ಉತ್ತರ ಕನ್ನಡದ ನದಿ ತಿರುವು ಯೋಜನೆಗಳನ್ನ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಮನವಿ

ಉತ್ತರ ಕನ್ನಡದ ನದಿ ತಿರುವು ಯೋಜನೆಗಳನ್ನ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಮನವಿ


ಬೆಂಗಳೂರು, ಅಕ್ಟೋಬರ್ 31: ಉತ್ತರ ಕನ್ನಡ ಜಿಲ್ಲೆ ಬೇಡ್ತಿ ಮತ್ತು ಅಘನಾಶಿನಿ ಕಣಿವೆಗಳ ನದಿ ತಿರುವು ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕು. ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಅನುಮತಿ ಹಿಂಪಡೆಯಬೇಕು ಎಂದು ಒತ್ತಾಯಿಸಿ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (ಸಿದ್ದರಾಮಯ್ಯ) ಭೇಟಿಯಾಗಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಮನವಿ ಸಲ್ಲಿಸಿದೆ.

ಉತ್ತರ ಕನ್ನಡ ಜಿಲ್ಲೆ ಹತ್ತಾರು ಬೃಹತ್ ಯೋಜನೆಗಳ ಭಯದಿಂದ ನಲುಗಿ ಹೋಗಿದೆ. ಪರಿಸರ ಧಾರಣ ಸಾಮರ್ಥ್ಯ ಮುಗಿದಿದ್ದು, ಬೇಡ್ತಿ-ಅಘನಾಶಿನಿ-ಶರಾವತಿ ಯೋಜನೆಗಳು ಜಾರಿಯಾದರೆ ಭಾರಿ ಅವಘಡಗಳು ನಡೆಯುವ ಗಂಭೀರ ಪರಿಸ್ಥಿತಿ ಎದುರಾಗಿದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಿಎಂಗೆ ಮನವರಿಕೆ ಮಾಡಿದರು. ನದಿ ತಿರುವು ಯೋಜನೆಗಳನ್ನು ನಿಲ್ಲಿಸುವಂತೆ ಶಾಸಕ ಶಿವರಾಮ್ ಹೆಬ್ಬಾರ್ ಒತ್ತಾಯಿಸಿದ್ದಾರೆ, ಬೇಡ್ತಿ – ಅಘನಾಶಿನಿ – ಶರಾವತಿ ನದಿಗಳಲ್ಲಿ ನೀರಿಲ್ಲದ ಪರಿಸ್ಥಿತಿ ಬರಲಿದೆ ಎಂದು ಭೀಮಣ್ಣ ನಾಯ್ಕ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ವನವಾಸಿಗಳ ಪರಿಸ್ಥಿತಿ ವನಗಳ ನಾಶದಿಂದ ಸಂಕಷ್ಟಕ್ಕೆ ಸಿಲುಕಲಿದೆ. ನದಿ ಕಣಿವೆಗಳ ಎಲ್ಲ ಜನ ಸಮುದಾಯಗಳು, ಜೀವ ವೈವಿಧ್ಯಕ್ಕೆ ಕುತ್ತು ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಸಿಎಂ ಗಮನಕ್ಕೆ ತಂದರು.

ಇದನ್ನೂ ಓದಿ: ಅಡಿಕೆ ತೋಟದಲ್ಲಿನ ತ್ಯಾಜ್ಯಕ್ಕೂ ಬಂಗಾರದ ಬೆಲೆ ಇದೆ ಎಂದು ತೋರಿಸಿಕೊಟ್ಟ ಶಿರಸಿಯ ರೈತ ದಂಪತಿ

ಬೇಡ್ತಿ – ಅಘನಾಶಿನಿ ಸಮಿತಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಪಶ್ಚಿಮಘಟ್ಟದಲ್ಲಿ ಬೇಡ್ತಿ – ಅಘನಾಶಿನಿ – ಶರಾವತಿ ನದಿ ಯೋಜನೆಗಳನ್ನು ಸ್ಥಗಿತಗೊಳಿಸಬೇಕು. ಶಾಸಕರು, ಜನಪ್ರತಿನಿಧಿಗಳ ಸಂಘಟನೆಗಳ ಜೊತೆ ವಿಶೇಷ ಪುನರ್ ವಿಮರ್ಶೆ ಮಾಡಬೇಕೆಂದು ಮುಖ್ಯ ಮಂತ್ರಿಗಳಿಗೆ ಮನವಿ ಮಾಡಿದರು. ಸ್ವರ್ಣವಲ್ಲೀ ಸ್ವಾಮೀಜಿಯವರ ನೇತೃತ್ವದಲ್ಲಿ ಜನಾಂದೋಲನ ನಡೆಯುತ್ತಿದೆ ಎಂಬ ಸಂಗತಿಯನ್ನು ವಿ. ಎನ್. ಹೆಗಡೆ ಬೊಮ್ಮನಳ್ಳಿ ಸಿಎಂ ಗಮನಕ್ಕೆ ತಂದರು.

ಸಿಎಂ ಸಿದ್ದರಾಮಯ್ಯ ಭರವಸೆ

ಮನವಿ ಸ್ವೀಕರಿಸಿದ ಸಿದ್ದರಾಮಯ್ಯ, ಯೋಜನೆಗಳ ಕುರಿತು ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಲಾಗುವುದು. ಬಳಿಕ ತಮ್ಮೆಲ್ಲರ ಜೊತೆಗೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂಬ ಭರವಸೆ ಇದೆ. ಈ ವೇಳೆ ವೆಂಕಟೇಶ ನಾಯ್ಕ, ಬಾಲಚಂದ್ರ ಸಾಯಿಮನೆ, ಬೆಂಗಳೂರಿನ ರಮೇಶ ಭಟ್, ನರಹರಿ ಇದಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *