ಉಡುಪಿ, ಅಕ್ಟೋಬರ್ 29: ಬಿಹಾರ ಚುನಾವಣಾ ಅಖಾಡ ರಂಗೇರಿದೆ. ಸದ್ಯ ಇದೇ ಚುನಾವಣಾ ಪ್ರಚಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ಅವರು ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ (ಶ್ರೀ ಕೃಷ್ಣ ಮಠ) ಭೇಟಿ ನೀಡಲಿದ್ದಾರೆ. ಶ್ರೀ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತೆ ಪಾರಾಯಣ- ಬೃಹತ್ ಗೀತೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮೋದಿ ಮಾತುಕತೆ
ನವೆಂಬರ್ 28 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಪ್ರಧಾನಿ ಮೋದಿ, ಪ್ರಸಾದ ಸ್ವೀಕರಿಸಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಇದನ್ನೂ ಓದಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ : ಭಕ್ತರು, ವ್ಯಾಪಾರಿಗಳಿಗೆ ನಿರಾಸೆ!
ಶ್ರೀ ಬಳಿಕ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತೆ ಪಾರಾಯಣ-ಬೃಹತ್ ಗೀತೋತ್ಸವದಲ್ಲಿ ಪ್ರಧಾನಿ ಮೋದಿಕೃಷ್ಣ ಭಾಗವಹಿಸಲಿದ್ದಾರೆ. ಈ ಭಕ್ತರು ಮತ್ತು ಗಣ್ಯರು ಬೃಹತ್ ಪ್ರಮಾಣದಲ್ಲಿ ಸೇರುವ ನಿರೀಕ್ಷೆಯಿದೆ ಎಂದು ಮಠದ ಮೂಲಗಳಿಂದ ಟವಿ9 ಗೆ ಮಾಹಿತಿ ನೀಡಲಾಗುತ್ತದೆ.
ಇದನ್ನೂ ಓದಿ: ನವರಾತ್ರಿಯಲ್ಲಿ ಸ್ತ್ರೀ ರೂಪ ತಾಳುತ್ತಾನೆ ಉಡುಪಿ ಶ್ರೀಕೃಷ್ಣ! ಏನಿದು ಅಪರೂಪದ ಪೂಜಾ ಕ್ರಮ? ಇಲ್ಲಿದೆ ಮಾಹಿತಿ
ಮೂಲಗಳ ಪ್ರಕಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಅವರ ಭೇಟಿಯನ್ನು ಪ್ರಧಾನಿ ಕಚೇರಿ ದೃಢಪಡಿಸಿದೆ. ಹೀಗಾಗಿ ಸದ್ಯಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎನ್ನಲಾಗುತ್ತಿದೆ.
ನ. 8 ರಿಂದ 30 ರವರೆಗೆ ಲಕ್ಷ ಕಂಠ ಗೀತಾ ಪಾರಾಯಣ
ನವೆಂಬರ್ 8 ರಿಂದ 30ರವರೆಗೆ ಉಡುಪಿಯ ಶ್ರೀಕೃಷ್ಣ ಮಠ ಮತ್ತು ಪುತ್ತಿಗೆ ಮಠದ ಆಶ್ರಯದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ ಸಮಾರಂಭ. ಕೊನೆಯ ದಿನ ಅಂದರೆ ನ.30ರಂದು ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಸೇರಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ದೇಶದ ಪ್ರಮುಖರು ಸೇರಿದಂತೆ ಸಂತರು, ಧಾರ್ಮಿಕ ಪ್ರಮುಖರು ಭಾಗವಹಿಸಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.