ಖ್ಯಾತ ನಿರ್ದೇಶಕ ಶಶಾಂಕ್ ಅವರು ‘ಬ್ರ್ಯಾಟ್’ (ಬ್ರಾಟ್) ಸಿನಿಮಾದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಕುರಿತ ಕಥೆಯನ್ನು ಹೇಳಿದ್ದಾರೆ. ನಟ ಡಾರ್ಲಿಂಗ್ ಕೃಷ್ಣ (ಡಾರ್ಲಿಂಗ್ ಕೃಷ್ಣ) ಅವರು ಈ ಸಿನಿಮಾದಲ್ಲಿ ಹೊಸ ಬಗೆಯ ಪಾತ್ರವನ್ನು ಮಾಡಿದ್ದಾರೆ. ನಟ ಡ್ರ್ಯಾಗನ್ ಮಂಜು ಅವರು ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ‘ಬ್ರ್ಯಾ’ ಸಿನಿಮಾಗೆ ಮೊದಲ ದಿನದಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಒಂದು ಡಿಫರೆಂಟ್ ಸಿನಿಮಾ ಮಾಡಬೇಕು ಎಂಬ ಉದ್ದೇಶದಿಂದ ನಿರ್ದೇಶಕ ಶಶಾಂಕ್ ಮತ್ತು ಡಾರ್ಲಿಂಗ್ ಕೃಷ್ಣ ಅವರು ‘ಬ್ರ್ಯಾಟ್’ ಚಿತ್ರ ಮಾಡಿದ್ದಾರೆ. ಅವರ ಪ್ರಯತ್ನವನ್ನು ಮೆಚ್ಚಿಕೊಂಡಿರುವುದು ಇಡೀ ಚಿತ್ರತಂಡಕ್ಕೆ ಖುಷಿ ನೀಡಿದೆ. ‘ಡಾರ್ಲಿಂಗ್ ಕೃಷ್ಣ ಅವರ ವೃತ್ತಿ ಜೀವನದ ದಿ ಬೆಸ್ಟ್ ಸಿನಿಮಾ ಇದು ಎಂಬ ವಿಮರ್ಶೆ ಬಂದಿದೆ’ ಎಂದು ನಿರ್ದೇಶಕ ಶಶಾಂಕ್ (ನಿರ್ದೇಶಕ ಶಶಾಂಕ್) ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.