ರಾಜಕೀಯ ಲಾಭಕ್ಕಾಗಿ ಸರ್ದಾರ್ ಪಟೇಲ್ ಹೆಸರು ಬಳಕೆ; ಖರ್ಗೆಗೆ ಬಿಜೆಪಿ ತಿರುಗೇಟು

ರಾಜಕೀಯ ಲಾಭಕ್ಕಾಗಿ ಸರ್ದಾರ್ ಪಟೇಲ್ ಹೆಸರು ಬಳಕೆ; ಖರ್ಗೆಗೆ ಬಿಜೆಪಿ ತಿರುಗೇಟು


ನವದೆಹಲಿ, ಅಕ್ಟೋಬರ್ 31: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ಭಾರತದಲ್ಲಿ ನಿಷೇಧಿಸಬೇಕು ಎಂಬ ತಮ್ಮ ದೀರ್ಘಕಾಲದ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. ಸರ್ದಾರ್ ವಲ್ಲಭಾಯಿ ಪಟೇಲ್ ಕೂಡ ಒಮ್ಮೆ ಸರ್ಕಾರಿ ನೌಕರರು ಆರ್‌ಎಸ್‌ಎಸ್ (RSS) ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲು ಪತ್ರ ಬರೆದಿದ್ದರು ಎಂದು ಅವರು ವಾದಿಸಿದ್ದಾರೆ. ಇದಕ್ಕೆ ಬಿಜೆಪಿ ತಿರುಗೇಟು ನೀಡಿದೆ.

“ಇದು ನನ್ನ ವೈಯಕ್ತಿಕ ಅಭಿಪ್ರಾಯ. ನನ್ನ ಪತ್ರಕಾರ ಆರ್ ಎಸ್ಎಸ್ ಅನ್ನು ನಿಷೇಧಿಸಬೇಕು” ಎಂದು ಖರ್ಗೆ ಹೇಳಿದ್ದಾರೆ “ಭಾರತದಲ್ಲಿ ಹೆಚ್ಚಿನ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಬಿಜೆಪಿ-ಆರ್‌ಎಸ್‌ಎಸ್‌ನ ನಂಟುಗಳಿಂದ ಉಂಟಾಗುತ್ತಿವೆ ಎಂದು ಅವರು ಹೇಳಿದ್ದಾರೆ, ಅವರು ಸರ್ದಾರ್ ಪಟೇಲ್ ಅವರ ಅಧಿಕಾರಾವಧಿಯಲ್ಲಿ ವಿಧಿಸಲಾದ ಆರ್‌ಎಸ್‌ಎಸ್ ಮತ್ತೆ ಮೇಲಿನ ನಿಷೇಧವನ್ನು 2024 ರಲ್ಲಿ ಬಿಜೆಪಿ ಸರ್ಕಾರ ತೆಗೆದುಹಾಕಿತು. ಆ ನಿಷೇಧವನ್ನು ಜಾರಿಗೆ ತರಬೇಕು” ಎಂದು ಖರ್ಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸರ್ದಾರ್ ಪಟೇಲ್ ಮೇಲೆ ಮುಸ್ಲಿಂ ಕಾಲೇಜಿನಿಂದ ನಡೆದಿತ್ತು 2 ಮಾರಕ ದಾಳಿ; 86 ವರ್ಷದ ಹಿಂದಿನ ಕತೆ ಬಿಚ್ಚಿಟ್ಟ ಬಿಜೆಪಿ

ಇದಕ್ಕೆ ಬಿಜೆಪಿ ತಿರುಗೇಟು ನೀಡಿದ್ದು, ಕಾಂಗ್ರೆಸ್ ಬೂಟಾಟಿಕೆ ಮಾಡುತ್ತಿದೆ ಎಂದು ಆರೋಪಿಸಿದೆ. ಖರ್ಗೆ ಅವರ ಹೇಳಿಕೆಗಳಿಗೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ಸರ್ದಾರ್ ಪಟೇಲ್ ಹೆಸರನ್ನು ಬಳಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ಹಲವು ಕಡೆಯಿಂದ ಸರ್ದಾರ್ ಪಟೇಲ್ ಅವರ ಪರಂಪರೆಯನ್ನು ನಿರ್ಲಕ್ಷಿಸಿತ್ತು. ಈಗ ಆರ್‌ಎಸ್‌ಎಸ್‌ ಮೇಲೆ ದಾಳಿ ಮಾಡಲು ಸರ್ದಾರ್ ಙಟೇಲ್ ಹೆಸರನ್ನು ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಆರೋಪಿಸಿದ್ದಾರೆ.

“ವಿಷುಐಎನ್‌ಸಿ ಎಂದರೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಲ್ಲ. ಅದರರ್ಥ ಭಾರತೀಯ ನಾಜಿ ಕಾಂಗ್ರೆಸ್. ಅವರ ಎಲ್ಲಾ ಪಿತೂರಿಗಳು ನ್ಯಾಯಾಲಯವು ಆರ್‌ಎಸ್‌ಎಸ್ ಮೇಲಿನ ನಿಷೇಧವನ್ನು ತೆಗೆದುಹಾಕಿತು. ಆರ್‌ಎಸ್‌ಎಸ್‌ಎಸ್ ರಾಜಕೀಯೇತರ ಸಂಸ್ಥೆಗಳು. ಆದ್ದರಿಂದ ಸರ್ಕಾರಿ ನೌಕರರು ಅವರ ಚಟುವಟಿಕೆಗಳಲ್ಲಿ ಭಾಗವಹಿಸಬಹುದು. ಪೂನವಾಲಾ ಹೇಳಿದ್ದಾರೆ.

ಇದನ್ನೂ ಓದಿ: ಆರ್ಎಸ್ಎಸ್ ನಿಷೇಧಕ್ಕೆ ಸರ್ದಾರ್ ಪಟೇಲ್ ಪತ್ರ ಬರೆದಿದ್ದರು; ಮಲ್ಲಿಕಾರ್ಜುನ ಖರ್ಗೆ

ಸರ್ದಾರ್ ಪಟೇಲ್ ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣವಾಗಿ ಸಂಯೋಜಿಸಲು ಬಯಸಿದ್ದರು. ಆದರೆ ಆಗಿರುವ ಪ್ರಧಾನಿ ನೆಹರೂ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *