್ಯೂಸ್ ಹರಿದಾಡಿದ ಅಭಿಮಾನಿಗಳಿಗೆ ನಿಜಕ್ಕೂ ಬೇಸರ ತಂದಿತ್ತು. ಈಗ ಪಾಕಿಸ್ತಾನದಿಂದಲೇ ಅದು ಫೇಕ್ ಎಂಬ ಸ್ಪಷ್ಟನೆ ಸಿಕ್ಕಿರುವುದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಈ ಎಲ್ಲ ಘಟನೆಗಳ ಬಗ್ಗೆ ಸಲ್ಮಾನ್ ಖಾನ್ ಅವರು ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಸಿನಿಮಾ ಶೂಟಿಂಗ್ ಮತ್ತು ಬಿಗ್ ಬಾಸ್ ನಿರೂಪಣೆಯಲ್ಲಿ ಅವರು ಬ್ಯೂಸಿ ಆಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.