ಬೆಂಗಳೂರು, (ಅಕ್ಟೋಬರ್ 31):ಲಿಂಗಾಯತ ಮಠಗಳ ಒಕ್ಕೂಟದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ (ಕಣೇರಿ ಮಠ ಕಾಡಸಿದ್ದೇಶ್ವರ ಸ್ವಾಮೀಜಿ) ಮಧ್ಯಂತರ ನಿರ್ಬಂಧಕಾಜ್ಞೆ ವಿಧಿಸಿದೆ. ಮಹಾರಾಷ್ಟ್ರದಲ್ಲಿ ಲಿಂಗಾಯತ ಸ್ವಾಮೀಜಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಲಿಂಗಾಯತ ಮಠಗಳ ಒಕ್ಕೂಟ ದಾಖಲಿಸಿದ ಮಾನನಷ್ಟ ಮೊಕ್ಕದಮೆ ಅರ್ಜಿ ವಿಚಾರಣೆ ಬೆಂಗಳೂರಿನ 31ನೇ ಸಿಸಿಹೆಚ್ ಕೋರ್ಟ್, ಅವಹೇಳನಕಾರಿ ಹೇಳಿಕೆ ನೀಡದಂತೆ ಕಾಡಸಿದ್ದೇಶ್ವರ ಸ್ವಾಮೀಜಿಯನ್ನು ನಿರ್ಬಂಧಿಸಿ ಮಧ್ಯಂತರ ಆದೇಶ ಹೊರಡಿಸಿದೆ.
ಅವಹೇಳನಕಾರಿ ಹೇಳಿಕೆ ಖಂಡಿಸಿ ಲಿಂಗಾಯತ ಮಠಗಳ ಒಕ್ಕೂಟ, ಸ್ವಾಮೀಜಿ ವಿರುದ್ಧ 1 ಕೋಟಿ ರೂ. ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಅಶ್ಲೀಲ ಪದ ಪ್ರಯೋಗಿಸಿ ಲಿಂಗಾಯತ ಮತಗಳ ಒಕ್ಕೂಟಕ್ಕೆ ತೆಗಳಿದ್ದಾರೆ. ಸ್ವಾಮೀಜಿ ಹೇಳಿಕೆಯಿಂದ ಲಿಂಗಾಯತ ಮಠಗಳ ಒಕ್ಕೂಟದ ಗೌರವಕ್ಕೆ ಧಕ್ಕೆಯಾಗಿದೆ. ಇಂತಹ ಹೇಳಿಕೆ ನೀಡದಂತೆ ಸ್ವಾಮೀಜಿಗೆ ನಿರ್ಬಂಧ ವಿಧಿಸುವಂತೆ ಮನವಿ ಮಾಡಿತ್ತು. ಈ ಪ್ರಕರಣ ಸಂಬಂಧ ಒಕ್ಕೂಟದ ಪರವಾಗಿ ವಕೀಲೆ ವಿಜೇತಾ. ನಾಯ್ಕ್ ವಾದ ಮಂಡಿಸಿದರು. ಈ ವಾದ ಆಲಿಸಿದ ಬೆಂಗಳೂರಿನ 31 ನೇ ಸಿಸಿಹೆಚ್ ಕೋರ್ಟ್, ಅವಹೇಳನಕಾರಿ ಹೇಳಿಕೆ ನೀಡದಂತೆ ನಿರ್ಬಂಧಿಸಿ ಮಧ್ಯಂತರ ಆದೇಶ ನೀಡಿದ್ದು, ಈ ಬಗ್ಗೆ ಸ್ವಾಮೀಜಿಗೆ ನೋಟಿಸ್ ಜಾರಿಯಾಗಿದೆ.
ಇದನ್ನೂ ಓದಿ: ಕನ್ನೇರಿ ಶ್ರೀಗಳಿಗೆ ವಿಜಯಪುರಕ್ಕೆ ನಿರ್ಬಂಧ: ಆದೇಶ ಎತ್ತಿ ಹಿಡಿದಿದೆ
ಪ್ರಕರಣದ ಹಿನ್ನೆಲೆ
ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ನಡೆದ ಸಮಾರಂಭಕ್ಕೆ ತೆರಳಿದ್ದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಕರ್ನಾಟಕದ ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಳೆದ ಎರಡು ತಿಂಗಳಿಂದ ದೇವಾಲಯಕ್ಕೆ ಹೋಗಬೇಡಿ ಎಂದು ಪ್ರಚಾರ ಮಾಡಲಾಗುತ್ತಿದೆ. ಕೃಪಾಪೋಷಿತ ಲಿಂಗಾಯತ ಮಠಾಧೀಪತಿಗಳ ಒಕ್ಕೂಟದ ಕಲಾವಿದರು ಸೇರಿ ‘ಬಸವ ಸಂಸ್ಕೃತಿ ಅಭಿಯಾನ ಮುಖ್ಯಮಂತ್ರಿ ಎಂಬ ನಾಟಕವನ್ನು ರಾಜ್ಯಾದ್ಯಂತ ಮಾಡುತ್ತಿದ್ದಾರೆ. ಗುಡಿಯಲ್ಲಿ ದೇವರಿಲ್ಲ. ಮನೆಯ ದೇವರನ್ನು ಹೊಳೆಗೆ ಹಾಕಿ ಎನ್ನುತ್ತಿದ್ದಾರೆ. ಇವರಿಗೆ ನಾನೇ ಬುದ್ಧಿ ಹೇಳಬೇಕು ಎಂದು ಕೆಲ ಅಸಂವಿಧಾನಿಕ ಪದಗಳನ್ನು ಬಳಸಿ ಆಕ್ರೋಶ ವ್ಯಕ್ತಪಡಿಸಿದ್ದರು.
ಇದರ ವಿಜಯಪುರ ಜಿಲ್ಲಾ ಪ್ರವೇಶಕ್ಕೆ 2 ತಿಂಗಳ ನಿರ್ಬಂಧ ವಿಧಿಸಿ ನಿರ್ಬಂಧ ವಿಧಿಸಲಾಗಿದೆ. ಇದನ್ನು ಪ್ರಶ್ನಿಸಿ ಸ್ವಾಮೀಜಿ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠದ ಮೊರೆ ಹೋಗಿದ್ದರು. ಆದರೆ, ಸಾಮಾನ್ಯ ಜನರೂ ಸಹ ಸ್ವಾಮೀಜಿ ಭಾಷೆಯನ್ನು ಬಳಸುವುದಿಲ್ಲ ಎಂದು ಹೇಳಿದ್ದ ಕೋರ್ಟ್, ಆದೇಶವನ್ನು ಎತ್ತಿ ಹಿಡಿದಿತ್ತು. ಬಳಿಕ ಸ್ವಾಮೀಜಿಯಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಸಂಘದ ಸಹ ಸ್ವಾಮೀಜಿ ಮೇಲ್ಮನವಿಯನ್ನು ವಜಾಗೊಳಿಸಿತ್ತು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.