ಸಚಿವ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆ
ಚಾಮರಾಜನಗರ, ನವೆಂಬರ್ 02: ಚಾಮರಾಜನಗರ (ಚಾಮರಾಜನಗರ) ಹಾಗೂ ಮೈಸೂರು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ (ಈಶ್ವರ ಖಂಡ್ರೆ) ಅಧ್ಯಕ್ಷತೆಯಲ್ಲಿ ಚಾಮರಾಜನಗರದ ಕೆಡಿಪಿ ಸಭಾಂಗಣದಲ್ಲಿ ಭಾನುವಾರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು, ರೈತ ಭಾಗವಹಿಸಿದ್ದರು. ಸಭೆಯಲ್ಲಿ ಯಾವ ವಿಚಾರ ಚರ್ಚೆ ಆಯ್ತು? ರೈತರ ಆಗ್ರಹಗಳೇನು? ಅಧಿಕಾರಿಗಳ ಸಲಹೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ಸಭೆ ಆರಂಭಗೊಳ್ಳುತ್ತಿದ್ದಂತೆ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶಗೊಂಡ ಸುರಿಮಳೆಗೈದರು. ಅರಣ್ಯ ಇಲಾಖೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ, ಬೇರೆ ಯಾವುದೇ ರಾಜ್ಯದಲ್ಲಿ ಇಷ್ಟು ಪ್ರಣಿ ಹಾಗೂ ಮಾನವ ಸಂಘರ್ಷವಾಗುತ್ತಿಲ್ಲ, ನಮ್ಮಲ್ಲಿ ಮಾತ್ರ ಹೆಚ್ಚಾಗಲು ಅರಣ್ಯಾಧಿಕಾರಿಗಳ ಸಂಪೂರ್ಣ ನಿರ್ಲಕ್ಷ್ಯ ಕಾರಣ ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಕಿಡಿಕಾರಿದರು.
ವೀರಪ್ಪನ್ ಇದ್ದಾಗಲೇ ಕಾಡು ಚೆನ್ನಾಗಿತ್ತು
ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಾಕಷ್ಟು ಅಕ್ರಮ ರೆಸಾರ್ಟ್ಗಳು ನಡೆಯುತ್ತಿವೆ. ವೀರಪ್ಪನ್ ಇದ್ದಾಗಲೇ ಕಾಡು ಚೆನ್ನಾಗಿತ್ತು. ಅಕ್ರಮ ಗಣಿಗಾರಿಕೆ- ರೆಸಾರ್ಟ್ಗಳು ನಡೆಯುತ್ತಿವೆ. ಅಧಿಕಾರಿ ವೀರಪ್ಪನ್ ಪರವಾಗಿಲ್ಲ ಎಂದು ಸಿಡಿಮಿಡಿಗೊಂಡ ರೈತರು, ಪ್ರಾಣಿಯಿಂದ ಮನುಷ್ಯರು ಸತ್ತ ಸಚಿವರು, ಶಾಸಕರು, ಡಿಸಿಎಫ್ಗಳ ಮೇಲೆ ಕೇಸ್ ಹಾಕಬೇಕು. ಮೊದಲೇ ಸಭೆ ನಡೆಸಿ ಸೂಕ್ತ ಕ್ರಮಕೈಗೊಂಡರೆ ಯಾವುದಾದರೂ ಸಾವು ಆಗುತ್ತಿರಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವ ಈಶ್ವರ್ ಖಂಡ್ರೆ ಹೇಳಿದ್ದಿಷ್ಟು
ರೈತರ ಮೇಲೆ ಆರೋಪ ಮಾಡಿದ ಸಚಿವ ಈಶ್ವರ್ ಖಂಡ್ರೆ, ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ, ರೆಸಾರ್ಟ್, ಅಕ್ರಮ ಕಲ್ಲು ಗಣಿಗಾರಿಕೆ ಆಗಲಿ ನಮ್ಮ ಸರ್ಕಾರಕ್ಕೆ ಅವಕಾಶ ನೀಡಿಲ್ಲ. ಸ್ಪಷ್ಟ ದೂರು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಚಾಮರಾಜನಗರ ತಮಿಳುನಾಡು ಗಡಿ ದಿಂಬಂ ಘಾಟ್ನಲ್ಲಿ ಕಾಡಾನೆ ಉಪಟಳ: ವಿಡಿಯೋ ವೈರಲ್
ಈ ಇಲಾಖೆಯಿಂದ ಇಬ್ಬರು ವ್ಯಕ್ತಿಗಳು ಸಮಿತಿಯನ್ನು ರಚಿಸಿದ್ದಾರೆ, ವನ್ಯಜೀವಿಗಳು ನಾಡಿಗೆ ಬರುತ್ತಿರುವ ಬಗ್ಗೆ ಅಧ್ಯಯನ ಮಾಡಿ ಪರಿಹಾರವನ್ನು ಪಡೆಯುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಇದರ ಜೊತೆಗೆ ಇಂದಿನ ಸಭೆಯಲ್ಲಿ ರೈತರು, ಸಾರ್ವಜನಿಕರು ಎಲ್ಲಾ ಸಲಹೆಗಳನ್ನು ಕ್ರೋಢೀಕರಿಸಿ, ಚರ್ಚಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿದರು.
ವನ್ಯಜೀವಿಯಿಂದ ಬೆಳೆ ಹಾನಿ, ಜಾನುವಾರಗಳಿಗೆ ಹಾನಿಯಾದಾಗ ಪರಿಹಾರ ಹೆಚ್ಚಿಸಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ ಅರಣ್ಯ ಇಲಾಖೆ ಇನ್ನಾದರೂ ಮಾನವ ಮತ್ತು ವನ್ಯಜೀವಿ ಸಂಘರ್ಷಕ್ಕೆ ಬ್ರೇಕ್ ಹಾಕಿ ಹುಲಿ, ಕಾಡಾನೆ ಹಾವಳಿಯಿಂದ ಜನರಿಗೆ ಅಭಯ ನೀಡಬೇಕಿದೆ.
ಇದನ್ನೂ ಓದಿ: ಮೈಸೂರಿನಲ್ಲಿ ಸೆರೆ ಸಿಕ್ಕ ಹುಲಿ; ರೈತನ ಹತ್ಯೆಗೈದ ಹುಲಿ ಇದೆನಾ?
ಇನ್ನು ಸಭೆಯಲ್ಲಿ ಸಚಿವ ಎಚ್.ಸಿ.ಮಹಾದೇವಪ್ಪ, ಕೆ.ವೆಂಕಟೇಶ್, ಶಾಸಕರು ರೈತ ಭಾಗವಹಿಸಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.