ಡಾರ್ಲಿಂಗ್ ಕೃಷ್ಣ ನಟನೆಯ ‘ಬ್ರ್ಯಾಟ್’ ಸಿನಿಮಾ (ಬ್ರಾಟ್ ಮೂವಿ) ಬಿಡುಗಡೆ ಆಗಿದೆ. ಅಕ್ಟೋಬರ್ 31 ರಂದು ತೆರೆಕಂಡ ಈ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಮೊದಲ ದಿನವೇ ಡಾರ್ಲಿಂಗ್ ಕೃಷ್ಣ ಅವರು ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ನೋಡಿದ್ದಾರೆ. ವೀಕ್ಷಿಸಿ ಪ್ರತಿಕ್ರಿಯೆ ಕಂಡು ಅವರಿಗೆ ಬಹಳ ಸಂತೋಷವಾಗಿದೆ. ‘ಮೊಗ್ಗಿನ ಮನಸು’, ‘ಕೃಷ್ಣ ಲೀಲಾ’, ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರಗಳ ಖ್ಯಾತಿಯ ನಿರ್ದೇಶಕ ಶಶಾಂಕ್ (ನಿರ್ದೇಶಕ ಶಶಾಂಕ್) ಅವರು ‘ಬ್ರ್ಯಾಟ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಸ್ಟೇಡಿಯಂನಲ್ಲಿ ಆರ್ಸಿಬಿ ಮ್ಯಾಚ್ ನೋಡಿ ಎಂಜಾಯ್ ಮಾಡಿದ ರೀತಿಯಲ್ಲಿ ಚಿತ್ರಮಂದಿರದಲ್ಲಿ ಈ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಫ್ಯಾಮಿಲಿ ಜೊತೆ ಬಂದು ನಮ್ಮ ಚಿತ್ರವನ್ನು ನೋಡಿ’ ಎಂದು ಡಾರ್ಲಿಂಗ್ ಕೃಷ್ಣ (ಡಾರ್ಲಿಂಗ್ ಕೃಷ್ಣ) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.